ಕರ್ನಲ್ ಪ್ರೊ. ವೈ.ಎಸ್. ಸಿದ್ದೇಗೌಡರಿಗೆ ಪ್ರತಿಷ್ಠಿತ ಚಾಣಕ್ಯ ಪ್ರಶಸ್ತಿ

ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಕರ್ನಲ್ ಪ್ರೊ. ವೈ.ಎಸ್. ಸಿದ್ದೇಗೌಡ ಅವರಿಗೆ ಗೋವಾದ ಪ್ರತಿಷ್ಠಿತ ಪಿಆರ್‌ಸಿಐ ಮೆರಿಟೋರಿಯಸ್ ಸಂಸ್ಥೆಯು ಶ್ರೀಯುತರ ಉತ್ತಮ ಆಡಳಿತ ಸೇವೆಗಾಗಿ ಡಾ.ಬಿ.ಆರ್. ಸುದರ್ಶನ್ ರಾಷ್ಟ್ರೀಯ ಚಾಣಕ್ಯ ಪ್ರಶಸ್ತಿ ನೀಡಿ ಗೌರವಿಸಿದೆ.

ಪ್ರೊ. ವೈ.ಎಸ್. ಸಿದ್ದೇಗೌಡರು 39 ವರ್ಷಗಳ ಬೋಧನೆ ಮತ್ತು ಆಡಳಿತದಲ್ಲಿ ತೋರಿದ ಉತ್ಕೃಷ್ಟ ಸಾಧನೆಯನ್ನು ಪರಿಗಣಿಸಿ ಪ್ರಸ್ತುತ ಪ್ರಶಸ್ತಿಯನ್ನು ನೀಡಿದೆ. ಇಂದು ಗೋವಾದ ಪಣಜಿಯಲ್ಲಿ ನಡೆದ ಸಮಾರಂಭದಲ್ಲಿ ಗೋವಾದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಶಶಿಧರನ್ ಪಿಳೈ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಗಳಾಗಿ ಸೇವೆ ಸಲ್ಲಿಸುತ್ತಿರುವ ಪ್ರೊ.ವೈ.ಎಸ್. ಸಿದ್ದೇಗೌಡರು ಈ ಹಿಂದೆ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಮಾಜಕಾರ್ಯ ಪ್ರಧ್ಯಾಪಕರಾಗಿ ದೇಶದಾದ್ಯಂತ ಹೆಸರು ಮಾಡಿದ್ದಾರೆ. ಶ್ರೀಯುತರು ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾನಿಲಯ, ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯ ಹಾಗೂ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯಗಳ ಕುಲಸಚಿವರಾಗಿ ಹೊಸ ದಿಕ್ಕು ದೆಸೆಗಳನ್ನು ನೀಡಿರುತ್ತಾರೆ.      ಪ್ರೊ. ವೈ.ಎಸ್. ಸಿದ್ದೇಗೌಡರು ಭಾರತೀಯ ಸಮಾಜಕಾರ್ಯ ಮತ್ತು ಸಮಾಜಿಕ ವಿಜ್ಞಾನ ಕ್ಷೇತ್ರಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಶ್ರೀಯುತರು ವಿವಿಧ ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ನೂರಾರು ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಹಾಗೆಯೇ ವಿವಿಧ ಶೈಕ್ಷಣಿಕ ವೇದಿಕೆಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!