ತುಮಕೂರು ನಗರ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ, ಭುಗಿಲೆದ್ದ ಭಿನ್ನಮತ.
ತುಮಕೂರು- ಮಾಜಿ ಸಚಿವ ಸೊಗಡು ಶಿವಣ್ಣ ರವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ತುಮಕೂರು ನಗರ ಬಿಜೆಪಿ ಪಾಳಯದಲ್ಲಿ ಭಿನ್ನಮತ ಸ್ಪೋಟವಾಗಿದ್ದು.
ತಮ್ಮ ಮೆಚ್ಚಿನ ನಾಯಕನಿಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಯಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣರವರ ಕಾರ್ಯಕರ್ತರು ಹಿಂಬಾಲಕರು ಮುಂಚೂಣಿ ನಾಯಕರು ಸೇರಿದಂತೆ ಮೂಲ ಬಿಜೆಪಿಗರು ಬಿಜೆಪಿ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದು.
- ಬೆಳಗ್ಗಿನಿಂದಲೂ ಸತತವಾಗಿ ಮೂಲ ಬಿಜೆಪಿಗರು ಮಾಜಿ ಸಚಿವ ಸಗಡು ಶಿವಣ್ಣರವರಿಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಇದುವರೆಗೂ ಪಕ್ಷಕ್ಕಾಗಿ ಹಗಲಿರುಳು ದುಡಿದ ನಿಷ್ಠಾವಂತ ಕಾರ್ಯಕರ್ತರಿಗೆ ತೀವ್ರ ನೋವುಂಟು ಮಾಡಿರುವ ಹಿನ್ನೆಲೆಯಲ್ಲಿ ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ.