ಪ್ರತಿಯೊಬ್ಬ ವಿದ್ಯಾರ್ಥಿಯೂ ಸಮಯ ಪ್ರಜ್ಞೆಯ ಅಗತ್ಯ : ಡಾ.ಕೆ.ಎಸ್.ರಾಮಕೃಷ್ಣ ಕರೆ ನೀಡಿದರು

ತುಮಕೂರು: ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ವಿದ್ಯಾರ್ಥಿಗಳು ಆತ್ಮವಿಶ್ವಾಸ, ಕೌಶಲ್ಯ, ಶ್ರದ್ದೆ, ಸಮಯಪ್ರಜ್ಞೆ ಇತ್ಯಾದಿಗಳ ಮೂಲಕ ಯಶಸ್ಸುನ್ನು ಸಾಧಿಸಬಹುದು. ಉತ್ತಮ ಫಲಿತಾಂಶ ಪಡೆದವರು ಉದ್ಯೋಗವನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ ಹಾಗೂ ಸಮಯಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದರೆ ಉತ್ತಮ ಗುರಿಮುಟ್ಟಲ್ಲೂ ಸಾಧ್ಯವಾಗುತ್ತದೆ. ಕೌಶಲ್ಯ ಮತ್ತು ಸಂವಹನ ಕೌಶಲ್ಯಗಳ ಅಗತ್ಯತೆಯನ್ನು ವಿದ್ಯಾರ್ಥಿಗಳಿಗೆ ಸಾಕಷ್ಟು ಮೌಲ್ಯಧಾರಿತ ಅಗತ್ಯವಾದ ವಿಷಯಗಳನ್ನು ಹಾಗೂ ವಾಣಿಜ್ಯ ಕ್ಷೇತ್ರದಲ್ಲಿ ಹೆಚ್ಚು ಹೆಚ್ಚು ಉತ್ತೇಜನ ನೀಡಲಾಗುವುದು ಎಂದು ಶ್ರೀದೇವಿ ಎಂ.ಬಿ.ಎ. ವಿಭಾಗ ಮುಖ್ಯಸ್ಥರಾದ ಡಾ.ಕೆ.ಎಸ್. ರಾಮಕೃಷ್ಣರವರು ವಿದ್ಯಾರ್ಥಿಗಳಿಗೆ ತಿಳಿಸಿದರು.

ಶ್ರೀದೇವಿ ಪ್ಯಾರಾಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಸಿ.ಕೃಷ್ಣರವರು ಮಾತನಾಡುತ್ತಾ ವಿದ್ಯಾರ್ಥಿಗಳು ಸಮಯಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದರೆ ಉತ್ತಮ ಗುರಿಮುಟ್ಟಲ್ಲೂ ಸಾಧ್ಯವಾಗುತ್ತದೆ. ಹಾಗೂ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಸಂವಹನ ಕೌಶಲ್ಯದ ಬಗ್ಗೆ ಅರ್ಥಪೂರ್ಣವಾಗಿ ವಿವರಿಸಿದರು.

ಕಾರ್ಯಾಗಾರದಲ್ಲಿ ಶ್ರೀದೇವಿ ಪ್ಯಾರಾಮೆಡಿಕಲ್ ಕಾಲೇಜಿನ ಉಪಪ್ರಾಂಶುಪಾಲರಾದ ಡಾ.ಸಿ.ಪಿ.ಚಂದ್ರಪ್ಪರವರು ಮಾತನಾಡುತ್ತಾ ಅವರು ವಿದ್ಯಾರ್ಥಿಗಳು ಪಡೆದಂತಹ ಪದವಿಯು ಉತ್ತಮವಾದ ರೀತಿಯಲ್ಲಿ ಕೌಶಲ್ಯಜ್ಞಾನ ಉತ್ತಮವಾಗಿರುತ್ತದೆ ಶಿಕ್ಷಣದಲ್ಲಿ ಅತಿ ಮುಖ್ಯವಾದ ಅಂಶವೆಂದರೆ ವಿವೇಕ ಮತ್ತು ವಿವೇಚನೆ ಕೂಡಿರುತ್ತದೆ. ಅಲ್ಲದೆ ಕತ್ತಲೆ ಮತ್ತು ಬೆಳಕು ಯಾವುದು ಶಾಶ್ವತವಲ, ನಮ್ಮ ನಿಮ್ಮ ನಡುವೆ ಇವರು ಸಾಧಕರನ್ನು ಗುರುತಿಸಿ ನೆನಪಿನಲ್ಲಿ ಇಟ್ಟುಕೊಳ್ಳುವುದು ಉತ್ತಮ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್, ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್. ಪಾಟೀಲ್‌ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದ್ದರು.


ಇದೇ ಸಂದರ್ಭದಲ್ಲಿ ಡಾ.ಪಾಳ್ಯ ಮೊಹಮ್ಮದ್ ಮೊಹಿದ್ದೀನ್‌ರವರು ಮಾತನಾಡುತ್ತಾ ವಿದ್ಯಾರ್ಥಿಗಳು ಬದುಕಿನಲ್ಲಿ ಭರವಸೆ ಇದ್ದರೆ, ಭವ್ಯ ಭವಿಷ್ಯವನ್ನು ರೂಪಿಸುವ ದಾರಿ ಅವರಿಗೆ ಕಾಣಿಸುತ್ತದೆ. ಜೀವನದಲ್ಲಿ ಉತ್ಸಾಹವಿದ್ದರೆ ಕನಸನ್ನು ನನಸಾಗಿಸುವ ಬಾಗಿಲು ತಾನಾಗಿಯೇ ತೆರೆಯುತ್ತದೆ. ವಿದ್ಯಾರ್ಥಿಗಳು ಆತ್ಮಸ್ಥೈರ್ಯದಿಂದ ತಮ್ಮ ಮುಂದಿನ ಬದುಕನ್ನು ಹಸನಾಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಶ್ರೀದೇವಿ ಪ್ಯಾರಾಮೆಡಿಕಲ್ ಕಾಲೇಜಿನ ಉಪನ್ಯಾಸಕಿ ಗಂಗಮ್ಮರವರು ಮಾತನಾಡುತ್ತಾ ಮಾತನಾಡುತ್ತಾ ವಿದ್ಯಾರ್ಥಿಗಳು ಈ ಕಾರ್ಯಾಗಾರವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಹಾಗೂ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸ ಬೇಕಾದ ಕೆಲಸವನ್ನು ಶಿಕ್ಷಕರು ಮಾಡಬೇಕು. ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರವೀಂದ್ರ, ದರ್ಶನ್, ಶ್ರೀಚರಣ್, ಅರ್ಪಿತಾ, ವಿನಯ್, ವರ್ಷ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿ- ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!