ತುಮಕೂರು: ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಗಳಿಬ್ಬರು ಹಲ್ಲೆ ಮಾಡಿಕೊಂಡಿದ್ದು ಗಲಾಟೆಯಲ್ಲಿ ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ತುಮಕೂರು ತಾಲೂಕಿನ ನರುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶನಿವಾರ ಬೆಳಗ್ಗೆ ನಡೆದಿರುವ ಘಟನೆಯಲ್ಲಿ ನರುಗನಹಳ್ಳಿ ಗ್ರಾಮದ ನಾಗರಾಜು ಎಂಬುವರ ಮೇಲೆ ಅದೇ ಗ್ರಾಮದ ಪುಟ್ಟರಾಜು ಎಂಬುವವರು ನಾಗರಾಜು ಮೇಲೆ ಕಾರದಪುಡಿ ಎರಚಿ ಮಚ್ಚಿನಿಂದ ಹಲ್ಲೆ ಮಾಡಿದ್ದು ಕತ್ತಿನ ಭಾಗಕ್ಕೆ ಗಂಭೀರ ಗಾಯವಾಗಿದ್ದು ಘಟನೆಯನ್ನು ಕಂಡ ಸಾರ್ವಜನಿಕರು ಗಾಯಾಳುವನ್ನು ರಕ್ಷಿಸಿ, ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಇನ್ನು ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ ನಾಗರಾಜು ನನ್ನ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಬ್ಬೂರು ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ತುಮಕೂರು ಜಿಲ್ಲೆಯಲ್ಲಿ ಕ್ಷುಲಕ ಕಾರಣಗಳಿಗಾಗಿ ಹಲ್ಲೇ ಪ್ರಕರಣಗಳು ದಾಖಲಾಗುತ್ತಿದ್ದು, ಪೊಲೀಸ್ ಇಲಾಖೆಯು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಜನರ ಅಭಿಪ್ರಾಯವಾಗಿದೆ. ಅಲ್ಲದೇ ಜನರು ಸಾಮರಸ್ಯದಿಂದ ಬಾಳಲು ಶಾಂತಿ ಸಭೆಗಳು, ಸಾಮರಸ್ಯ ಸಮಾಲೋಚನೆಗಳನ್ನು ಈ ಹಿಂದೆ ಪೊಲೀಸ್ ಇಲಾಖೆಯಿಂದ ಮಾಡುತ್ತಿದ್ದರು, ಗ್ರಾಮ ಸಭೆಗಳು ನಡೆಯುತ್ತಿದ್ದವು, ಇವೆಲ್ಲವೂ ಈಗ ಮಾಡದೇ ಇರುವ ಪರಿಣಾಮ ಈ ರೀತಿಯಾದ ಪ್ರಕರಣಗಳು ದಾಖಲಾಗಲು ಕಾರಣವಾಗಿದೆಂಬುದು ಆರೋಪವಾಗಿದೆ.