ತುಮಕೂರು: ತುಮಕೂರಿನ ಶ್ರೀದೇವಿ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ನ ಕೀಲು ಮತ್ತು ಮೂಳೆ ವಿಭಾಗ ವೈದ್ಯರು ಸುಮಾರು 24 ವರ್ಷದ ವ್ಯಕ್ತಿಗೆ ಅತ್ಯಂತ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನಡೆಸಿ ಸ್ವಾವಲಂಬಿಯಾಗಿ ನಡೆದಾಡುವಂತೆ ಮಾಡಿದ್ದಾರೆ.
ಮಧುಗಿರಿ ಗ್ರಾಮದ (24 ವರ್ಷದ ವ್ಯಕ್ತಿಗೆ ಸೋಂಟದ ಕೀಲು ನೋವಿನಿಂದ ಬಳಲುತ್ತಿದ್ದರು, ರಕ್ತಸಂಚಲನ ಕಡಿಮೆಯಾಗಿ ಮೂಳೆ ಮತ್ತು ಕೀಲು ಕೊಳೆಯವಂತಹ ಕಾಯಿಲೆಯಾಗಿತ್ತು. (Avascular Necrosis of Hip Joint) ಈ ವ್ಯಕ್ತಿಯು ಇತರರ ಸಹಾಯದಿಂದ ನಡೆದಾಡುತ್ತಿದ್ದರು. ಅಪರೇಷನ್ ಮಾಡಿದ ನಂತರ ತಾವೇ ನಡೆದಾಡುವಂತಾಗಿದ್ದಾರೆ.
ಶ್ರೀದೇವಿ ಆಸ್ಪತ್ರೆ ಕೀಲು ಮತ್ತು ಮೂಳೆ ವಿಭಾಗದ ತಜ್ಞ ವೈದ್ಯರುಗಳು ಸಕಲ ಪರೀಕ್ಷೆ ಮಾಡಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದರು. ರೋಗಿಯು ಸಾಮಾನ್ಯ ಶಸ್ತ್ರಚಿಕಿತ್ಸೆಗೆ ಗುಣವಾಗುವುದು ಕಷ್ಟವಾಗಿರುವುದರಿಂದ ಸೋಂಟದ ಕೀಲು ಮರುಜೋಡಣೆ ಶಸ್ತ್ರಚಿಕಿತ್ಸೆ (Un Cemented Total Hip Joint Replacement) ಮಾಡಿ, ಅತಿ ಕಡಿಮೆ ಅವಧಿಯಲ್ಲಿ ಯಶಸ್ವಿಯಾಗಿ ತಾವೇ ನಡೆದಾಡುವಂತಾಗಿದ್ದಾರೆ. ಇವರು ಸುಮಾರು ೧ ವರ್ಷಗಳ ಕಾಲ ನೋವಿನಿಂದ ಬಳಲುತ್ತಿದ್ದರು. ಅತಿ ಕಡಿಮೆ ವಯಸ್ಸಿನ ವ್ಯಕ್ತಿಗೆ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಸಿಮೆಂಟ್ ರಹಿತ ಕೀಲು ಬದಲಾವಣೆ ಮಾಡಿರುವುದು ಅತ್ಯಂತ ವಿರಳ ಮತ್ತು ಯಶಸ್ವಿ ಶಸ್ತ್ರಚಿಕಿತ್ಸೆಯಾಗಿದೆ ಎಂದು ಶ್ರೀದೇವಿ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ನ ಕೀಲು ಮತ್ತು ಮೂಳೆ ವಿಭಾಗದ ಮುಖ್ಯಸ್ಥರಾದ ಡಾ.ಬಿ.ಎಂ.ಮುರಳೀಧರ್ರವರು ತಿಳಿಸಿದರು.
ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಹೋಗಿದ್ದರೆ, ಲಕ್ಷಾಂತರ ರೂ. ಖರ್ಚು ಆಗುತ್ತಿತ್ತು, ಆದರೆ ತುಮಕೂರಿನ ಶ್ರೀದೇವಿ ಆಸ್ಪತ್ರೆಗೆ ಬಂದಿರುವುದರಿಂದ ಅತಿ ಕಡಿಮೆ ವೆಚ್ಚದಲ್ಲಿ ಶಸ್ತ್ರಚಿಕಿತ್ಸೆಯಾಗಿದೆ. ಶ್ರೀದೇವಿ ಮೆಡಿಕಲ್ ಕಾಲೇಜಿನ ವೈದ್ಯರು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಕ್ಲಿಷ್ಟಕರವಾದದನ್ನು ಸಾಧಿಸಿದ್ದಾರೆ. ತುಮಕೂರಿನ ಶಿರಾರಸ್ತೆಯಲ್ಲಿರುವ ಶ್ರೀದೇವಿ ವೈದ್ಯಕೀಯ ಕಾಲೇಜಿನಲ್ಲಿ ಅತ್ಯಾಧುನಿಕ ಸೌಲಭ್ಯಗಳಿದ್ದು, ಸಾರ್ವಜನಿಕರು ಇತಂಹ ಉಪಯೋಗವನ್ನು ಪಡೆದುಕೊಳ್ಳಬೇಕು. ಅತ್ಯಂತ ಕಡಿಮೆ ವೆಚ್ಚದಲ್ಲಿ ರೋಗಿಗಳು ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ ಎಂದು ವೈದ್ಯರು ತಿಳಿಸಿದರು.
ಶ್ರೀದೇವಿ ಆಸ್ಪತ್ರೆ ಕೀಲು ಮತ್ತು ಮೂಳೆ ವಿಭಾಗದ ಮುಖ್ಯಸ್ಥರಾದ ಡಾ.ಬಿ.ಎಂ.ಮುರಳೀಧರ್, ಡಾ. ಅಕ್ಬರ್ ಇಕ್ರಂ ಅಹಮ್ಮದ್, ಡಾ.ಅಬ್ದುಲ್ ಖಾದರ್, ಡಾ.ಕಾಂತರಾಜು, ಶ್ರೀದೇವಿ ಆಸ್ಪತ್ರೆಯ ಅರಿವಳಿಕೆ ತಜ್ಞರಾದ ವಿಭಾಗದ ಮುಖ್ಯಸ್ಥರಾದ ಡಾ.ಆರ್.ರವಿ, ಡಾ.ಎಸ್.ಪ್ರತಿಭಾ ಹಾಗೂ ಶ್ರೀದೇವಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸೇರಿದಂತೆ ಅನುಭವಿ ವೈದ್ಯರ ತಂಡ ಶಸ್ತ್ರಚಿಕಿತ್ಸೆಯಲ್ಲಿ ಪಾಲ್ಗೊಂಡಿದ್ದರು. ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್, ಶ್ರೀದೇವಿ ವೈದ್ಯಕೀಯ ನಿರ್ದೇಶಕರಾದ ಡಾ. ರಮಣ್ ಎಂ ಹುಲಿನಾಯ್ಕರ್, ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್.ಪಾಟೀಲ್ ಮತ್ತು ಶ್ರೀದೇವಿ ವೈದ್ಯಕೀಯ ಪ್ರಾಂಶುಪಾಲರಾದ ಡಾ.ಡಿ.ಕೆ.ಮಹಾಬಲರಾಜು, ಉಪಪ್ರಾಂಶುಪಾಲರಾದ ಡಾ.ರೇಖಾಗುರುಮೂರ್ತಿ ಹಾಗೂ ಶ್ರೀದೇವಿ ವೈದ್ಯಕೀಯ ಅಧೀಕ್ಷಕರಾದ ಡಾ.ಚೆನ್ನಮಲ್ಲಯ್ಯ ಮತ್ತು ವಿವಿಧ ವಿಭಾಗದ ಮುಖ್ಯಸ್ಥರು ಸಿಬ್ಬಂದಿ ವರ್ಗದವರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರನ್ನು ಅಭಿನಂದಿಸಿದ್ದರು. ಶ್ರೀದೇವಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸೇರಿದಂತೆ ಅನುಭವಿ ವೈದ್ಯರ ತಂಡ ಶಸ್ತ್ರಚಿಕಿತ್ಸೆಯಲ್ಲಿ ಪಾಲ್ಗೊಂಡಿದ್ದರು. ಹೆಚ್ಚಿನ ಮಾಹಿತಿಗಾಗಿ 0816-221199 ಸಂಪರ್ಕಿಸಬಹುದಾಗಿದೆ.