ಅಂತರಾಷ್ಟ್ರೀಯ ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ತಡೆ ದಿನಾಚರಣೆ

ತುಮಕೂರು : ನೆಹರು ಯುವ ಕೇಂದ್ರ ಹಾಗೂ ವಿದ್ಯೋದಯ ಕಾನೂನು ಕಾಲೇಜು ಎನ್ ಎಸ್ ಎಸ್ ಘಟಕದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದೌರ್ಜನ್ಯ ತಡೆ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು

ಈ ಕಾರ್ಯಕ್ರಮಕ್ಕೆ ಶ್ರೀಮತಿ ಶಾಂತಶ್ರೀ ಅಧೀಕ್ಷಕರು ಜಿಲ್ಲಾ ಕಾರಾಗೃಹ ತುಮಕೂರು ಇವರು ಉದ್ಘಾಟನಾ ಭಾಷಣವನ್ನು ಮಾಡಿದರು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯಗಳ ಕುರಿತು ವಿವರಿಸಿದರು ,

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಶ್ರೀಮತಿ ಕವಿತಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಾನೂನು ಸಲಹಾ ಸದಸ್ಯರು ಇವರು ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಕುರಿತು ವಿವರಿಸಿದರು ,

ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾಧ ಡಾಕ್ಟರ್ ಎ.ನಾರಾಯಣಸ್ವಾಮಿ ರವರು ಪ್ರಸ್ತುತ ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಕುರಿತು ಅಧ್ಯಕ್ಷೀಯ ನುಡಿಗಳನ್ನು ನುಡಿದರು.

ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರದ ಸದಸ್ಯರು ಹಾಗೂ ವಿದ್ಯೋದಯ ಕಾನೂನು ಕಾಲೇಜಿನ ಕಾನೂನು ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕರುಗಳು ಭಾಗವಹಿಸಿದ್ದರು

 

ವರದಿ: ಶ್ರೀನಿವಾಸ್ ಮೂರ್ತಿ

Leave a Reply

Your email address will not be published. Required fields are marked *

error: Content is protected !!