ತುಮಕೂರು: ಉತ್ತರ ಪ್ರದೇಶ, ಗೋವಾ, ಪಂಜಾಬ್ ಸೇರಿದಂತೆ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಗುರುವಾರ ಪ್ರಕಟವಾಗಿದ್ದು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗರಿಷ್ಠ ಸಂಖ್ಯೆಯಲ್ಲಿ ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಳ್ಳುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ ಇದರ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ತುಮಕೂರು ನಗರದ ಟೌನ್ಹಾಲ್ ವೃತ್ತದಲ್ಲಿ ಬಿ.ಜೆ.ಪಿ ಪಕ್ಷದ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
ತುಮಕೂರು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಲಕ್ಷ್ಮೀಶ್ ರವರ ನೇತೃತ್ವದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹಿಂದೂ ವಿರೋಧಿ ಹಾಗೂ ದೇಶ ವಿರೋಧಿ ಕೃತ್ಯಗಳಿಗೆ ಅದರ ವಿರುದ್ಧವಾಗಿ ಹೋರಾಡಿದ ಬಿಜೆಪಿ ಪಕ್ಷಕ್ಕೆ ಈ ಬಾರಿ ಮತದಾರರು ಓಲವು ತೋರಿದ್ದು ಈ ಮೂಲಕ ಮತದಾರರು ವಿರೋಧ ಪಕ್ಷಗಳಿಗೆ ತಕ್ಕ ಪಾಠವನ್ನು ಕಲಿಸಿದ್ದಾರೆ.
ಇನ್ನು ಮುಂದೆ ಯಾವುದೇ ಪಕ್ಷ ದೇಶ ಹಾಗೂ ಹಿಂದೂ ವಿರೋಧಿಯಾಗಿ ನಡೆದರೆ ಯಾವ ಮಟ್ಟಕ್ಕೆ ಮತದಾರರು ಬುದ್ಧಿ ಕಲಿಸುತ್ತಾರೆ ಎನ್ನುವುದು ಚುನಾವಣಾ ಫಲಿತಾಂಶದಿಂದ ಹೊರಬಿದ್ದಿದೆ ಇನ್ನು ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಹಾಗೂ ಅಮಿತ್ ಶಾ ರವರ ನೇತೃತ್ವದಲ್ಲಿ ಈ ಬಾರಿಯ ಚುನಾವಣೆ ಯಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಮಹಾಪೌರರಾದ ಬಿ.ಜಿ.ಕೃಷ್ಣಪ್ಪ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ವೈಹೆಚ್ ಹುಚ್ಚಯ್ಯ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಗುರುಪ್ರಸಾದ್, ನಂದೀಶ್, ಕೆ.ಪಿ ಮಹೇಶ್, ಮಹಿಳಾ ಘಟಕದ ಪದಾಧಿಕಾರಿಗಳು, ವಿವಿಧ ಘಟಕದ ಪದಾಧಿಕಾರಿಗಳು ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಪಕ್ಷದ ಪರ ಜಯಘೋಷ ಕೂಗಿ, ಸಿಹಿ ಹಂಚಿ ಸಂಭ್ರಮಿಸಿದರು.