ತುಮಕೂರು_2023ರ ಚುನಾವಣೆ ಸಂಬಂಧ ತುಮಕೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಆಕಾಂಕ್ಷಿ ಯಾದ ತುಮಕೂರು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷರಾದ ಅತಿಕ್ ಅಹಮದ್ ರವರು ಕೆಪಿಸಿಸಿ ಕಚೇರಿಗೆ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು 2013 ಹಾಗೂ 2018ರ ಚುನಾವಣೆಗೂ ಸಹ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದು ಕೊನೆ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿತ್ತು, ಆದರೆ ಪಕ್ಷದ ಕಾರ್ಯ ಚಟುವಟಿಕೆಯಲ್ಲಿ ಸಕ್ರಿಯನಾಗಿ ಪಾಲ್ಗೊಂಡಿರುವ ನಾನು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಘಟಿಸುವಲ್ಲಿ ಸಾಕಷ್ಟು ಕೆಲಸ ಮಾಡಿದ್ದು ಈ ಬಾರಿ ಕಾಂಗ್ರೆಸ್ ಪಕ್ಷದಿಂದ ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಅರ್ಜಿ ಸಲ್ಲಿಸಿದ್ದು ಈ ಬಗ್ಗೆ ಪಕ್ಷದ ವರಿಷ್ಠರು ನನಗೆ ಟಿಕೆಟ್ ನೀಡುವ ಬಗ್ಗೆ ಅಭಿಮತವನ್ನು ವ್ಯಕ್ತಪಡಿಸಿದ್ದಾರೆ.
ಕಳೆದ ಬಾರಿಯ ಚುನಾವಣೆಯಲ್ಲಿ ಮಾಜಿ ಶಾಸಕರಾಗಿದ್ದ ರಫೀಕ್ ಅಹಮದ್ ರವರು ಚುನಾವಣೆಯಲ್ಲಿ ಟಿಕೆಟ್ ಪಡೆದು ಸ್ಪರ್ಧಿಸಿದರು ಆ ಸಂದರ್ಭದಲ್ಲಿ ಪಕ್ಷದ ವರಿಷ್ಠರು ಹೇಳಿದ ಮಾತಿಗೆ ಚಾಚು ತಪ್ಪದೇ ಕೆಲಸ ನಿರ್ವಹಿಸುತ್ತಾ ಪಕ್ಷದ ನಿಯಮದಂತೆ ಇಲ್ಲಿಯವರೆಗೂ ಕೆಲಸ ನಿರ್ವಹಿಸಿದ್ದು ಜಿಲ್ಲೆ ಹಾಗೂ ನಗರದಾದ್ಯಂತ ಪಕ್ಷವನ್ನ ಸಂಘಟಿಸಿದ್ದೇನೆ ಇನ್ನು ಕಳೆದ ಮೇ ತಿಂಗಳಲ್ಲಿ ತುಮಕೂರು ನಗರದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಬೃಹತ್ ಸಮಾವೇಶವನ್ನು ಸಹ ಆಯೋಜಿಸಿ ಯಶಸ್ವಿಯಾಗಿ ಕಾರ್ಯಕ್ರಮ ನಡೆಸಿರುವ ಬಗ್ಗೆ ಮಾಹಿತಿ ತಿಳಿಸಿದರು.
ಇನ್ನುಳಿದಂತೆ ತುಮಕೂರು ನಗರ ಮತ್ತು ಜಿಲ್ಲಾ ಕಾಂಗ್ರೆಸ್ ನಲ್ಲಿ ನಾನು ಹೆಚ್ಚಾಗಿ ಗುರತಿಸಿಕೊಂಡಿದ್ದು, ನಮ್ಮ ಪಕ್ಷದ ಎಲ್ಲಾ ಮುಖಂಡರೊಂದಿಗೆ ನಿಕಟ ಸಂಪರ್ಕವನ್ನು ಹಾಗೂ ವಿಶ್ವಾಸವನ್ನುಗಳಿಸಿದ್ದೇನೆ, ಅದರೊಂದಿಗೆ ಎಲ್ಲರ ಬೆಂಬಲವೂ ಸಹ ನನಗೆ ಸಿಕ್ಕಿದ್ದು ನನ್ನ ಸುದೈವವಾಗಿದೆಂದು ತಿಳಿಸಿದರು. ಜೊತೆಗೆ ನಾನು ಮುಂದಿನ ವಾರದಿಂದ ತುಮಕೂರು ನಗರದ ಎಲ್ಲಾ ವಾರ್ಡುಗಳಲ್ಲಿ ಚುನಾವಣೆಯ ಕಾರ್ಯಚಟುವಟಿಕೆಯನ್ನೂ ಸಹ ಮಾಡಲಿದ್ದು, ಇದರೊಂದಿಗೆ ಪಕ್ಷಕ್ಕೆ ಇನ್ನಷ್ಟು ಬಲವನ್ನು ತುಂಬಿಸುವ ಕಾರ್ಯವನ್ನು ಮಾಡುತ್ತೇನೆ ಅದರೊಂದಿಗೆ ತುಮಕೂರು ನಗರದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದಾಗಿ ತಿಳಿಸಿದರು.
