ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತುಮಕೂರು ನಗರದಲ್ಲಿ ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆಯಿಂದ ದೇಶಕ್ಕಾಗಿ ಮಹಾ ನಡಿಗೆ ವಾಕಥಾನ್ ಆಯೋಜಿಸಲಾಗಿದ್ದು ಸುಮಾರು 3000ಕ್ಕೂ ಅಧಿಕ ಮಂದಿ ರಾಷ್ಟ್ರಧ್ವಜ ಹಿಡಿದು ನಗರದ ಗಾಜಿನ ಮನೆಯವರೆಗೂ ನಡೆದು ತಮ್ಮ ರಾಷ್ಟ್ರ ಪ್ರೇಮ ಮೆರೆದರು.
ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ಹರ್ ಘರ್ ತಿರಂಗ ಕಾರ್ಯಕ್ರಮ ಆಚರಿಸಬೇಕೆಂದು ಕರೆ ನೀಡಿರುವ ಹಿನ್ನೆಲೆಯಲ್ಲಿ ತುಮಕೂರು ನಗರದ ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆಯಿಂದ ಬೃಹತ್ ವಾಕಾಥಾನ ಆಯೋಜಿಸಲಾಗಿದ್ದು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಿಂದ ಅಮಾನಿ ಕೆರೆಯ ಗಾಜಿನ ಮನೆ ಆವರಣದವರೆಗೂ ನಡಿಗೆ ಸಾಗಿತು. ಮಹಾ ನಡಿಗೆ ವಾಕಥಾನ್ ಕಾರ್ಯಕ್ರಮಕ್ಕೆ ನಗರ ಶಾಸಕ ಜ್ಯೋತಿ ಗಣೇಶ್ ಚಾಲನೆ ನೀಡಿದರು. ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಿಂದ ಪ್ರಾರಂಭಗೊಂಡ ನಡಿಗೆ ಟೌನ್ ಹಾಲ್ ವೃತ್ತ ಸ್ವಾತಂತ್ರ್ಯ ಚೌಕದ ಮೂಲಕ ಗಾಜಿನ ಮನೆ ಆವರಣವನ್ನು ತಲುಪಿತು. ಇನ್ನು ಗಾಜಿನ ಮನೆಯ ಆವರಣದಲ್ಲಿ ಘನತೆ ವಿತ್ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ರವರ ಉಪಸ್ಥಿತಿಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ಮಹಾ ನಡಿಗೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಾಪುರ್ ವಾಡ್ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆಯ ಪದಾಧಿಕಾರಿಗಳು, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ನಾಗರಿಕರು ಎನ್.ಸಿ. ಸಿ.ಕೆಡೆಟ್’ಗಳು, ಎನ್..ಎಸ್.ಎಸ್. ಸ್ವಯಂಸೇವಕರು ಉಪಸ್ಥಿತರಿದ್ದರು.