ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲ ಜೀವನ್ ಮಿ?ನ್ ಯೋಜನೆಗೆ ಸಮುದಾಯದ ಸಹಕಾರ ಮುಖ್ಯ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತ ಡಾ: ಹೆಚ್.ಎಸ್. ಪ್ರಕಾಶ್ ಕುಮಾರ್ ತಿಳಿಸಿದರು.
ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸ್ನೇಹ ಜೀವನ ಫೌಂಡೇಶನ್ ಇವರ ಸಂಯುಕ್ತಾಶ್ರಯದಲ್ಲಿಂದು ಗುಬ್ಬಿ ತಾಲೂಕಿನ ನಲ್ಲೂರು ಗ್ರಾಮ ಪಂಚಾಯಿತಿಯಲ್ಲಿ ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಗ್ರಾಮ ಕ್ರಿಯಾ ಯೋಜನೆ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
’ಮನೆ ಮನೆಗೆ ಗಂಗೆ’ ಎಂಬ ಶೀರ್ಷಿಕೆಯಡಿ ಗ್ರಾಮೀಣ ಭಾಗದ ಪ್ರತಿ ಮನೆಗೆ ನಳ ಸಂರ್ಪಕ ಕಲ್ಪಿಸಿ ಶುದ್ಧ ಕುಡಿಯುವ ನೀರನ್ನು ಒದಗಿಸುವುದೇ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಗೆ ಕೇಂದ್ರದಿಂದ 37.5% ಭಾಗ, ರಾಜ್ಯ ಸರ್ಕಾರದಿಂದ 37.5% ಭಾಗ ಹಾಗೂ ಗ್ರಾಮ ಪಂಚಾಯಿತಿಯ 15ನೇ ಹಣಕಾಸು ಆಯೋಗದಿಂದ 15% ಭಾಗದ ಹಣವನ್ನು ಭರಿಸಲಾಗುತ್ತದೆ. ಉಳಿದ 10%ರ? ಭಾಗವನ್ನು ಸಮುದಾಯದವರು ಪಾವತಿಸಬೇಕು ಎಂದರು.
ಪ್ರತಿ ಮನೆಗೆ ನಳ ಸಂಪರ್ಕ ಕಲ್ಪಿಸುವುದರಿಂದ ಮಹಿಳೆಯರಿಗೆ ಅನುಕೂಲವಾಗುತ್ತದೆ. ಮನೆಯ ಮುಂದೆ ನೀರು ಬಂದರೆ ಅವರು ಯಾವಾಗ ಬೇಕಾದರೂ ಅದನ್ನು ಬಳಸಿಕೊಳ್ಳಬಹುದು. ಕೇವಲ ಮನೆಗಳಿಗೆ ಮಾತ್ರವಲ್ಲ. ಸರ್ಕಾರಿ ಕಚೇರಿಗಳು, ಶಾಲೆಗಳು, ಅಂಗನವಾಡಿ ಕೇಂದ್ರಗಳಿಗೂ ಸಹ ನಳ ಸಂಪರ್ಕ ಕಲ್ಪಿಸಲಾಗುವುದು ಎಂದರಲ್ಲದೇ ಪ್ರತಿಯೊಬ್ಬರೂ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ನಂತರ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರೊಂದಿಗೆ ಗ್ರಾಮದ ನೀರು ಮತ್ತು ನೈರ್ಮಲ್ಯ ಕುರಿತಾಗಿ ಗ್ರಾಮಸ್ಥರಿಗೆ ಜಾಗೃತಿ ಮೂಡಿಸಿ, ನೀರಿನ ಗುಣಮಟ್ಟ ಪರೀಕ್ಷಿಸುವ ಪ್ರಾಯೋಗಿಕ ವಿಧಾನವನ್ನು ಪ್ರಸ್ತುಪಡಿಸಲಾಯಿತು. ಹಾಗೂ ಇರಕಸಂದ್ರ ಗ್ರಾ.ಪಂ.ಗೆ ಭೇಟಿ ನೀಡಿ ಕಾರ್ಯಾತ್ಮಕ ನಳ ಸಂಪರ್ಕ ಅನು?ನ ಕಾಮಗಾರಿ ಪರಿವೀಕ್ಷಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧೀಕ್ಷಕ ಅಭಿಯಂತರ ನಾಗರಾಜ್, ನಿರ್ದೇಶಕ ಪರಮೇಶ್ವರ್ ಹೆಗಡೆ, ಕಾರ್ಯಪಾಲಕ ಅಭಿಯಂತರ ಮುತ್ತಪ್ಪ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನರಸಿಂಹಯ್ಯ, ಸಹಾಯಕ ಕಾರ್ಯಪಾಲಕ ಅಭಿಯಂತರ ವಾಸುದೇವ್ ಮೂರ್ತಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ, ಜಿಲ್ಲಾ ಯೋಜನಾ ವ್ಯವಸ್ಥಾಪಕ ಅರುಣ್ ಕುಮಾರ್ ಹಾಗೂ ಅನು?ನ ಬೆಂಬಲ ಸಂಸ್ಥೆಯ ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.