ತುಮಕೂರು: ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ವಿದ್ಯಾರ್ಥಿಗಳು ಆತ್ಮವಿಶ್ವಾಸ, ಕೌಶಲ್ಯ, ಶ್ರದ್ದೆ, ಸಮಯಪ್ರಜ್ಞೆ ಇತ್ಯಾದಿಗಳ ಮೂಲಕ ಯಶಸ್ಸುನ್ನು ಸಾಧಿಸಬಹುದು. ಉತ್ತಮ ಫಲಿತಾಂಶ ಪಡೆದವರು ಉದ್ಯೋಗವನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ ಹಾಗೂ ಸಮಯಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದರೆ ಉತ್ತಮ ಗುರಿಮುಟ್ಟಲ್ಲೂ ಸಾಧ್ಯವಾಗುತ್ತದೆ. ಕೌಶಲ್ಯ ಮತ್ತು ಸಂವಹನ ಕೌಶಲ್ಯಗಳ ಅಗತ್ಯತೆಯನ್ನು ವಿದ್ಯಾರ್ಥಿಗಳಿಗೆ ಸಾಕಷ್ಟು ಮೌಲ್ಯಧಾರಿತ ಅಗತ್ಯವಾದ ವಿಷಯಗಳನ್ನು ಹಾಗೂ ವಾಣಿಜ್ಯ ಕ್ಷೇತ್ರದಲ್ಲಿ ಹೆಚ್ಚು ಹೆಚ್ಚು ಉತ್ತೇಜನ ನೀಡಲಾಗುವುದು ಎಂದು ಶ್ರೀದೇವಿ ಎಂ.ಬಿ.ಎ. ವಿಭಾಗ ಮುಖ್ಯಸ್ಥರಾದ ಡಾ.ಕೆ.ಎಸ್. ರಾಮಕೃಷ್ಣರವರು ವಿದ್ಯಾರ್ಥಿಗಳಿಗೆ ತಿಳಿಸಿದರು.
ನಗರದ ಶಿರಾರಸ್ತೆಯ ಶ್ರೀದೇವಿ ಪದವಿ ಮತ್ತು ಸ್ನಾತಕೋತ್ತರ ವಿಭಾಗದ ವತಿಯಿಂದ ಸಮಯ ಪ್ರಜ್ಞೆ ಮತ್ತು ಮೌಲ್ಯಗಳ ಬಗ್ಗೆ ವಿಶೇಷ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಶ್ರೀದೇವಿ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ಪ್ರಾಂಶುಪಾಲರಾದ ಪ್ರೊ.ಮುಭಾರಕ್ರವರು ಮಾತನಾಡುತ್ತಾ ವಿದ್ಯಾರ್ಥಿಗಳು ಸಮಯಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದರೆ ಉತ್ತಮ ಗುರಿಮುಟ್ಟಲ್ಲೂ ಸಾಧ್ಯವಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಸಂವಹನ ಕೌಶಲ್ಯದ ಬಗ್ಗೆ ಅರ್ಥಪೂರ್ಣವಾಗಿ ವಿವರಿಸಿದರು. ಹಾಗೂ ನಮ್ಮ ನಿಮ್ಮ ನಡುವೆ ಇವರು ಸಾಧಕರನ್ನು ಗುರುತಿಸಿ ನೆನಪಿನಲ್ಲಿ ಇಟ್ಟುಕೊಳ್ಳುವುದು ಉತ್ತಮ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ವಿದ್ಯಾರ್ಥಿಗಳು ಬದುಕಿನಲ್ಲಿ ಭರವಸೆ ಇದ್ದರೆ, ಭವ್ಯ ಭವಿಷ್ಯವನ್ನು ರೂಪಿಸುವ ದಾರಿ ಅವರಿಗೆ ಕಾಣಿಸುತ್ತದೆ. ಜೀವನದಲ್ಲಿ ಉತ್ಸಾಹವಿದ್ದರೆ ಕನಸನ್ನು ನನಸಾಗಿಸುವ ಬಾಗಿಲು ತಾನಾಗಿಯೇ ತೆರೆಯುತ್ತದೆ. ವಿದ್ಯಾರ್ಥಿಗಳು ಆತ್ಮಸ್ಥೈರ್ಯದಿಂದ ತಮ್ಮ ಮುಂದಿನ ಬದುಕನ್ನು ಹಸನಾಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್, ಶ್ರೀದೇವಿ ವೈದ್ಯಕೀಯ ನಿರ್ದೇಶಕರಾದ ಡಾ.ರಮಣ್ ಆರ್ ಹುಲಿನಾಯ್ಕರ್, ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್. ಪಾಟೀಲ್ರವರು ಈ ಕಾರ್ಯಕ್ರಮಕ್ಕೆ ಶುಭ ಹಾರೈಸಿದ್ದರು. ಇದೇ ಸಂದರ್ಭದಲ್ಲಿ ಅತ್ಯುತ್ತಮ ಸಮಯ ಪ್ರಜ್ಞೆ ಮತ್ತು ಮೌಲ್ಯಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದ ಶ್ರೀದೇವಿ ಎಂ.ಬಿ.ಎ. ವಿಭಾಗ ಮುಖ್ಯಸ್ಥರಾದ ಡಾ.ಕೆ.ಎಸ್. ರಾಮಕೃಷ್ಣರವರಿಗೆ ಸನ್ಮಾನಿಸಲಾಗಿತ್ತು. ಈ ಕಾರ್ಯಾಗಾರದಲ್ಲಿ ಇದೇ ಸಂದರ್ಭದಲ್ಲಿ ಶ್ರೀದೇವಿ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ಪ್ರಾಂಶುಪಾಲರಾದ ಪ್ರೊ.ಮುಭಾರಕ್, ಪ್ರೊ. ಚಂದ್ರಿಕಾ, ಪ್ರೊ. ಅಷಿಯಾಭಾನು, ಪ್ರೊ.ವತ್ಸಲ, ಪ್ರೊ.ಮೇಘಾ, ಶ್ರೀದೇವಿ ಎಂ.ಬಿ.ಎ. ವಿಭಾಗದ ಶ್ರೀಚರಣ್ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿ- ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.