ತುಮಕೂರು_ತುಮಕೂರು ಗ್ರಾಮಾಂತರ ಮಾಜಿ ಶಾಸಕ ಬಿ ಸುರೇಶ್ ಗೌಡ ರವರು ಇತ್ತೀಚೆಗೆ ತಮ್ಮ ಮೇಲೆ ಸೂಪಾರಿ ನೀಡುವ ಮೂಲಕ ತನ್ನನ್ನು ಕೊಲೆ ಮಾಡುವ ಸಂಚನ್ನು ಕೆಲವರು ರೂಪಿಸಿದ್ದಾರೆ ಎಂದು ಇತ್ತೀಚೆಗೆ ನಡೆದ ಕಾರ್ಯಕ್ರಮ ಒಂದರಲ್ಲಿ ಬಹಿರಂಗವಾಗಿ ಹೇಳಿಕೊಂಡಿದ್ದರು.
ಇದಕ್ಕೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಮಾಜಿ ಶಾಸಕ ಸುರೇಶ್ ಗೌಡ ಹಾಗೂ ಹಾಲಿ ಶಾಸಕ ಡಿ.ಸಿ ಗೌರಿಶಂಕರ್ ರವರ ವಿರುದ್ಧ ಆರೋಪ ಪ್ರತ್ಯಾರೋಪಗಳು ನಡೆಯುತ್ತಿದ್ದ ಬೆನ್ನಲ್ಲೇ ಇಂದು ತುಮಕೂರು ಗ್ರಾಮಾಂತರ ಮಾಜಿ ಶಾಸಕ ಬಿ ಸುರೇಶ್ ಗೌಡ ರವರು ನೀಡಿದ ದೂರಿನ ಮೇಲೆ ಹಾಲಿ ಶಾಸಕ ಗೌರಿಶಂಕರ್ ಹಾಗೂ ಆಟಿಕ ಗೋಲ್ಡ್ ಕಂಪನಿಯ ಮಾಲೀಕ ಬೊಮ್ಮನಹಳ್ಳಿ ಬಾಬು ಸೇರಿದಂತೆ ಇತರರ ವಿರುದ್ಧ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್.ಐ ಅರ್ ದಾಖಲಾಗಿದೆ.
ಇನ್ನು ಪ್ರಕರಣ ದಾಖಲಿಸಿಕೊಂಡಿರುವ ಕ್ಯಾತ್ಸಂದ್ರ ಪೊಲೀಸರು 120(b),506, 109ರೆ/ವಿ ,34 ಐ. ಪಿ.ಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.