ವಿದ್ಯಾರ್ಥಿಗಳು ಉತ್ತಮ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು

ತುಮಕೂರು: ಇತ್ತೀಚಿನ ದಿನಗಳಲ್ಲಿ ನರ್ಸಿಂಗ್ ವಿದ್ಯಾರ್ಥಿಗಳು, ರೋಗಿಗಳನ್ನು ಆರೈಕೆ ಮಾಡುವಾಗ ಅವರ ಸಮಸ್ಯೆಯನ್ನು ಗುರುತಿಸಿ, ಮಾನವೀಯ ನೆಲೆಗಟ್ಟಿನಲ್ಲಿ ಸೇವೆ ಮಾಡಬೇಕು, ವಿದ್ಯಾರ್ಥಿಗಳು ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ಹಾಗೂ ನರ್ಸಿಂಗ್ ಕ್ಷೇತ್ರದಲ್ಲಿ ಕಲಿಕೆಗೆ ಯಾವುದೇ ಕೊನೆಯಿಲ್ಲ ಹಾಗೂ ವಿದ್ಯಾರ್ಥಿಗಳಿಗೆ ಪ್ರೀತಿಯ ಒಲವುವನ್ನು ಸೇರಿಸಿ ರೋಗಿಗಳ ಸೇವೆ ಮಾಡಲು ಸಲಹೆ ನೀಡಬೇಕು ಎಂದರು. ವೈದ್ಯರು ಹಾಗೂ ರೋಗಿಗಳ ಮಧ್ಯೆ ಶುಶ್ರೂಷಕರು ಸೇತುವೆಯಾಗಿ ಹೇಗೆ ಕಾರ್ಯನಿರ್ವಹಿಸಬೇಕು ಎಂದು ಶ್ರೀದೇವಿ ಛಾರಿಟಬಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್‌ರವರು ತಿಳಿಸಿದರು.

ನಗರದ ಶ್ರೀದೇವಿ ನರ್ಸಿಂಗ್ ಕಾಲೇಜು ಹಾಗೂ ಶ್ರೀ ರಮಣಮಹರ್ಷಿ ನರ್ಸಿಂಗ್ ಕಾಲೇಜಿನ 2021-22 ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ನರ್ಸಿಂಗ್ ಮತ್ತು ಬಿ.ಎಸ್ಸಿ. ನರ್ಸಿಂಗ್ ವಿದ್ಯಾರ್ಥಿಗಳಿಗೆ ಜ್ಯೋತಿ ಬೆಳಗಿಸುವ ಹಾಗೂ ಪ್ರತಿಜ್ಞಾ ವಿಧಿ ಬೋಧಿಸುವ ಸಮಾರಂಭವನ್ನು ಅ.30 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀದೇವಿ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಶ್ರೀ ರಮಣ ಮಹರ್ಷಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದಯಾನಂದ್‌ರವರು ಪ್ರತಿಜ್ಞಾವಿಧಿ ಯನ್ನು ಬೋಧಿಸಿ ಮಾತನಾಡುತ್ತಾ ದ್ವೀಪ ಬೆಳಗಿಸುವುದರ ಉದ್ದೇಶವನ್ನು ಸ್ವವಿವರವಾಗಿ ವಿದ್ಯಾರ್ಥಿಗಳಿಗೆ ಪ್ರೀತಿಯ ಒಲವುವನ್ನು ಸೇರಿಸಿ ರೋಗಿಗಳ ಸೇವೆ ಮಾಡಲು ಸಲಹೆ ನೀಡಿದರು. ಸಮಾರಂಭದಲ್ಲಿ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ನಿರ್ದೇಶಕರಾದ ಡಾ.ರಮಣ್ ಎಂ ಹುಲಿನಾಯ್ಕರ್ ರವರು ಮಾತನಾಡುತ್ತಾ ಜ್ಯೋತಿ ಬೆಳಗಿಸುವುದರ ಹಿಂದಿನ ಮಹತ್ವವನ್ನು ತಿಳಿಸಿದರು. ಹಾಗೂ ಜ್ಯೋತಿ ಬೆಳಗಿಸುವ ಉದ್ದೇಶ ಕತ್ತಲಿನಿಂದ ಬೆಳಕಿನ ಕಡೆಗೆ ಹೋಗುವುದು ಅರ್ಥವೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರಿನ ಸರ್ಕಾರಿ ಕಾಲೇಜಿನ ಮಾಜಿ ಪ್ರಾಂಶುಪಾಲರಾದ ಡಾ.ಬಿ.ಟಿ.ಬಸವಂತಪ್ಪರವರು ಮಾತನಾಡುತ್ತಾ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಜ್ಯೋತಿ ಬೆಳಗಿಸಿ, ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಸ್ತುತ ಆರೋಗ್ಯದ ಕ್ಷೇತ್ರದಲ್ಲಿ ಬದಲಾವಣೆಯಾಗುತ್ತಿದ್ದು, ವೃತ್ತಿಪರದಲ್ಲಿ ನರ್ಸಿಂಗ್ ಕ್ಷೇತ್ರ ಉತ್ತಮವಾಗುತ್ತದೆ, ನರ್ಸಿಂಗ್ ವಿದ್ಯಾರ್ಥಿಗಳು ಉತ್ತಮ ಶುಶ್ರೂಷಕರಾಗಲು ಅಗತ್ಯವಾದ ಗುಣಗಳನ್ನು ಬೆಳಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಬೆಂಗಳೂರಿನ ವಿಕ್ಟೋರಿಯಾ ಸ್ಕೂಲ್ ಆಫ್ ನರ್ಸಿಂಗ್‌ನ ಮಾಜಿ ಪ್ರಾಂಶುಪಾಲರಾದ ಡಿ.ಶಿವಲಿಂಗಪ್ಪ ರವರು ಮಾತನಾಡುತ್ತಾ ನರ್ಸಿಂಗ್ ಕೋರ್ಸ್ ಮಹತ್ವ ಹಾಗೂ ಉದ್ಯೋಗದ ಬೇಡಿಕೆಯ ಬಗ್ಗೆ ಸ್ವವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಹಾಗೂ ಮೂಲಭೂತ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಹೆಚ್ಚು ಹೆಚ್ಚು ಕಲಿಕಾ ಪ್ರಯೋಗಗಳು ಒಳಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳು ಜೀವನದಲ್ಲಿ ಲಭಿಸುವ ಅವಕಾಶಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.


