ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಈ ಬಾರಿಯ ಗೆಲುವು ಕಾಂಗ್ರೆಸ್ ಪಕ್ಷಕ್ಕೆ ಸಿಗಲಿದೆ – ಕಾಂಗ್ರೆಸ್ ಅಭ್ಯರ್ಥಿ ಷಣ್ಮುಖಪ್ಪ ವಿಶ್ವಾಸ.
ತುಮಕೂರು – ಈ ಬಾರಿ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ಲಭಿಸಲಿದೆ ಈ ಮೂಲಕ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗಟ್ಟಿಗೊಳ್ಳಲಿದೆ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಷಣ್ಮುಖಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇನ್ನು ರಂಜಾನ್ ಹಬ್ಬದ ಪ್ರಯುಕ್ತ ತುಮಕೂರು ಗ್ರಾಮಾಂತರ ಕ್ಷೇತ್ರದ ಹಲವು ಮಸೀದಿಗಳಿಗೆ ಭೇಟಿ ನೀಡಿದ ಷಣ್ಮುಖಪ್ಪ ರವರು ರಂಜಾನ್ ಹಬ್ಬದ ಶುಭಶಯ ಕೋರಿದರು.
ಇದೇ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಸಿದ ಅವರು ತಾವು ಗ್ರಾಮಾಂತರ ಕ್ಷೇತ್ರದಲ್ಲೀ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಈ ಬಾರಿಯ ಚುನಾವಣೆಗೆ ಸ್ಪರ್ಧಿಸಿದ್ದು ಹಿಂದುಳಿದ ವರ್ಗಕ್ಕೆ ಸಾಮಾಜಿಕ ನ್ಯಾಯ ಸಿಗಬೇಕಾಗಿರುವುದರಿಂದ ಕಾಂಗ್ರೆಸ್ ಪಕ್ಷ ಈ ಬಾರಿ ಹಿಂದುಳಿದ ವರ್ಗಕ್ಕೆ ಟಿಕೆಟ್ ನೀಡಿದ್ದು.
ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ದೀನ ದಲಿತರು ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಸಮುದಾಯಗಳು ಸಮಾಜದಲ್ಲಿ ಬದುಕು ಕಟ್ಟಿಕೊಳ್ಳಬೇಕಾದರೆ ಕಾಂಗ್ರೆಸ್ ಪಕ್ಷ ಅನಿವಾರ್ಯವಾಗಿದ್ದು ಈ ಬಾರಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸುವುದರೊಂದಿಗೆ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಸಹ ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸಲಿದ್ದಾರೆ ಎಂದರು.
ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ವಾತಾವರಣ ನಿರ್ಮಾಣವಾಗಿದೆ ಎಂದರು.
ಇದುವರೆಗೂ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳೇ ಗೆಲ್ಲುತಿದ್ದರು ಆದರೆ ಈ ಬಾರಿ ತುಮಕೂರು ಗ್ರಾಮಾಂತರ ಕ್ಷೇತ್ರದ ಜನತೆಯ ಆಶಯದಂತೆ ಈ ಬಾರಿ ಹೊಸ ಮುಖ ಗ್ರಾಮಾಂತರ ಕ್ಷೇತ್ರಕ್ಕೆ ಬೇಕು ಎನ್ನುವ ಆಸೆಯನ್ನು ಸಹ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗದ ಅಭ್ಯರ್ಥಿಗೆ ಟಿಕೆಟ್ ನೀಡಿದ್ದು ಕ್ಷೇತ್ರದಲ್ಲಿ ಎಲ್ಲಾ ಮತದಾರರು ಸೇರಿದಂತೆ ಎಲ್ಲಾ ನಾಯಕರು ಸಂಪೂರ್ಣ ಬೆಂಬಲ ಘೋಷಿಸುತ್ತಿದ್ದು ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ತಿಳಿಸಿದ್ದಾರೆ.