ತುಮಕೂರು_ ಸಿರಾ ನಗರ ಸಭಾ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ತೃಪ್ತಿತಂದಿದೆ ಈ ಮೂಲಕ ಜಿಲ್ಲೆಯಲ್ಲಿ ಕಾಂಗ್ರೆಸ್ ಸದೃಢವಾಗಿದೆ ಎನ್ನುವ ಸ್ಪಷ್ಟ ಸಂದೇಶ ರವಾನೆಯಾಗಿದೆ ಎಂದು ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಪ್ಪ ತಿಳಿಸಿದ್ದಾರೆ.
ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು ಶಿರಾ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚಿನ (11)ಸ್ಥಾನಗಳನ್ನು ಗೆಲ್ಲುವ ಮೂಲಕ ಅಗ್ರಸ್ಥಾನದಲ್ಲಿದೆ, ಜೆಡಿಎಸ್ 7 ಬಿಜೆಪಿ 4, ಹಾಗೂ ಸ್ವತಂತ್ರ ಅಭ್ಯರ್ಥಿಗಳು 8 ಜನ ಗೆಲ್ಲುವ ಮೂಲಕ ಬಿಜೆಪಿ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ ಎಂದರು.
ರಾಜ್ಯದಲ್ಲಿ ಬಿಜೆಪಿ ದಿನೇ ದಿನೇ ತನ್ನ ಪ್ರಾಬಲ್ಯ ಕಳೆದುಕೊಳ್ಳುತ್ತಿದ್ದು ಶಿರಾ ನಗರದಲ್ಲಿ ಶಾಸಕರು ಸಂಸದರು ವಿಧಾನ ಪರಿಷತ್ ಸದಸ್ಯರು ಸೇರಿದಂತೆ ವಿವಿಧ ನಿಗಮ ಮಂಡಳಿ ಅಧ್ಯಕ್ಷರುಗಳು ಇದ್ದರು ಸಹ ಬಿಜೆಪಿ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.
ಇನ್ನು ಮುಂಬರುವ 2023ರ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ತನ ಶಾಸಕರನ್ನು ಗೆಲ್ಲಿಸಿಕೊಳ್ಳುವ ಸ್ಪಷ್ಟ ಸಂದೇಶವನ್ನು ರವಾನಿಸಿದೆ ಎಂದರು.
ಈ ಮೂಲಕ ಶಿರಾ ನಗರಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಲು ಸಹಕರಿಸಿದ ಎಲ್ಲಾ ಮತದಾರರಿಗೂ ಕಾಂಗ್ರೆಸ್ ಪಕ್ಷದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಿದರು.
ಶಿರಾ ನಗರಸಭೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದಿಂದ ಗೆದ್ದಿರುವ 11 ಸದಸ್ಯರು ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದಿರುವ 8 ಸದಸ್ಯರು ನಮ್ಮ ಕಾಂಗ್ರೆಸ್ ಪಕ್ಷದವರೇ ಆಗಿದ್ದಾರೆ ಕಾರಣಾಂತರದಿಂದ ಸ್ವತಂತ್ರ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಲಭ್ಯವಾಗಿರಲಿಲ್ಲ ಆದರೆ ಗೆದ್ದಿರುವ ಎಲ್ಲಾ ಸದಸ್ಯರು ಕಾಂಗ್ರೆಸ್ ಪಕ್ಷದ ಸದಸ್ಯತ್ವ ಹೊಂದಿರುವವರು ಆಗಿರುವುದರಿಂದ ನಮಗೆ ಬೆಂಬಲ ನೀಡುವ ಆಶಾಭಾವನೆ ನಮಗೆ ಇದೆ ಎನ್ನುವ ಮೂಲಕ ಶಿರಾ ನಗರಸಭೆ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಸಿದ್ಧವಾಗಿದೆ ಎನ್ನುವ ಸಂದೇಶವನ್ನು ರವಾನಿಸಿದ್ದಾರೆ.
ಇನ್ನು ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮಾಧ್ಯಮ ವಕ್ತಾರರಾದ ಮುರಳಿದರ ಹಾಲಪ್ಪ, ಮುಖಂಡರಾದ ಚಂದ್ರಶೇಖರ್ ಗೌಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆಂಚಮಾರಯ್ಯ, ಮರಿ ಚನ್ನಮ್ಮ ,ಹರೀಶ್ ಸೇರಿದಂತೆ ಹಲವರು ಹಾಜರಿದ್ದರು