ಈ ಸಮಾರಂಭದಲ್ಲಿ ಕಾರ್ಯಕ್ರಮದಲ್ಲಿ ಶ್ರೀದೇವಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಆರ್.ಕೆ.ಮುನಿಸ್ವಾಮಿರವರು ಮಾತನಾಡುತ್ತಾ ವಿದ್ಯಾರ್ಥಿಗಳು ಜೀವನದಲ್ಲಿ ಲಭಿಸುವ ಅವಕಾಶಗಳನ್ನು ಸದ್ಭಳಕೆ ಮಾಡಿಕೊಂಡು, ವೃತ್ತಿ ಜೀವನದಲ್ಲಿ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುವಂತೆ ನರ್ಸಿಂಗ್ ವಿದ್ಯಾರ್ಥಿಗಳು ಉತ್ತಮ ಶುಶ್ರೂಷಕರಾಗಲು ಅಗತ್ಯವಾದ ಗುಣಗಳನ್ನು ಬೆಳಸಿಕೊಳ್ಳಬೇಕು ಹಾಗೂ ತೀವ್ರಗತಿಯ ತಾಂತ್ರಿಕ ಬದಲಾವಣೆ ಹಾಗೂ ವೈದ್ಯಕೀಯ ಉಪಕರಣಗಳ ಬದಲಾವಣೆಗಳನ್ನು ಅತ್ಯುತ್ತಮವಾದ ದಿನನಿತ್ಯದ ಕೆಲಸ ಕಾರ್ಯಗಳನ್ನು ಅಳವಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್. ಪಾಟೀಲ್, ಶ್ರೀದೇವಿ ಸಂಸ್ಥೆಯ ಆಡಳಿತಾಧಿಕಾರಿಯಾದ ಟಿ.ವಿ.ಬ್ರಹ್ಮದೇವಯ್ಯ, ಪ್ರೊ.ಈಶ್ವರಪ್ಪ, ಪ್ರೊ.ರೇವಣ್ಣ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!