ತುಮಕೂರು : ದಕ್ಷಿಣ ಕನ್ನಡದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಹಂತಕರಿಗೆ ಎನ್‌ಕೌಂಟರ್ ಮಾಡುವ ಮೂಲಕ ತಕ್ಕ ಉತ್ತರ ನೀಡಬೇಕು ಎಂದು ಕಡೂರಿನ ಕಾಳಿ ಮಠದ ಋಷಿಕುಮಾರ ಸ್ವಾಮಿಗಳು ಸರ್ಕಾರವನ್ನ ಒತ್ತಾಯಿಸಿದ್ದಾರೆ.
ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ದಕ್ಷಿಣ ಕನ್ನಡದಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟರು ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ಮಾಡಿದ ಅವರು ಮಾನವ ಸರಪಳಿ ನಿರ್ಮಿಸಿ ಮೌನಚರಣೆ ಮಾಡುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು ರಾಜ್ಯದಲ್ಲಿ ಇದುವರೆಗೂ 35ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದ್ದರೂ ಸಹ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಹಾಗಾಗಿ ಸರ್ಕಾರ ಶೀಘ್ರವಾಗಿ ಹಂತಕರನ್ನ ಬಂಧಿಸಿ ಎನ್‌ಕೌಂಟರ್ ಮಾಡಬೇಕು ಎಂದು ಸರ್ಕಾರಕ್ಕೆ ಮೂರು ದಿನಗಳ ನೀಡಿರುವ ಅವರು ಮೂರು ದಿನಗಳೊಳಗೆ ಆರೋಪಿಗಳಿಗೆ ಕಠಿಣ ಕ್ರಮ ಆಗದಿದ್ದಲ್ಲಿ ತುಮಕೂರಿನ ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಹಿಂದೂ ಕಾರ್ಯಕರ್ತರ ನೇತೃತ್ವದಲ್ಲಿ ಬೆಂಗಳೂರಿನ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಬೆಂಗಳೂರು ಚಲೋ ನಡೆಸಲಾಗುವುದು ಎಂದಿದ್ದಾರೆ.
ರಾಜ್ಯದಲ್ಲಿ ಹಲವಾರು ಹಿಂದೂ ಕಾರ್ಯಕರ್ತರ ಕಗ್ಗೊಲೆಗಳನ್ನು ನೋಡಿ ಸಾಕಾಗಿದೆ ರಾಜ್ಯದಲ್ಲಿ ಹತ್ಯೆಯಾಗಿರುವ ಎಲ್ಲಾ ಹಿಂದೂ ಕಾರ್ಯಕರ್ತರು ಅಮಾಯಕರಾಗಿದ್ದಾರೆ ಬಲಾಡ್ಯರ ಮೇಲೆ ಅವರ ಆಕ್ರೋಶವನ್ನು ಹೊರಹಾಕಲು ಕೈಲಾಗದ ಹೇಡಿಗಳು ಇಂತಹ ಹೇಗೆ ಕೃತ್ಯಗಳಿಗೆ ಇಳಿದಿದ್ದಾರೆ ಇನ್ನು ಹತ್ಯೆಕೋರರಿಗೆ ಎಚ್ಚರಿಕೆ ನೀಡಿರುವ ಅವರು ತಮಗೆ ಧೈರ್ಯವಿದ್ದರೆ ನನ್ನನ್ನು ಹತ್ಯೆ ಮಾಡಿ ಎಂದು ನೇರವಾಗಿ ಎಚ್ಚರಿಕೆಯನ್ನು ಸಹ ರವಾನಿಸಿದ್ದಾರೆ ರಾಜ್ಯದ ಮುಖ್ಯಮಂತ್ರಿಗಳು, ಗೃಹ ಸಚಿವರು, ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ರವರನ್ನು ಹತ್ಯೆ ಮಾಡಲು ಸಾಧ್ಯವಾ?ಎಂದು ಹತ್ಯೆಕೋರರನ್ನು ಪ್ರಶ್ನೆ ಮಾಡಿರುವ ಅವರು ಹತ್ಯೆ ಕೋರರ ವಿರುದ್ಧ ತೀವ್ರ ಆಕ್ರೋಶವನ್ನು ಹೊರ ಹಾಕಿದ್ದಾರೆ.
ಇನ್ನು ಪ್ರತಿಭಟನೆಯಲ್ಲಿ ಮಾತನಾಡಿರುವ ತುಮಕೂರಿನ ಬಜರಂಗದಳದ ಜಿಲ್ಲಾ ಸಂಚಾಲಕ ಮಂಜು ಭಾರ್ಗವ ಮಾತನಾಡಿದ್ದು ರಾಜ್ಯದಲ್ಲಿ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಹತ್ಯೆಗಳನ್ನ ಸಹಿಸಲಾಗುವುದಿಲ್ಲ ಕೂಡಲೇ ಸರ್ಕಾರ ತ್ವರಿತಗತಿಯಲ್ಲಿ ವಿಚಾರಣೆ ಮಾಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹತ್ಯೆ ಕೋರರನ್ನು ಗಲ್ಲಿಗೇರಿಸಬೇಕು ಈ ಮೂಲಕ ಸರ್ಕಾರ ಹಿಂದೂ ಕಾರ್ಯಕರ್ತರ ರಕ್ಷಣೆಗೆ ಮುಂದಾಗಬೇಕು ಎಂದಿದ್ದಾರೆ.
ಘಟನೆಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.