ಪಾವಗಡ ಬಸ್ ದುರಂತ ದುರದೃಷ್ಟಕರ : ಆರೋಗ್ಯ ಸಚಿವ ಡಿ ಸುಧಾಕರ್

ತುಮಕೂರು_ಶನಿವಾರ ಪಾವಗಡದಲ್ಲಿ ಸಂಭವಿಸಿದ ಬಸ್ ದುರಂತ ಬಹಳ ದುರದೃಷ್ಟಕರ ಇಂತಹ ಘಟನೆ ನಡೆಯಬಾರದಿತ್ತು ಎಂದು ಆರೋಗ್ಯ ಸಚಿವ ಡಿ ಸುಧಾಕರ್ ಬೇಸರ ವ್ಯಕ್ತಪಡಿಸಿದ್ದಾರೆ.

ಸೋಮವಾರ ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವರು ಪಾವಗಡ ಬಸ್ ದುರಂತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು ಇದೇ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಆರೋಗ್ಯ ಸಚಿವರು ಪಾವಗಡ ಬಸ್ ದುರಂತದಲ್ಲಿ ಆರು ಮಂದಿ ಮೃತಪಟ್ಟಿದ್ದು ಹಲವರು ಗಾಯಗೊಂಡಿರುವ ಬೇಸರದ ಸಂಗತಿ.


ಇನ್ನು ಅಪಘಾತಕ್ಕೀಡಾಗಿರುವ ಬಸ್ ನಲ್ಲಿ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರನ್ನು ಕರೆದೊಯ್ದುಇರುವುದು ದುರಂತಕ್ಕೆ ಕಾರಣವಾಗಿದೆ ಎಂದು ಪ್ರಾರ್ಥಮಿಕ ತನಿಖೆಯಿಂದ ಮಾಹಿತಿ ಲಭ್ಯವಾಗಿದ್ದು ಇದಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆಯಲಾಗುತ್ತಿದೆ ಎಂದರು.

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ 18 ಜನ ರೋಗಿಗಳು ದಾಖಲಾಗಿದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಇನ್ನು ಕೆಲವರಿಗೆ ಮೂಳೆಮುರಿತಗಳು ಕಂಡುಬಂದಿದ್ದು ಇದಕ್ಕೆ ಸಂಬಂಧಿಸಿದಂತೆ ನಮ್ಮ ಆರೋಗ್ಯ ಸಿಬ್ಬಂದಿಗಳು ಚಿಕಿತ್ಸೆ ನೀಡಲಿದ್ದಾರೆ.

ಇನ್ನು ಆ ಭಾಗದಲ್ಲಿ ಬಸ್ನ ಸಮಸ್ಯೆ ಕೂಡ ಇತ್ತು ಎಂದು ಗಮನಕ್ಕೆ ಬಂದಿದ್ದು ಇದಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವರನ್ನು ಬೇಟಿಯಾಗಿದ್ದು ಇದಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವರು ಕ್ರಮ ಕೈಗೊಳ್ಳಲಿದ್ದಾರೆ.


ಇಂತಹ ತುರ್ತು ಸಂದರ್ಭದಲ್ಲಿ ಆರೋಗ್ಯ ಸಿಬ್ಬಂದಿಗಳು ಅಧಿಕಾರಿಗಳು ಶ್ರಮ ಹಾಕಿದ್ದು ಅವರಿಗೆ ಅಭಿನಂದನೆ ಸಲ್ಲಿಸಿದರು. ಇನ್ನು ಬೆಂಗಳೂರಿನ ವಿಕ್ಟೋರಿಯಾ, ನಿಮಾನ್ಸ್ ಹಾಗೂ ಸಂಜಯ್ ಗಾಂಧಿ ಆಸ್ಪತ್ರೆಯಲ್ಲೂ ಸಹ ಉತ್ತಮ ವೈದ್ಯಕೀಯ ಚಿಕಿತ್ಸೆಯನ್ನು ಪಾವಗಡದ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ಚಿಕಿತ್ಸೆ ನೀಡುವಲ್ಲಿ ವೈದ್ಯರು ಸೇರಿದಂತೆ ಎಲ್ಲ ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಿ ಸಮರೋಪಾದಿಯಲ್ಲಿ ಚಿಕಿತ್ಸೆ ನೀಡಿದ್ದಾರೆ.

 

ಇನ್ನು ಅಪಘಾತ ನಡೆದ ಸಂದರ್ಭದಲ್ಲಿ ಸ್ಥಳದಲ್ಲಿ ಐದು ಜನ ಮೃತಪಟ್ಟಿದ್ದು ಬೆಂಗಳೂರಿಗೆ ಮತ್ತೊಂದು ರೋಗಿಯನ್ನು ಸಾಗಿಸುವ ಸಂದರ್ಭದಲ್ಲಿ ಮತ್ತೊಬ್ಬ ರೋಗಿ ಮೃತಪಟ್ಟಿದ್ದಾರೆ.

ಮುಂದೆ ಈ ರೀತಿ ಸಮಸ್ಯೆ ಆಗದಂತೆ ಹೆಚ್ಚಿನ ಸಂಖ್ಯೆಯ ಬಸ್ ಗಳನ್ನು ನೀಡುವ ಸಂಬಂಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಇನ್ನು ವಿದ್ಯಾಭ್ಯಾಸಕ್ಕಾಗಿ ತೆರಳುತ್ತಿದ್ದ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಈ ರೀತಿ ಆಗಿರುವುದು ನಿಜಕ್ಕೂ ಎಲ್ಲರಿಗೂ ನೋವಿನ ಸಂಗತಿ ಇಂತಹ ಘಟನೆಗಳಿಂದ ವಿದ್ಯಾರ್ಥಿಗಳನ್ನು ಕಳೆದುಕೊಳ್ಳುವುದು ಸರ್ಕಾರ ಹಾಗೂ ಪೋಷಕರಿಗೂ ನೋವು ತಂದಿದೆ .ಇಂತಹ ಘಟನೆಗಳನ್ನು ನಡೆಯುವುದು ಯಾವುದೇ ಸರ್ಕಾರ ನಿರೀಕ್ಷೆ ಮಾಡುವುದಿಲ್ಲ ಇದಕ್ಕೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲಾಗುವುದು ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ವೀರಭದ್ರಯ್ಯ, ಡಾ.ಚಂದನ್ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು

Leave a Reply

Your email address will not be published. Required fields are marked *

error: Content is protected !!