ಮೇಷ: ನಿಮ್ಮ ಸಂಗಾತಿಯ ಆರೋಗ್ಯದಲ್ಲಿ ಏರು-ಪೇರು ಸಂಭವ. ಹಣಕಾಸಿನ ಕೊರತೆಯಿಂದಾಗಿ ನೀವು ಸಮಸ್ಯೆಗಳನ್ನು ಎದುರಿಸಬಹುದು. ನಿಮ್ಮ ಪತ್ನಿಯ ಆರೋಗ್ಯದಲ್ಲಿ ಉತ್ತಮ ಕಾಳಜಿ ಅಗತ್ಯವಿದೆ. ಇತರರಿಗೆ ನಿಂದನೆ ಮಾಡುವ ನಿಮ್ಮ ಅಭ್ಯಾಸವು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು.
ವೃಷಭ: ಸಹೋದ್ಯೋಗಿಗಳಿಂದ ಮತ್ತು ಮೇಲಾಧಿಕಾರಿಗಳಿಂದ ಕೆಲಸದ ಸ್ಥಳದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನಿಮ್ಮ ಸೃಜನಶೀಲತೆಯನ್ನು ನೋಡಿ ಮೇಲಾಧಿಕಾರಿ ಸಂತೋಷವಾಗಿರುತ್ತಾರೆ, ಅದು ನಿಮಗೆ ಕೆಲಸದಲ್ಲಿ ಬಡ್ತಿ ಪ್ರಯೋಜನಗಳನ್ನು ನೀಡುತ್ತದೆ.
ಮಿಥುನ: ಆರೋಗ್ಯ ವಿಚಾರದಲ್ಲಿ ಜಾಗೃತರಾಗಿ ಇರಬೇಕು. ಹೊರಗಡೆ ಹೋಗುವಾಗ ಅದರಲ್ಲೂ ವಾಹನ ಚಾಲನೆ ವೇಳೆ ಎಚ್ಚರದಿಂದ ಇರಬೇಕು. ಸಾಗರೋತ್ತರ ವ್ಯಾಪಾರದ ಪ್ರಸ್ತಾಪ ಬರಲಿದೆ. ಆತ್ಮವಿಶ್ವಾಸದಿಂದ ಮುನ್ನುಗ್ಗಲಿದ್ದೀರಿ. ಸರ್ಕಾರಿ ಉದ್ಯಯೋಗದವರಿಗೆ ಬಡ್ತಿ ಸಿಗಲಿದೆ.
ಕಟಕ: ಅನಾವಶ್ಯಕ ಕಿರಿಕಿರಿ ಆಗಲಿದೆ. ಖಿನ್ನತೆ ಕಾಡಲಿದೆ. ಆರೋಗ್ಯ ಸಮಸ್ಯೆ ಕಾಡಲಿದೆ. ಕುಟುಂಬಸ್ಥರೊಂದಿಗೆ ಕಾಲ ಕಳೆಯುವಿರಿ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ಅತಿಯಾದ ಆತ್ಮವಿಶ್ವಾಸ ಸಂಕಟಕ್ಕೆ ಕಾರಣವಾಗಲಿದೆ. ಒತ್ತಡದಲ್ಲಿ ಕೆಲಸ ಮಾಡಬೇಕಾಗುತ್ತದೆ.
ಸಿಂಹ: ಹಣದ ಒಳಹರಿವು ಉತ್ತಮವಾಗಿರುತ್ತದೆ ಆದರೆ ವೆಚ್ಚಗಳು ಸ್ವಲ್ಪ ಹೆಚ್ಚಾಗಬಹುದು. ಕುಟುಂಬದ ಸದಸ್ಯರಿಗಾಗಿ ನಿಮ್ಮ ಬಿಡುವಿಲ್ಲದ ದಿನಚರಿಯಿಂದ ಸ್ವಲ್ಪ ಸಮಯವನ್ನು ತೆಗೆದುಕೊಳ್ಳಿ, ವಿಶೇಷವಾಗಿ ನೀವು ಮಕ್ಕಳ ಬಗ್ಗೆ ಹೆಚ್ಚು ಗಮನ ಹರಿಸಬೇಕು.
ಕನ್ಯಾ: ಹಿಂದಿನ ವೈಫಲ್ಯಗಳಿಂದ ಕಲಿಯಿರಿ ಮತ್ತು ಮುಂದುವರಿಯಿರಿ. ಹೊಸ ವರ್ಷದಲ್ಲಿ ನಿಮ್ಮ ದಿನಚರಿ ಮತ್ತು ಕೆಲಸದ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು ತರಲು ನೀವು ಮಾಡಿದ ಯೋಜನೆಗಳನ್ನು ಕಾರ್ಯಗತಗೊಳಿಸಲು ಇದು ಸರಿಯಾದ ಸಮಯ.
