ತುಮಕೂರು_ಎ.ಐ ಸಿ ಸಿ ವರಿಷ್ಠ ರಾದ ರಾಹುಲ್ ಗಾಂಧಿ ಅವರು ಮಾರ್ಚ್ 31 ರಂದು ಸಂಜೆ 4ಗಂಟೆಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಬೇಟಿ ನೀಡಲಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ .ಜಿ ಪರಮೇಶ್ವರ್ ತಿಳಿಸಿದ್ದಾರೆ.
ಮಂಗಳವಾರ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು ಮಾರ್ಚ್ 31ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಹುಲ್ ಗಾಂಧಿ ಅವರು ಬೇಟಿ ನೀಡಲಿದ್ದಾರೆ ಎಂದು ತಿಳಿಸಿದ ಅವರು.
ಅಂದು ಶಿವಕುಮಾರ ಶ್ರೀಗಳ ಗದ್ದುಗೆಗೆ ಬೇಟಿ ನೀಡಿ ನಂತರ ಸಿದ್ದಗಂಗಾ ಶ್ರೀಗಳ ಬೇಟಿ ಮಾಡಿ ಆಶೀರ್ವಾದ ಪಡೆಯಲಿದ್ದಾರೆ ಎಂದು ತಿಳಿಸಿದರು.
ತುಮಕೂರಿನ ಸಿದ್ದಗಂಗಾ ಮಠ ರಾಜ್ಯ ,ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ವಾಸಿಯಾಗಿದ್ದು ಲಕ್ಷಾಂತರ ಮಕ್ಕಳಿಗೆ ಉಚಿತವಾಗಿ ವಿದ್ಯಾಭ್ಯಾಸ ಹಾಗೂ ದಾಸೋಹವನ್ನು ಮಾಡಿ ಶಿವಕುಮಾರ ಶ್ರೀಗಳು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ ಇನ್ನೂ ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.
ಇನ್ನು ಸೋನಿಯಾ ಗಾಂಧಿ ರವರು 2008 ರಲ್ಲಿ ಎ.ಐ. ಸಿ ಸಿ ಅಧ್ಯಕ್ಷರಾಗಿದ್ದ ವೇಳೆಯಲ್ಲೂ ಸಹ ಶ್ರೀ ಮಠಕ್ಕೆ ಬೇಟಿ ನೀಡಿ ಆಶೀರ್ವಾದ ಪಡೆದಿದ್ದರು. ಅದರಂತೆ ಈ ಬಾರಿಯೂ ಸಹ ಶಿವಕುಮಾರ ಶ್ರೀಗಳಿಗೆ ಗೌರವ ಸಲ್ಲಿಸುವ ಸಲುವಾಗಿ . ಎ ಐ ಸಿ ಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ರವರು ಭೇಟಿ ನೀಡಲಿದ್ದಾರೆ .
ಇನ್ನು ರಾಹುಲ್ ಗಾಂಧಿ ರವರು
ಮಠಕ್ಕೆ ಭೇಟಿ ನೀಡಲಿದ್ದು ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಇನ್ನು ಶ್ರೀಮಠಕ್ಕೆ ಹಾಗೂ ಶ್ರೀಗಳಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ರಾಹುಲ್ ಗಾಂಧಿ ಅವರು ಭೇಟಿ ನೀಡಲಿದ್ದಾರೆ. ಇನ್ನು ಅವರ ಭೇಟಿ ವೇಳೆ ಕೆ.ಪಿ
ಸಿ.ಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ , ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲೆಯ ಎಲ್ಲಾ ಹಿರಿಯ ನಾಯಕರು ಮಾಜಿ ಹಾಗೂ ಹಾಲಿ ಶಾಸಕರು ಸೇರಿದಂತೆ ಕಾರ್ಯಕರ್ತರು ಮುಖಂಡರು ಹಾಜರಿರಲಿದ್ದಾರೆ ಎಂದರು.
ಇನ್ನು ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಟಿ.ಬಿ ಜಯಚಂದ್ರ, ಮಾಜಿ ಶಾಸಕ ಕೆ ಎನ್ ರಾಜಣ್ಣ, ರಫೀಕ್ ಅಹಮದ್, ಶಫಿ ಅಹಮದ್, ವಿಧಾನಪರಿಷತ್ ಸದಸ್ಯ ರಾಜೇಂದ್ರ, ವೆಂಕಟೇಶ್, ತುಮಕೂರು ಮಹಾನಗರ ಪಾಲಿಕೆ ವಿರೋಧಪಕ್ಷದ ನಾಯಕ ಕುಮಾರ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.