ತುಮಕೂರು_ಇತ್ತೀಚೆಗೆ ತುಮಕೂರು ಗ್ರಾಮಾಂತರ ಬಿಜೆಪಿಯ ಶಾಸಕ ಸುರೇಶ್ ಗೌಡ ರವರು ಹಾಲಿ ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ ಗೌರಿಶಂಕರ್ ರವರ ವಿರುದ್ಧ ಸೂಪಾರಿ ಕೊಲೆ ಆರೋಪ ಮಾಡಿದ್ದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.
ಇದಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಶಾಸಕ ಸುರೇಶ್ ಗೌಡರವರು ಹಾಲಿ ಶಾಸಕ ಡಿ.ಸಿ ಗೌರಿಶಂಕರ್ ರವರ ವಿರುದ್ಧ ದೂರು ನೀಡಿ ಎಫ್.ಐ.ಅರ್ ದಾಖಲಾಗಿತ್ತು ಈಗ ಅದರ ಮುಂದುವರಿದ ಭಾಗವಾಗಿ ಶಾಸಕ ಡಿ.ಸಿ ಗೌರಿಶಂಕರ್ ಅವರು ಸುರೇಶ್ ಗೌಡರ ವಿರುದ್ಧ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ದೂರು ದಾಖಲಾದ 24 ಗಂಟೆಯೊಳಗೆ ಮಾಜಿ ಶಾಸಕ ಸುರೇಶ್ ಗೌಡರವರ ವಿರುದ್ಧ ಎಫ್ ಐ ಆರ್ ದಾಖಲು ಮಾಡಿ ತಮ್ಮ ಶಕ್ತಿ ಪ್ರದರ್ಶನವನ್ನು ಹಾಲಿ ಶಾಸಕರಾದ ಗೌರಿಶಂಕರ್ ರವರು ಮಾಡಿದ್ದಾರೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ 120(b),506 ರ ಅಡಿಯಲ್ಲಿ ಮಾಜಿ ಶಾಸಕ ಸುರೇಶ್ ಗೌಡರ ವಿರುದ್ಧ ಎಫ್ ಐ.ಅರ್ ದಾಖಲಾಗಿದೆ .