ತುಮಕೂರು_ತುಮಕೂರು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಮೇ 22ರಂದು ಬೃಹತ್ ಸಮಾವೇಶ ನಡೆಯಲಿದೆ ಎಂದು ತುಮಕೂರು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಅತಿಕ್ ಅಹಮದ್ ತಿಳಿಸಿದ್ದಾರೆ.
ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಮೇ 22ರಂದು ತುಮಕೂರಿನ ಅಮಾನಿಕೆರೆಯ ಗಾಜಿನ ಮನೆಯಲ್ಲಿ ಪಕ್ಷದ ವತಿಯಿಂದ ಬೃಹತ್ ಅಲ್ಪಸಂಖ್ಯಾತರ ಸಮಾವೇಶ ನಡೆಯಲಿದ್ದು ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಮಾಜಿ ಉಪಮುಖ್ಯಮಂತ್ರಿ ಡಾಕ್ಟರ್ ಜಿ ಪರಮೇಶ್ವರ್, ಮಾಜಿ ಸಚಿವ ಟಿ.ಬಿ ಜಯಚಂದ್ರ, ಯು ಟಿ ಖಾದರ್, ತನ್ವಿರ್ ಸೆಟ್, ಜಮೀರ್ ಅಹಮದ್ ವಿಧಾನಪರಿಷತ್ ಸದಸ್ಯ ಸಲೀಂ ಅಹಮದ್, ಸೇರಿದಂತೆ ಜಿಲ್ಲೆ ಹಾಗೂ ರಾಜ್ಯದ ಮಾಜಿ ಹಾಗೂ ಹಾಲಿ ಎಂಎಲ್ಎಗಳು ಎಂಎಲ್ಸಿ ಗಳು ಸೇರಿದಂತೆ, ಅಲ್ಪಸಂಖ್ಯಾತರ ಘಟಕದ ನಾಯಕರು ಸೇರಿದಂತೆ ಪಕ್ಷದ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಸಮಾವೇಶದಲ್ಲಿ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದ್ದು ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದ ಅವರು.
ಇನ್ನು ಬೃಹತ್ ಸಮಾವೇಶದಲ್ಲಿ ಜಿಲ್ಲೆ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಸಮಾವೇಶದಲ್ಲಿ ಪಕ್ಷದ ಮುಖಂಡರಾದ ನೇತೃತ್ವದಲ್ಲಿ ಪಕ್ಷ ಸಂಘಟನೆ, ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯ ದಬ್ಬಾಳಿಕೆ, ಹಾಗೂ ಅಲ್ಪಸಂಖ್ಯಾತ ಸಮುದಾಯಗಳನ್ನು ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಕೈಬಿಟ್ಟಿರುವುದು ಸೇರಿದಂತೆ ಹಲವು ಪ್ರಮುಖ ವಿಷಯಗಳೊಂದಿಗೆ ಸಮಾವೇಶದಲ್ಲಿ ಚರ್ಚೆ ನಡೆಸುವುದರೊಂದಿಗೆ ಹಿರಿಯ ನಾಯಕರಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ತುಮಕೂರು ನಗರ ಮಾಜಿ ಶಾಸಕರಾದ ಡಾಕ್ಟರ್ ರಫೀಕ್ ಅಹಮದ್, ಕಾಂಗ್ರೆಸ್ ಮುಖಂಡರಾದ ಇಕ್ಬಾಲ್ ಅಹಮದ್, ತುಮಕೂರು ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷ ನಯಾಜ್, ಥಾಮಸ್, ಬಷೀರ್ ಅಹಮದ್ ಸೇರಿದಂತೆ ಹಲವು ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.