ತುಲಾ : ಕ್ಷುಲ್ಲಕ ಕಾರಣಕ್ಕೆ ದಂಪತಿಯ ನಡುವೆ ವಿರಸ ಉಂಟಾಗಲಿದೆ. ಇದರಿಂದ ಮಾನಸಿಕವಾಗಿ ಕುಗ್ಗಲಿದ್ದೀರಿ. ವಿದ್ಯಾರ್ಥಿಗಳು ಅಂದುಕೊಂಡ ಗುರಿಯನ್ನು ತಲುಪುವ ದಿನ ಹತ್ತಿರವಾಗಲಿದೆ. ಹೊಸ ಮನೆ ನಿರ್ಮಾಣ ಮಾಡುವ ಬಗ್ಗೆ ಚರ್ಚೆ ನಡೆಸಲಿದ್ದೀರಿ.
ವೃಶ್ಚಿಕ : ನಿರಂತರ ಪ್ರಯಾಣದಿಂದ ಆರೋಗ್ಯದ ಸಮಸ್ಯೆ ಎದುರಾಗಲಿದೆ. ಬೆಲ್ಲವನ್ನು ದಾನ ಮಾಡಿ. ಇದರಿಂದ ನಿಮ್ಮ ಕುಟುಂಬದಲ್ಲಿನ ಕಿರಿಕಿರಿಗೆ ಪರಿಹಾರ ಸಿಗಲಿದೆ. ಪೋಷಕರಿಂದ ಮಾರ್ಗದರ್ಶನ ಪಡೆದು ಉದ್ಯಮದಲ್ಲಿ ಬದಲಾವಣೆ ಮಾಡಲಿದ್ದೀರಿ.
ಧನು : ಸಹೋದರಿಯು ನಿಮ್ಮ ಆರ್ಥಿಕ ಸಂಕಷ್ಟಕ್ಕೆ ಹೆಗಲು ನೀಡಲಿದ್ದಾರೆ. ವಾಹನ ಸವಾರಿ ಮಾಡುವಾಗ ಆದಷ್ಟು ಎಚ್ಚರಿಕೆಯಿಂದಿರಿ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರಲಿ. ಪತ್ನಿಯಿಂದ ಕೊಂಚ ಕಿರಿಕಿರಿ ಇರಲಿದೆ.
ಮಕರ : ವೈವಾಹಿಕ ಸಂಬಂಧಕ್ಕೆಂದು ಅರಸುತ್ತಿರುವವರಿಗೆ ಇಂದು ಶುಭ ಸುದ್ದಿ ಕಾದಿದೆ. ವೃತ್ತಿ ಜೀವನದಲ್ಲಿ ನಿಮಗೆ ಯಶಸ್ಸು ಸಿಗಲಿದೆ. ಪದೇ ಪದೇ ಕೆಟ್ಟ ಕನಸು ಬೀಳುವುದರಿಂದ ಬೇಸತ್ತಿದ್ದೀರಾ. ಸೋಮವಾರದಂದು ಶಿವನಿಗೆ ರುದ್ರಾಭಿಷೇಕ ಮಾಡಿಸಿ. ಸಾರ್ವಜನಿಕ ಜೀವನದಲ್ಲಿ ಮೆಚ್ಚುಗೆ ಪಡೆಯುವಿರಿ.
ಕುಂಭ: ನಿಮ್ಮ ಬಾಕಿ ಇರುವ ಕಾರ್ಯಗಳು ಪೂರ್ಣಗೊಳ್ಳುವ ಸಾಧ್ಯತೆಯಿದೆ. ಕೆಲಸದ ಸ್ಥಳದಲ್ಲಿ ಕೆಲವು ಗೊಂದಲಮಯ ಮತ್ತು ಸಂದಿಗ್ಧ ಪರಿಸ್ಥಿತಿಗಳು ಕಂಡುಬರುತ್ತವೆ. ನಿಮ್ಮ ಹಿರಿಯ ಅಧಿಕಾರಿಗಳೊಂದಿಗೆ ಸಾಮರಸ್ಯವನ್ನು ಕಾಪಾಡಿಕೊಂಡರೆ ನೀವು ಉತ್ತಮವಾಗಿ ಕಾರ್ಯನಿರ್ವಹಿಸುವಿರಿ.
ಮೀನ: ಮಕ್ಕಳಿಂದ ನೋವು, ಅನಾರೋಗ್ಯ ಸಮಸ್ಯೆ, ಉದ್ಯಮ ಮತ್ತು ವ್ಯಾಪಾರದಲ್ಲಿ ನಷ್ಟ, ಕುಟುಂಬಕ್ಕೆ ಸಂಬಂಧಿಸಿದ ಪ್ರತಿಯೊಂದು ಜವಾಬ್ದಾರಿಯನ್ನು ನೀವು ಸರಿಯಾಗಿ ನಿರ್ವಹಿಸುವಿರಿ. ಆಸ್ತಿ ಅಥವಾ ರಿಯಲ್ ಎಸ್ಟೇಟ್ಗೆ ಸಂಬಂಧಿಸಿದ ಕೆಲಸ ಮಾಡುವವರು ಹೆಚ್ಚಿನ ಲಾಭವನ್ನು ಪಡೆಯುತ್ತಾರೆ.