ಲೋಕ ಅದಾಲತ್ ನಡೆಸುವುದರಿಂದ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೆ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ತುಮಕೂರು ಜಿಲ್ಲಾ ಪ್ರಧಾನ ಸತ್ರ ಮತ್ತು ಜಿಲ್ಲಾ ನ್ಯಾಯಾಧೀಶರಾದ ಶ್ರೀಮತಿ ಗೀತ ತಿಳಿಸಿದರು.
ಅವರು ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಸುದ್ದಿಗೋಷ್ಟಿಯನ್ನು ನಡೆಸಿ ಮಾತನಾಡಿ ಲೋಕ ಅದಾಲತ್ ಅಥವಾ ಜನತಾ ನ್ಯಾಯಾಲಯದ ಮೂಲ ಉದ್ದೇಶವೇ ಪಕ್ಷಗಾರರ ನಡುವೆ ರಾಜಿ ಸಂಧಾನ ಮಾಡುವ ಮೂಲಕ ಪ್ರಕರಣಗಳನ್ನು ಅತ್ಯಂತ ಶೀಘ್ರವಾಗಿ ಸೌಹಾರ್ದಯುತವಾಗಿ ಬಗೆಹರಿಸುವುದು ಹಾಗೂ ಪಕ್ಷಗಾರರ ನಡುವೆ ವೈಮನಸ್ಯ ಕಡಿಮೆ ಮಾಡಿ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸುವುದು ಎಂದು ತಿಳಿಸಿದರು.
ಈ ಹಿನ್ನೆಲೆಯಲ್ಲಿ ದಿನಾಂಕ 12.11.2022ರಂದು ತುಮಕೂರು ಜಿಲ್ಲೆಯಾದ್ಯಂತ ಎಲ್ಲ ನ್ಯಾಯಾಲಯಗಳಲ್ಲಿ ಜನತಾ ನ್ಯಾಯಾಲಯ ಅಥವಾ ಲೋಕ ಅದಾಲತ್ ನಡೆಸಲು ಉದ್ದೇಶಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.
ಸರ್ವರಿಗೂ ನ್ಯಾಯ ಎಂಬುದು ಭಾರತದ ಕಾನೂನು ಸೇವೆಗಳ ಧ್ಯೇಯವಾಗಿದೆ ಪ್ರತಿಯೊಬ್ಬ ಪ್ರಜೆಯು ತನ್ನ ಆರ್ಥಿಕ ಅಥವಾ ಇತರೆ ದೌರ್ಬಲ್ಯದ ಕಾರಣದಿಂದಾಗಿ ನ್ಯಾಯ ಪಡೆಯುವುದರಿಂದ ವಂಚಿತನಾಗಬಾರದೆಂದು ಉಚಿತ ಮತ್ತು ಸಕ್ಷಮ ಕಾನೂನು ಸೇವೆಗಳನ್ನು ಸಮಾಜದ ದುರ್ಬಲ ವರ್ಗಗಳಿಗೆ ಒದಗಿಸುವ ಸಲುವಾಗಿ ಜನತಾ ನ್ಯಾಯಾಲಯಗಳನ್ನು ವ್ಯವಸ್ಥೆ ಗೊಳಿಸಲು ಹಾಗೂ ಸಮಾನ ಅವಕಾಶಗಳ ಆಧಾರದ ಮೇಲೆ ನ್ಯಾಯಾಂಗ ವ್ಯವಸ್ಥೆ ಕಾರ್ಯನಿರ್ವಹಿಸಿ ನ್ಯಾಯ ಒದಗಿಸುವಂತೆ ಮಾಡುವ ಶ್ರೇಷ್ಠ ಉದ್ದೇಶದಿಂದ ಕಾನೂನು ಸೇವಾ ಪ್ರಾಧಿಕಾರವನ್ನು ಸ್ಥಾಪಿಸಲಾಗಿದೆ.
ಜನವಸಮಾನರಿಗೆ ಅತೀ ತ್ವರಿತ ಹಾಗೂ ವೆಚ್ಚವಿಲ್ಲದೆ ರಾಜು ಸಂಧಾನದ ಮೂಲಕ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ ಈ ಉದ್ದೇಶದಿಂದ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ ಅನ್ನು ದಿನಾಂಕ 12.11.2022 ರಂದು ಏರ್ಪಡಿಸಲು ನಿರ್ಧರಿಸಿದ್ದು ಸದರಿ ರಾಷ್ಟ್ರೀಯ ಲೋಕದಲಿ ಎಲ್ಲ ರೀತಿಯ ರಾಜಿ ಆಗಬಹುದಾದ ವ್ಯಾಜ್ಯಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗುತ್ತದೆ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರ ನಿರ್ದೇಶನದಂತೆ ಜಿಲ್ಲಾ ಕಾನೂನು ಸವಿಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ವತಿಯಿಂದ ಕಾಯಂ ಜನತಾ ನ್ಯಾಯಾಲಯಗಳಲ್ಲಿ ಈ ಲೋಕ ಅದಾಲತ್ ನಡೆಸಲಾಗುವುದು.
ಚೆಕ್ಕು ಅಮಾನ್ಯದ ಪ್ರಕರಣಗಳು ಬ್ಯಾಂಕ್ ವಸೂಲಾತಿ ಪ್ರಕರಣ ಕಾರ್ಮಿಕ ವಿವಾದಗಳು ವಿದ್ಯುತ್ ಹಾಗು ನೀರಿನ ಶುಲ್ಕಗಳು ಈ ರೀತಿಯಾದ ವ್ಯಾಜ್ಯ ಪೂರ್ವ ಪ್ರಕರಣಗಳು ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ಮೋಟಾರ್ ಅಪಘಾತ ಪರಿಹಾರ ವೈವಾಹಿಕ ಕುಟುಂಬ ನ್ಯಾಯಾಲಯದ ಪ್ರಕರಣ ಭೂಸ್ವಾಧೀನ ಪ್ರಕರಣಗಳು ವೇತನ ಮತ್ತು ಬತ್ತಿಗೆ ಸಂಬಂಧಿಸಿದ ಪ್ರಕರಣಗಳು ಕಂದಾಯ ಪ್ರಕರಣಗಳು ಸಿವಿಲ್ ಪ್ರಕರಣಗಳಂತಹ ಪ್ರಕರಣಗಳು ಲೋಕ ಅದಾಲತ್ ವ್ಯಾಪ್ತಿಗೆ ಬರುತ್ತವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ನೂರುನ್ನಿಸ್ಸಾ ಉಪಸ್ಥಿತರಿದ್ದರು.