ತುಮಕೂರು ಜಿಲ್ಲಾ ದಿನಪತ್ರಿಕೆ ಹಂಚಿಕೆದಾರರ ಸಂಘ

ತುಮಕೂರು ಜಿಲ್ಲಾ ದಿನಪತ್ರಿಕೆ ಹಂಚಿಕೆದಾರರ ಸಂಘದ ವತಿಯಿಂದ ತುಮಕೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ನಗರದ ದಿನ ಪತ್ರಿಕೆ ಹಂಚಿಕೆದಾರರಿಗೆ ನಿವೇಶನ ಕಲ್ಪಿಸಿಕೊಡುವುದಕ್ಕೆ ಹಾಗೂ 2022-23ನೇ ಸಾಲಿನ ಬಜೆಟ್‌ನಲ್ಲಿ ಪತ್ರಿಕಾ ವಿತರಕರಿಗೆ ಕ್ಷೇಮಾಭಿವೃದ್ಧಿ ನಿಧಿ ಮೀಸಲಿಡಲು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಚಿ.ನಿ. ಪುರುಷೋತ್ತಮ್, ತುಮಕೂರು ಜಿಲ್ಲಾ ದಿನಪತ್ರಿಕೆ ಹಂಚಿಕೆದಾರರ ಸಂಘದ ಗೌರವಾಧ್ಯಕ್ಷ ಟಿ.ಎಲ್.ನರಸಿಂಹಯ್ಯ, ಅಧ್ಯಕ್ಷರಾದ ಚಲುವರಾಜು, ಉಪಾಧ್ಯಕ್ಷ ರಂಗಮುತ್ತಯ್ಯ, ಕಾರ್ಯದರ್ಶಿ ವಾಸುದೇವ.ಎನ್ ಹಾಗೂ ಆನಂದ್, ನಾಗರಾಜು ಮತ್ತಿತರರಿದ್ದರು.

Leave a Reply

Your email address will not be published. Required fields are marked *

error: Content is protected !!