ತುಮಕೂರು ಜಿಲ್ಲೆಯ ಎಲ್ಲಾ 11 ವಿಧಾನಸಭಾ ಕ್ಷೇತ್ರಗಳನ್ನು ಸಹ ಪಕ್ಷವನ್ನ ಸಂಘಟಿಸುವ ಸಲುವಾಗಿ ಕೆಲಸ ನಿರ್ವಹಿಸಿದ್ದು ಪಕ್ಷದ ಚೌಕಟ್ಟಿನಲ್ಲಿ ಯಾವುದೇ ಲೋಪದೋಷ ಬಾರದಂತೆ ಕಾಂಗ್ರೆಸ್ ಪಕ್ಷದಿಂದ ಸಾಕಷ್ಟು ಹೋರಾಟಗಳನ್ನು ಸಹ ಮಾಡಿದ್ದು ತುಮಕೂರು ನಗರವನ್ನ ಮಾದರಿ ನಗರವನ್ನಾಗಿ ಮಾಡಬೇಕು ಎನ್ನುವುದು ನನ್ನ ಮೂಲ ಉದ್ದೇಶ ಹಾಗಾಗಿ ತುಮಕೂರು ನಗರದಲ್ಲಿ ಸಾರ್ವಜನಿಕರಿಗೆ ಉತ್ತಮ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಜೊತೆಗೆ ಯುವ ಸಮೂಹವನ್ನು ಸಂಘಟಿಸಿ ಸ್ಥಳೀಯವಾಗಿರುವ ಕಾರ್ಖಾನೆಗಳು ಹಾಗೂ ಕಂಪನಿಗಳನ್ನು ಬಳಸಿಕೊಂಡು ಯುವ ಸಮುದಾಯಕ್ಕೆ ಉದ್ಯೋಗ ಕಲ್ಪಿಸಿ ಕೊಡಬೇಕು ಎಂಬುದು ನನ್ನ ಮೊದಲ ಆದ್ಯತೆ ಹಾಗಾಗಿ ಈ ಬಾರಿ ಪಕ್ಷದ ವರಿಷ್ಠರು ತಮಗೆ ಟಿಕೆಟ್ ಭರವಸೆ ಇದ್ದು ಮುಂಬರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಕೋಮು ಸೌಹಾರ್ದತೆ ಕಾಪಾಡಲು ಒತ್ತು.
ಕೋವಿಡ್ ನಂತರದ ಬದಲಾದ ಸನ್ನಿವೇಶದಲ್ಲಿ ಸಾಕಷ್ಟು ವಿಚಾರಗಳನ್ನ ಇಟ್ಟುಕೊಂಡು ಬಿಜೆಪಿ ಪಕ್ಷ ಸಾಕಷ್ಟು ವಿವಾದಗಳನ್ನು ಸೃಷ್ಟಿ ಮಾಡಿದ್ದು ಆದರೆ ನಗರದಲ್ಲಿ ಸಾಕಷ್ಟು ಸಭೆಗಳನ್ನು ಮಾಡುತ್ತಾ ನಾವೆಲ್ಲರೂ ಒಂದೇ ಎನ್ನುವ ಭಾವನೆಗಳನ್ನು ಮೂಡಿಸುತ್ತಾ ಸೌಹಾರ್ದತೆಯನ್ನು ಕಾಪಾಡಿದ್ದೇವೆ ಅದರಂತೆ ಮುಂಬರುವ ದಿನದಲ್ಲೂ ಸಹ ಎಲ್ಲರೂ ಒಟ್ಟೂಗುಡಿ ತುಮಕೂರು ನಗರವನ್ನ ಅಭಿವೃದ್ಧಿ ಪಥದತ್ತ ಕೊಂಡಯ್ಯ ಬೇಕಾಗಿರುವುದು ಎಲ್ಲರ ಕರ್ತವ್ಯ ಹಾಗಾಗಿ ತುಮಕೂರಿನ ನಾಗರಿಕ ಬಂಧುಗಳು ಸಹ ತಮಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.