ತುಮಕೂರು : 2023ರ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿಯಾದ ಜಿ.ಬಿ.ಜ್ಯೋತಿಗಣೇಶ್ ರವರು ತಮ್ಮ ಆಪ್ತರೊಂದಿಗೆ ಚುನಾವಣಾಧಿಕಾರಿಗಳಿಗೆ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.
ನಾಮಪತ್ರವನ್ನು ಇಂದು ಶುಭದಿನವಾಗಿದ್ದರಿಂದ ಸಲ್ಲಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಬೃಹತ್ ಸಂಖ್ಯೆಯ ಕಾರ್ಯಕರ್ತರೊಂದಿಗೆ ದಿನಾಂಕ 18-04-2023ರಂದು ಮತ್ತೊಮ್ಮೆ ನಾಮಪತ್ರವನ್ನು ಸಲ್ಲಿಸಲಾಗುವುದೆಂದು ತಿಳಿಸಿದರು.
ಇನ್ನುಳಿದಂತ ಇಷ್ಟು ದಿನ ಹಲವಾರು ಕಾರ್ಯಕರ್ತರಲ್ಲಿ ಬಿಜೆಪಿ ಟಿಕೇಟ್ ಸೊಗಡು ಶಿವಣ್ಣರವರಿಗೆ ಆಗುತ್ತದೆಂದು ಗೊಂದಲ ಉಂಟಾಗಿತ್ತು, ಆದರೆ ಅವರಿಗೆ ಪಕ್ಷದಲ್ಲಿ ಉನ್ನತ ಸ್ಥಾನಮಾನವನ್ನು ನೀಡುವ ಕಾರ್ಯವಿತ್ತು, ಆದರೆ ಅವರು ಆತುರದಿಂದ ಪಕ್ಷಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ ಹಾಗಾಗಿ ನಾನು ಅವರ ಬಗ್ಗೆ ಏನೂ ಮಾತನಾಡುವುದಿಲ್ಲವೆಂದು ನಾಮಪತ್ರ ಸಲ್ಲಿಸಿದ ನಂತರ ಹೇಳಿದರು.
ನಾಮಪತ್ರವನ್ನು ಸಲ್ಲಿಸುವಾಗ ತಮ್ಮ ಕೆಲವೇ ಕೆಲವು ಆಪ್ತರೊಂದಿಗೆ ಮಾತ್ರ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆಂದು ಹೇಳಿದ್ದಾರೆ.