ತುಮಕೂರು_ತುಮಕೂರು ನಗರದಲ್ಲಿ ಬಹುತೇಕ ರಸ್ತೆಗಳು ಗುಂಡಿಯಿಂದ ಕೂಡಿದ್ದು ವಾಹನ ಸವಾರರಿಗೆ ತೀವ್ರ ತೊಂದರೆ ಉಂಟು ಮಾಡುತ್ತಿದ್ದರು ಸಹ ಅಧಿಕಾರಿಗಳು ರಸ್ತೆ ಸರಿಪಡಿಸಲು ಮುಂದಾಗುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಅತೀಖ್ ಅಹಮದ್ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.
ತುಮಕೂರು ನಗರದಲ್ಲಿ ಹಲವು ಬಡಾವಣೆಗಳಲ್ಲಿ ಸ್ಮಾರ್ಟ್ ಸಿಟಿ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಸಾಕಷ್ಟು ಕಾಮಗಾರಿಗಳು ನಡೆಯುತ್ತಿದ್ದರು ಬಹುತೇಕ ಕಾಮಗಾರಿಗಳು ಕಳಪೆ ಕಾಮಗಾರಿಗಳಿಂದ ಕೂಡಿವೆ ಇಂತಹ ಕಳಪೆ ಕಾಮಗಾರಿಗಳನ್ನ ಸಾರ್ವಜನಿಕರು ಸಹಿಸಲಾಗುತ್ತಿಲ್ಲ. ಕಳೆದ ಎರಡು ದಿನಗಳ ಹಿಂದೆ ತುಮಕೂರಿನ ಕೊಡಿ ಬಸವೇಶ್ವರ ವೃತ್ತದಲ್ಲಿ ರಸ್ತೆಯಲ್ಲಿ ಗುಂಡಿ ಬಿದ್ದ ಪರಿಣಾಮ ಯುವಕನೋರ್ವ ಸಾವನ್ನಪ್ಪಿದ್ದಾನೆ ಇದರ ಜೊತೆಯಲ್ಲಿ ನಗರದ ಬಹುತೇಕ ರಸ್ತೆಗಳು ಹಾಳಾಗಿ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ ಇದರ ಜೊತೆಯಲ್ಲಿ ತುಮಕೂರು ನಗರದ ಹಲವು ಬಡಾವಣೆಗಳ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ ಎಂದರು.
ಇನ್ನು ತುಮಕೂರು ನಗರದ ಕುಣಿಗಲ್ ರಸ್ತೆ , ಮೆಳೆಕೋಟೆ ಮುಖ್ಯರಸ್ತೆ ,ಗುಬ್ಬಿಗೇಟ್ ರಸ್ತೆ ಅಮಾರಜ್ಯೊತಿ ನಗರ r ಸೇರಿದಂತೆ ನಗರದ ಪ್ರಮುಖ ರಸ್ತೆಗಳು ದುಸ್ಥಿತಿ ತಲುಪಿದ್ದು ಇಂತಹ ರಸ್ತೆಗಳನ್ನ ಸರಿಪಡಿಸುವಲ್ಲಿ ಅಧಿಕಾರಿಗಳು ಶಾಸಕರು ಹಾಗೂ ಸಂಸದರು ಮುಂದಾಗುತ್ತಿಲ್ಲ ಎಂದು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ಸಂಬಂಧಪಟ್ಟ ಇಲಾಖೆಗಳು ಕೂಡಲೇ ಹಾಳಾಗಿರುವ ರಸ್ತೆಯನ್ನು ಸರಿಪಡಿಸಲು ಮುಂದಾಗದಿದ್ದರೆ ಮುಂದಿನ ದಿನದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆಯನ್ನು ಸಹ ರವಾನಿಸಿದ್ದಾರೆ.