ತುಮಕೂರು – ಕಳೆದ ಕೆಲವು ತಿಂಗಳುಗಳ ಹಿಂದೆ ರಾಜ್ಯದಲ್ಲಿ ತೀವ್ರ ಚರ್ಚೆಗೆ ವ್ಯಾಸವಾಗಿದ್ದ ಜಾತ್ರೆಗಳಲ್ಲಿ ಅನ್ಯ ಧರ್ಮೀಯರಿಗೆ ವ್ಯಾಪಾರ ಮಾಡಲು ಅವಕಾಶ ಕೊಡಬಾರದು ಎಂದು ಹಲವು ಹಿಂದೂಪರ ಸಂಘಟನೆಗಳು ರಾಜ್ಯದ್ಯಂತ ಸರ್ಕಾರಕ್ಕೆ ಒತ್ತಾಯಿಸಿದ್ದವು.
ಅದರ ಮುಂದುವರಿದ ಭಾಗವಾಗಿ ತುಮಕೂರು ಜಿಲ್ಲೆಯಲ್ಲೂ ಸಹ ಜಾತ್ರೆಗಳ ಸುಗ್ಗಿ ಶುರುವಾಗಿದ್ದು ಜಿಲ್ಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಗುಬ್ಬಿ ಚನ್ನಬಸವೇಶ್ವರ ದೇವಸ್ಥಾನ ,ದೇವರಾಯನ ದುರ್ಗದ ಶ್ರೀ ಭೋಗ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನ ಹಾಗೂ ಮಧುಗಿರಿಯ ದಂಡಿನ ಮಾರಮ್ಮ ದೇವಾಲಯಗಳ ಜಾತ್ರಾ ಮಹೋತ್ಸವಗಳು ನಡೆಯುತ್ತಿದ್ದು ಜಾತ್ರೆಗಳಲ್ಲಿ ಅಂಗಡಿ ಮುಂಗಟ್ಟು ಪ್ರಕ್ರಿಯೆಯಲ್ಲಿ ಹಿಂದುಗಳನ್ನು ಹೊರತುಪಡಿಸಿ ಅನ್ಯ ಧರ್ಮೀಯರಿಗೆ ಅವಕಾಶ ನೀಡಬಾರದು ಎಂದು ತುಮಕೂರಿನ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಪದಾಧಿಕಾರಿಗಳು ತುಮಕೂರು ಜಿಲ್ಲಾಧಿಕಾರಿಗಳು ಹಾಗೂ ತಹಸಿಲ್ದಾರ್ ರವರಿಗೆ ಮನವಿ ಸಲ್ಲಿಸುವ ಮೂಲಕ ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದಾರೆ.
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಅಧಿನಿಯಮ 1997 ಅಧಿನಿಯಮಗಳು 2022ರ ಸಂಖ್ಯೆ 33ರ ಪ್ರಕಾರ ಧಾರ್ಮಿಕ ದತ್ತಿ ಇಲಾಖೆಯ ಸಂಬಂಧ ಪಟ್ಟ ದೇವಾಲಯಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಹಿಂದೂಯೇತರ ಅನ್ಯ ಕೋಮಿನವರಿಗೆ ಗುತ್ತಿಗೆಯನ್ನು ನೀಡಬಾರದು ಎಂಬ ಅಧಿನಿಯಮವಿದ್ದು ಅದರಂತೆ ತುಮಕೂರು ಜಿಲ್ಲೆಯ ಎಲ್ಲಾ ದೇವಸ್ಥಾನ ಹಾಗೂ ಆಡಳಿತ ಮಂಡಳಿಗಳಿಗೆ ಈ ಆದೇಶವನ್ನು ಹೊರಡಿಸಿ ಜಿಲ್ಲೆಯ ಎಲ್ಲಾ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಎಲ್ಲಾ ದೇವಾಲಯಗಳು ಹಾಗೂ ಜಾತ್ರಾ ಮಹೋತ್ಸವ ರಥೋತ್ಸವ ಮತ್ತು ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.