ಇಂದು ತುಮಕೂರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ವಿವಿಧ ಕಾಮಗಾರಿಗಳ ಸಂಬಂಧ ಶಂಕು ಸ್ಥಾಪನ ಕಾರ್ಯಕ್ರಮಕ್ಕೆ ಆಗಮಿಸಿದ್ದರು.
ಇದೆ ವೇಳೆ ತುಮಕೂರಿನ ಪ್ರವಾಸಿ ಮಂದಿರದಲ್ಲಿ ಪ್ರವಾಸಿ ಮಂದಿರದ ಮೊದಲನೇ ಅಂತಸ್ತಿನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದ ನಂತರ ಮುಖ್ಯಮಂತ್ರಿ ಬೊಮ್ಮಾಯಿ ಅವರು ಬೆಂಗಳೂರಿಗೆ ಹೊರಡುವ ವೇಳೆ ಮನವಿ ಸಲ್ಲಿಸಲು ಕಾದು ನಿಂತಿದ್ದ ಮಾದಿಗ ದಂಡೋರ ಸಮಿತಿ ಸದಸ್ಯರು ಸದಾಶಿವ ಆಯೋಗ ವರದಿ ಜಾರಿಗೊಳಿಸುವ ಸಂಬಂಧ ಮನವಿ ಸಲ್ಲಿಸಿ ಚರ್ಚೆ ನಡೆಸುವ ಸಮಯದಲ್ಲಿ ಗದ್ದಲ ನಿರ್ಮಾಣವಾಗಿ ಸದಾಶಿವ ಆಯೋಗ ವರದಿ ಕೂಡಲೇ ಜಾರಿಗೊಳಿಸಬೇಕು ಎಂದು ಮಾದಿಗ ದಂಡೋರ ಸಮಿತಿ ಸದಸ್ಯರು ಮುಖ್ಯಮಂತ್ರಿಗಳ ಮುಂದೆ ಮನವಿ ಸಲ್ಲಿಸುತ್ತಿದ್ದರು ಇದೇ ವೇಳೆ ಗದ್ದಲ ಮುಂದುವರೆದ ಸಮಯದಲ್ಲಿ ಜೆಡಿಎಸ್ ಕಾರ್ಯಕರ್ತರು ಕ್ಯಾಸಂದ್ರ ಬಳಿಯ ಚಿಕ್ಕಳ್ಳಿ ಯಲಿ ನಡೆದ ಅತ್ಯಾಚಾರ ಘಟನೆಗೆ ಸಂಬಂಧಿಸಿದಂತೆ ಮನವಿ ಸಲ್ಲಿಸಲು ಮುಂದಾದಾಗ ಮನವಿ ಸಲ್ಲಿಸಲು ಅವಕಾಶ ನೀಡಲಿಲ್ಲ ಎಂದು ಆಕ್ರೋಶಗೊಂಡ ಜೆಡಿಎಸ್ ಕಾರ್ಯಕರ್ತರು ಮುಖ್ಯಮಂತ್ರಿಗಳ ಹೊರಡುವ ವೇಳೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆಗೆ ಇಂದು ಸಾಕ್ಷಿಯಾಯಿತು.
ಮುಖ್ಯಮಂತ್ರಿಗಳು ತೆರಳಿದ ನಂತರ ಸ್ಥಳಕ್ಕೆ ಆಗಮಿಸಿದ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆದ ರಾಹುಲ್ ಕುಮಾರ್ ಶಹಪೂರ್ವಾಡ್ ರವರು ಡಿವೈಎಸ್ಪಿ ಶ್ರೀನಿವಾಸ್ ರವರು ಆಕ್ರೋಶಗೊಂಡ ಪ್ರತಿಭಟನಾಕಾರರು ಮನವೊಲಿಸಲು ಎಷ್ಟು ಪ್ರಯತ್ನ ನಡೆಸಿದರು ಮನವಿ ಸಲ್ಲಿಸಲು ಅವಕಾಶ ನೀಡಲಿಲ್ಲ ಎಂದು ಧಿಕ್ಕಾರ ಕೂಗಿದ ಜೆಡಿಎಸ್ ಕಾರ್ಯಕರ್ತರು ಇಂದಿನ ಘಟನೆಗೆ ಗ್ರಾಮಾಂತರ ಮಾಜಿ ಶಾಸಕರ ಕುಮ್ಮಕ್ಕಿನಿಂದ ಇಂದು ಮನವಿ ಸಲ್ಲಿಸಲು ಅವಕಾಶ ನೀಡಲಿಲ್ಲ ಎಂದು ಆರೋಪಿಸುತ್ತಾ ದಿಕ್ಕಾರ ಕೂಗಿದರು