ಬೆಂಗಳೂರು: ಇಂದಿನಿಂದ 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಹೀಗಾಗಿ ಆಡಳಿತ ಸರ್ಕಾರಕ್ಕೆ ವಿಪಕ್ಷಗಳು ಬಿಸಿ ಮುಟ್ಟಿಸಲು ಈಗಾಗಲೇ ಸಜ್ಜಾಗಿದ್ದಾರೆ. ಬೆಲೆ ಏರಿಕೆ ಖಂಡಿಸಿ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಎತ್ತಿನ ಗಾಡಿಯಲ್ಲೇ ವಿಧಾನಸೌಧಕ್ಕೆ ಆಗಮಿಸಿದ್ದಾರೆ.
ಸಿದ್ದರಾಮಯ್ಯ ಅವರು ಎತ್ತಿನ ಗಾಡಿಯಲ್ಲೇ ಹೊರಟಿದ್ದು, ಕುಮಾರಕೃಪ ಪಾರ್ಕ್ ನಲ್ಲಿರುವ ಮನೆಯಿಂದ ವಿಧಾನಸೌಧಕ್ಕೆ ಹೊರಟಿದ್ದಾರೆ. ಸ್ವತಃ ತಾವೇ ಎತ್ತಿನ ಗಾಡಿಯನ್ನು ಚಲಾಯಿಸಿಕೊಂಡು ಹೊರಟಿದ್ದಾರೆ. ಅತ್ತ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮ್ಮ ಸದಾಶಿವ ನಗರ ನಿವಾಸದಿಂದ ವಿಧಾನಸೌಧದವರೆಗೆ ಎತ್ತಿನಗಾಡಿಯಲ್ಲೇ ಬಂದಿದ್ದಾರೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಇದನ್ನು ವಿರೋಧಿಸಿ ಇಂದು ಕಾಂಗ್ರೆಸ್ ವಿಭಿನ್ನ ರೀತಿಯಲ್ಲಿ ಪ್ರತಿಭಟಿಸಲಿದೆ.