ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಯಾದ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದಲ್ಲಿ ಕಲ್ಪತರು ನಾಡು ತುಮಕೂರು ಜಿಲ್ಲೆಗೆ ಬಂಪರ್ ಕೊಡುಗೆ ನೀಡಿದ್ದು ಜಿಲ್ಲೆಯ ಇಬ್ಬರು ಶಾಸಕರು ಸಂಪುಟದಲ್ಲಿ ಸಚಿವರಾಗುವ ಮೂಲಕ ತುಮಕೂರು ಜಿಲ್ಲೆಗೆ ವರದಾನವಾಗಿದೆ.
ಇನ್ನು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಚಿಕ್ಕನಾಯಕನಹಳ್ಳಿ ಶಾಸಕರಾದ ಜೆ ಸಿ ಮಾಧುಸ್ವಾಮಿ ರವರು ಕಳೆದ ಬಾರಿ ಬಿ.ಎಸ್.ಯಡಿಯೂರಪ್ಪರವರ ಸಚಿವ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ, ಅದರ ಮುಂದುವರಿದ ಭಾಗವಾಗಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲೂ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುವಲ್ಲಿ ಅತ್ಯಂತ ಯಶಸ್ವಿಯಾಗಿದ್ದಾರೆ.
ಹಾಗೆಯೇ ತುಮಕೂರು ಜಿಲ್ಲೆಯ ತಿಪಟೂರು ಶಾಸಕರಾದ ಬಿ.ಸಿ ನಾಗೇಶ್ ರವರು ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ, ಸರಳ ಸಜ್ಜನಿಕೆಯ ವ್ಯಕ್ತಿಯೆಂದೇ ಬಿಂಬಿತವಾಗಿ ಬಿ.ಸಿ.ನಾಗೇಶ್ ರವರಿಗೆ ಈ ಭಾರಿ ಸಚಿವ ಸ್ಥಾನ ದೊರೆತಿರುವುದು ತಿಪಟೂರು ತಾಲ್ಲೂಕಿನ ಜನತೆಗೆ ಹರ್ಷದಾಯಕವನ್ನು ತಂದಿದೆ. ಈ ಮೂಲಕ ತುಮಕೂರು ಜಿಲ್ಲೆಯ ಮತ್ತೋರ್ವ ಹಿರಿಯ ಶಾಸಕ ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಯಾಗುವ ಮೂಲಕ ಜಿಲ್ಲೆಗೆ ಬಂಪರ್ ಲಾಟರಿ ಹೊಡೆದಿದೆ ಎನ್ನಬಹುದು.
ಇನ್ನು ಇಬ್ಬರು ಸಚಿವರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಬೆಂಬಲಿಗರ ಪಾಳಯದಲ್ಲಿ ಸಂತಸ ಇಮ್ಮಡಿಗೊಳಿಸಿತು ಇದರ ಮೂಲಕ ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿ ಆಗಬೇಕು ಎಂದು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.