ತುಮಕೂರು : ನೂತನ ಬಡಾವಣೆ ಪೊಲೀಸ್ ಠಾಣೆ (ಎನ್.ಇ.ಪಿ.ಎಸ್) ಯ ಕಟ್ಟಡ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಮತ್ತು ಗೃಹಸಚಿವ ಅರಗಜ್ಞಾನೇಂದ್ರ ರವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿಗಳಾದ ವೈ.ಎಸ್.ಪಾಟೀಲ್, ಮಹಾನಗರ ಪಾಲಿಕೆ ಮಹಾಪೌರರಾದ ಬಿ.ಜಿ.ಕೃಷ್ಣಪ್ಪ, ಸ್ಥಳೀಯ ಪಾಲಿಕ ಸದಸ್ಯರಾದ ಶ್ರೀಮತಿ ಗಿರಿಜಾ ಧನಿಯಾ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.