ಮೈಸೂರು: ಭಾರೀ ಕುತೂಹಲ ಕೆರಳಿಸಿದ್ದ ಮೈಸೂರು ಪಾಲಿಕೆ ಚುನಾವಣೆಗೆ ಕೊನೆಗೂ ತೆರೆ ಬಿದ್ದಿದ್ದು. ಸಾಂಸ್ಕೃತಿಕ ನಗರಿ ಮೈಸೂರು ಪಾಲಿಕೆಯ ಮೇಯರ್ ಆಗಿ ಬಿಜೆಪಿಯ ಸುನಂದಾ ನೇತ್ರಪಾಲಾ ಆಯ್ಕೆಯಾಗಿದ್ದಾರೆ. ಈ ಮೂಲಕ ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೊದಲ ಬಾರಿ ಮೇಯರ್ ಪಟ್ಟ ಅಲಂಕರಿಸುತ್ತಿದೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಜಿದ್ದಾಜಿದ್ದಿ ನಡುವೆಯೇ ಜೆಡಿಎಸ್ ನಾಮಪತ್ರ ವಾಪಸ್ ಪಡೆಯಲಿಲ್ಲ. ಕಾಂಗ್ರೆಸ್ ತಮ್ಮ ಮತಗಳನ್ನು ತಮ್ಮ ಅಭ್ಯರ್ಥಿಗೆ ಚಲಾಯಿಸಿಕೊಂಡರು. ಪಾಲಿಕೆಯಲ್ಲಿ ಬಿಜೆಪಿ ಅತಿ ಹೆಚ್ಚು ಸದಸ್ಯರ ಬಲ ಹೊಂದಿದ್ದು ಸುನಂದಾ ಪಾಲನೇತ್ರ ಆಯ್ಕೆಯಾಗಿದ್ದಾರೆ.
ಇಂದು ಮುಂಜಾನೆಯಿಂದ ಮತ ಪ್ರಕ್ರಿಯೆ ನಡೆದಿದ್ದು ಇದರಲ್ಲಿ ಬಿಜೆಪಿ ಅಭ್ಯರ್ಥಿಗೆ 26, ಜೆಡಿಎಸ್ ಹಾಗೂ ಕಾಂಗ್ರೆಸ್ ಅಭ್ಯರ್ಥಿಗೆ ತಲಾ 22 ಮತ ಚಲಾವಣೆ ಆಗಿದೆ. ಅತಿದೊಡ್ಡ ಪಕ್ಷವಾದ ಬಿಜೆಪಿ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಮೇಯರ್ ಸ್ಥಾನ ತನ್ನದಾಗಿಸಿಕೊಂಡಿದೆ.
ಇನ್ನೂ ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಗಿ ಆಯ್ಕೆಯಾದ ಸುನಂದಾ ಫಾಲನೇತ್ರ ಅವರಿಗೆ ಬಿಜೆಪಿ ನಾಯಕರು ಸೇರಿ ಗಣ್ಯರ ಅಭಿನಂದನೆಯನ್ನ ಸಲ್ಲಿಸಿದ್ದಾರೆ.