ಸಾರ್ವಜನಿಕರಿಗೆ ಶಿಸ್ತುಬದ್ಧ ಜೀವನವು ಎಷ್ಟು ಮುಖ್ಯವೋ ಸ್ವಚ್ಛತೆ ಕೂಡ ಅಷ್ಟೇ ಮುಖ್ಯ ಸ್ವಚ್ಛತೆಗೆ ಆದ್ಯತೆ ನೀಡಿದರೆ ಉತ್ತಮ ಆರೋಗ್ಯ ಹಾಗೂ ಸ್ವಾಸ್ಥ್ಯ ಜೀವನಕ್ಕೆ ಸಹಕಾರಿಯಾಗಲಿದೆ ಎಂದು ವಿದ್ಯಾರ್ಥಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ವಿದ್ಯಾಕುಮಾರಿ ಅವರು ಕರೆ ನೀಡಿದರು. ಗಾಂಧಿ ಜಯಂತಿ ಪ್ರಯುಕ್ತ ತುಮಕೂರಿನ ಬಿ.ಹೆಚ್ ರಸ್ತೆಯ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಸ್ವಚ್ಛತಾ ಅಭಿಯಾನ ಹಾಗೂ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಇದಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಸ್ವಚ್ಛತೆ ಕೂಡ ಅಷ್ಟೇ ಮುಖ್ಯ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ಉತ್ತಮ ಶಿಕ್ಷಣ ಪಡೆಯುವುದರೊಂದಿಗೆ ವಿದ್ಯಾರ್ಥಿಗಳು ಸ್ವಚ್ಛತೆಗೆ ಆದ್ಯತೆ ನೀಡಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಪ್ರೇಮರವರು ಮಾತನಾಡಿ ವಿದ್ಯಾರ್ಥಿಗಳು ತಾವು ಇರುವ ವಿದ್ಯಾರ್ಥಿನಿಲಯಗಳಲ್ಲಿ ಸ್ವಚತೆ ಕಾಪಾಡಿಕೊಳ್ಳಬೇಕು ಇಲ್ಲವಾದರೆ ಅನಾರೋಗ್ಯಕ್ಕೆ ದಾರಿ ಮಾಡಿ ಕೊಟ್ಟಂತಾಗುತ್ತದೆ ಹಾಗಾಗಿ ಸ್ವಚತೆಗೆ ಆದ್ಯತೆ ನೀಡಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ಇದೆ ಸಂದರ್ಭದಲ್ಲಿ ವಿದ್ಯಾರ್ಥಿನಿಲಯ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು. ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ನೋಡಲ್ ಅಧಿಕಾರಿ ಅರ್ಚನಾ, ತುಮಕೂರು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಿವಣ್ಣ, ಹಾಸ್ಟೆಲ್ ವಾರ್ಡನ್ ,ಹಾಸ್ಟೆಲ್ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.