ತುಮಕೂರು: ಗೌರಿಶಂಕರ್ ಅವರು ಚುನಾವಣಾ ಅಕ್ರಮದಲ್ಲಿ ಭಾಗಿಯಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಶಾಸಕ ಸ್ಥಾನದಿಂದ ಅನರ್ಹ ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸೂರ್ಯ ಮುರುಂದರಾಜ್ ಹೇಳಿದರು.
ತುಮಕೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ 16 ಸಾವಿರ ವಿದ್ಯಾರ್ಥಿಗಳಿಗೆ ನಕಲಿ ವಿಮೆ ಬಾಂಡ್ ಹಂಚಿದ್ದಾರೆ ಎಂಬುದು ಸಾಬೀತಾಗಿದೆ, ಇದಕ್ಕೆ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದಲ್ಲಿ ಶೀಘ್ರವೇ ಅಂತಿಮ ತೀರ್ಪು ಹೊರ ಬರಲಿದೆ ಎಂದು ಆರೋಪಿಸಿದ್ದಾರೆ.
ಗ್ರಾಮಾಂತರ ಶಾಸಕರ ಬೆಂಬಲಿಗರಾಗಿರುವ ಪಾಲನೇತ್ರಯ್ಯ ಚುನಾವಣಾ ಅಕ್ರಮವನ್ನು ಒಪ್ಪಿಕೊಂಡು, ತುಮಕೂರು ನ್ಯಾಯಾಲಯದಲ್ಲಿ ಇತ್ತೀಚೆಗೆ ಒಂದು ಸಾವಿರ ದಂಡವನ್ನು ಕಟ್ಟಿದ್ದಾರೆ ಇದರಿಂದ ಅವರು ಅಕ್ರಮ ಒಪ್ಪಿಕೊಂಡಂತೆಯೇ ಎಂದರು.
ಇನ್ನು ಗೌರಿಶಂಕರ್ ಅವರು ಸುಪ್ರೀಂಕೋರ್ಟ್‍ನಲ್ಲಿ ಸಲ್ಲಿಸಿರುವ ಅರ್ಜಿಯನ್ನೂ ಸಹ ಹಿಂಪಡೆದಿದ್ದಾರೆ, ಪಾಲನೇತ್ರಯ್ಯ ಸಲ್ಲಿಸಿರುವ ಅರ್ಜಿ ವಜಾಗೊಂಡಿದೆ. ಸದ್ಯ ನ್ಯಾಯಾಲಯಗಳ ರಜೆ ಮುಗಿದ ನಂತರ ಈ ಕುರಿತು ತೀರ್ಪು ಹೊರಬೀಳಲಿದ್ದು, ಗೌರಿಶಂಕರ್ ಅವರು ತಮ್ಮ ಶಾಸಕ ಸ್ಥಾನದಿಂದ ವಜಾಗೊಳ್ಳುವುದು ಬಹುತೇಕ ಖಚಿತ ಎಂದು ಆರೋಪಿಸಿದ್ದಾರೆ.