ತುಮಕೂರು ನಗರ ಜೆಡಿಎಸ್‌ ಅಭ್ಯರ್ಥಿ ವಿರುದ್ಧ ಜಿಲ್ಲಾಧಿಕಾರಿಗಳಿಗೆ ಮಹಿಳೆಯರಿಂದ ದೂರು

ತುಮಕೂರು ನಗರದ ಜೆಡಿಎಸ್ ಸಂಭಾವ್ಯ ಅಭ್ಯರ್ಥಿ ‌ಎನ್.ಗೋವಿಂದರಾಜು ಮತದಾರರಿಗೆ ಸೀರೆ, ಹಣ ನೀಡಿ  ಆಣೆ ಪ್ರಮಾಣ ಮಾಡಿಸುತ್ತಿದ್ದು ಇದರ ವಿರುದ್ಧ ಹಾಗೂ ಈ ಕಾರ್ಯವನ್ನು ಅಮಾಯಕ ಹೆಣ್ಣು ಮಕ್ಕಳ ಮೂಲಕ ಮಾಡಿಸುತ್ತಿದ್ದು,  ಹೆಣ್ಣು ಮಕ್ಕಳ ಗೌರವಕ್ಕೆ ಧಕ್ಕೆ ಆಗುತ್ತಿರುವ ಕಾರಣ ಅವರ ವಿರುಧ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳಾಮೋರ್ಚಾ ವತಿಯಿಂದ ಜಿಲ್ಲಾಧಿಕಾರಿಗಳಾದ ಶ್ರೀ ವೈ.ಎಸ್.ಪಾಟೀಲ್ ಅವರಿಗೆ ಮನವಿಯನ್ನು ಸಲ್ಲಿಸಿದರು.

 

 

 

 

ಈ ಸಂದರ್ಭದಲ್ಲಿ ಮಹಿಳಾಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀಮತಿ ಅಂಬಿಕಾ ಹುಲಿನಾಯ್ಕರ್, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಶ್ರೀಮತಿ ವಿಜಯಭಾಸ್ಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಸೌಮ್ಯ, ನಗರ ಅಧ್ಯಕ್ಷೆ ಶ್ರೀಮತಿ ಆದ್ಯಗೌಡ, ಪ್ರಧಾನ ಕಾರ್ಯದರ್ಶಿ ಶ್ರೀಮತಿ ಕಾವ್ಯ, ಶ್ರೀಮತಿ ಸೌಮ್ಯ, ಪಂಚಾಯತ್ ರಾಜ್ ಪ್ರಕೋಷ್ಠ ರಾಜ್ಯ ಸಮಿತಿ ಸದಸ್ಯರಾದ ಶ್ರೀಮತಿ ಜ್ಯೋತಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.

 

 

Leave a Reply

Your email address will not be published. Required fields are marked *

error: Content is protected !!