ತುಮಕೂರು_ ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಸಿಬ್ಬಂದಿಗಳ ಮೇಲಿನ ಹಲ್ಲೆ ಖಂಡಿಸಿ ತುಮಕೂರು ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ನೌಕರರ ಸಂಘದ ವತಿಯಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿ ತುಮಕೂರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಸೋಮವಾರದಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಸಿಬ್ಬಂದಿಗಳು ಒಳಚರಂಡಿ ದುರಸ್ತಿ ಕಾರ್ಯಕ್ಕೆ ಸಂಬಂಧಿಸಿದಂತೆ ಪರಿಶೀಲನೆಗೆ ತೆರಳಿದ ವೇಳೆ ಕೆಲವು ಕಿಡಿಗೇಡಿಗಳು ಸರ್ಕಾರಿ ಕೆಲಸಕ್ಕೆ ಅಡ್ಡಿ ಉಂಟು ಮಾಡಿ ವಿಜಯಪುರ ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ ಸಿಬ್ಬಂದಿ ವರ್ಗದವರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಹಾಗಾಗಿ ಕೂಡಲೇ ಹಲ್ಲೆ ಮಾಡಿದ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.
ಇಂತಹ ಘಟನೆಗಳಿಂದ ಸರ್ಕಾರಿ ಅಧಿಕಾರಿಗಳು ಮುಕ್ತ ವಾತಾವರಣದಲ್ಲಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಹಾಗಾಗಿ ಸರ್ಕಾರ ಕೂಡಲೇ ಅಧಿಕಾರಿಗಳ ರಕ್ಷಣೆಗೆ ಮುಂದಾಗಬೇಕು ಈ ಮೂಲಕ ಮುಕ್ತ ವಾತಾವರಣದಲ್ಲಿ ಅಧಿಕಾರಿಗಳು ಕೆಲಸ ನಿರ್ವಹಿಸಲು ಸರ್ಕಾರ ಮುಂದಾಗಬೇಕಾಗಿದೆ.
ಪದೇಪದೇ ಅಧಿಕಾರಿಗಳು ಹಾಗೂ ನೌಕರರ ಮೇಲೆ ಅಲ್ಲೇ ಪ್ರಕರಣದಂತಹ ಘಟನೆಗಳು ನಡೆಯುತ್ತಿರುವುದರಿಂದ ಸರ್ಕಾರಿ ನೌಕರರು ಮುಕ್ತವಾಗಿ ಸೇವೆಸಲ್ಲಿಸಲು ಸಾಧ್ಯವಾಗುತ್ತಿಲ್ಲ ಹಾಗಾಗಿ ಸರ್ಕಾರಿ ನೌಕರರು ನಿರ್ಭೀತವಾಗಿ ಸೇವೆ ಸಲ್ಲಿಸುವ ವಾತಾವರಣ ನಿರ್ಮಾಣಕ್ಕೆ ಸರ್ಕಾರ ಮುಂದಾಗಬೇಕಾಗಿದೆ ಎಂದು ಸರ್ಕಾರಕ್ಕೆ ಒತ್ತಾಯಿಸಿದರು
ಇದೇ ಸಂದರ್ಭದಲ್ಲಿ ತುಮಕೂರು ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ ,ಪಾಲಿಕೆ ಆರೋಗ್ಯ ಅಧಿಕಾರಿ ರಕ್ಷಿತ್ ಸೇರಿದಂತೆ ತುಮಕೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ನೌಕರರು ಅಪಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.