ವಿದ್ಯಾರ್ಥಿಗಳ ಉಜ್ವಲ ಭವಿಷ್ಯವನ್ನು ರೂಪಿಸಲು ಕೌಶಲ್ಯ ಜ್ಞಾನ ಅಗತ್ಯ

ತುಮಕೂರು: ಇತ್ತೀಚಿನ ದಿನಗಳಲ್ಲಿ ಶಿಕ್ಷಣದ ಜೊತೆ ಕಂಪ್ಯೂಟರ್ ಜ್ಞಾನವೂ ಅವಶ್ಯಕವಾಗಿದೆ. ತಂತ್ರಜ್ಞಾನ ಮತ್ತು ಮಾಹಿತಿಯೂ ಮುಂದಿನ ದಿನಗಳಲ್ಲಿ ಅಗತ್ಯವಾಗಿದೆ. ವಿದ್ಯಾರ್ಥಿಗಳು ತಮ್ಮ ಪಠ್ಯಕ್ರಮಕ್ಕೆ ಹೆಚ್ಚುವರಿಯಾಗಿ ತಮ್ಮ ಕೌಶಲ್ಯವನ್ನು ಸುಧಾರಿಸಲು ಇಂತಹ ಕಾರ್ಯಕ್ರಮಗಳು ನಡೆಯಬೇಕು. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಆರ್- ಲಾಂಗ್ವೇಜ್‌ನ್ನು ಬಳಸಿ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಲು ತರಬೇತಿ ನೀಡಲಾಗುವುದು. ಕಂಪ್ಯೂಟಿಂಗ್, ವಿನ್ಯಾಸ ಮತ್ತು ಡೇಟಾ ವಿಶ್ಲೇಷಣೆಗೆ ಸಹಾಯ ಮಾಡಲಾಗುವುದು ಎಂದು ತುಮಕೂರಿನ ಎಸ್.ಐ.ಟಿ. ಕಾಲೇಜಿನ ಪ್ರಾಧ್ಯಾಪಕರಾದ ಡಾ.ಎನ್.ಆರ್.ಸುನೀತಾರವರು ತಿಳಿಸಿದರು.
ನಗರದ ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದಿಂದ ಆರ್-ಪ್ರೋಗ್ರಾಮಿಂಗ್ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ನರೇಂದ್ರವಿಶ್ವನಾಥ್‌ರವರು ಮಾತನಾಡುತ್ತಾ ಭಾರತ ಮತ್ತು ಚೀನಾ ತಂತ್ರಜ್ಞಾನದಲ್ಲಿ ಯಾವ ರೀತಿ ಸುಧಾರಿಸಬೇಕು ಎಂಬುದನ್ನು ವಿವರಿಸುತ್ತಾ, 1996 ರಲ್ಲಿ ಪರಿಚಯಿಸಿದ ಜಾವಾ ಭಾಷೆಯ ಆರಂಭದ ದಿನಗಳನ್ನು ನೆನಪಿಸಿಕೊಂಡು ಆರ್-ಪ್ರೋಗ್ರಾಮಿಂಗ್‌ನ ಉದ್ದೇಶಕ್ಕಾಗಿ ಆಧುನಿಕ ಭಾಷೆಗಳನ್ನು ಪರಿಣಾಮಕಾರಿಯಾಗಿ ಕಲಿಯುವಂತೆ ವಿದ್ಯಾರ್ಥಿಗಳಿಗೆ ಪ್ರೇರೇಪಿಸಿದರು. ಹಾಗೂ ಶ್ರೀದೇವಿ ಸಂಸ್ಥೆಯೂ ಇಂತಹ ಹಲವಾರು ಕಾರ್ಯಕ್ರಮಗಳ ಮೂಲಕ ಸಂಸ್ಥೆಯು ತನ್ನ ವಿದ್ಯಾರ್ಥಿಗಳ ಅಭಿವೃದ್ಧಿಗೆ ಶ್ರಮಿಸಲಿದೆ ಎಂದು ತಿಳಿಸಿದರು. ಶ್ರೀದೇವಿ ಛಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್, ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ರಾದ ಎಂ.ಎಸ್. ಪಾಟೀಲ್‌ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಪ್ರೊ.ಸಿ.ವಿ.ಷಣ್ಮುಖಸ್ವಾಮಿರವರು ಮಾತನಾಡುತ್ತಾ ಕಂಪ್ಯೂಟರ್ ಕ್ಷೇತ್ರದಿಂದ ಸಾಕಷ್ಟು ಉದ್ಯೋಗಾವಕಾಶಗಳು ಸಿಗಲಿದೆ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಯುಗದಲ್ಲಿ ಹೆಚ್ಚಿನ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಿದರೆ ಯಾವ ಕೆಲಸವಾದರೂ ಸಾಧಿಸಬಹುದು ಎಂದು ಅರ್ಥಪೂರ್ಣವಾಗಿ ವಿವರಿಸಿದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಪ್ರೊ.ಜಿ.ಎಂ.ಕಿರಣ್, ಪ್ರೊ. ಎಂ.ಎಸ್. ಚೇತನ್, ಡಾ.ಕೆ.ವಿ.ಚರಣ್ ಹಾಗೂ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಬೋಧಕ ಮತ್ತು ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!