ತುಮಕೂರು ನಗರ ವಿಧಾನಸಭಾ ಕ್ಷೇತ್ರದಿಂದ ಇಂದು ಬೃಹತ್ ಸಂಖ್ಯೆಯ ಕಾರ್ಯಕರ್ತರೊಂದಿಗೆ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದ ಹಾಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ರವರು ಖಾಸಗಿ ಹೋಟೆಲ್‌ವೊಂದರಲ್ಲಿ ಸುದ್ಧಿಗೋಷ್ಠಿಯನ್ನು ನಡೆಯಿಸಿ ಉತ್ತಮವಾದ ವ್ಯಕ್ತಿಗೆ ಮತ ನೀಡುವುದರೊಂದಿಗೆ ತಮ್ಮ ಹಕ್ಕು ಚಲಾಯಿಸಿ ಎಂದು ಮತಜಾಗೃತಿ ಮಾಡಿದರು.
ತುಮಕೂರು ನಗರದಲ್ಲಿ ನಮ್ಮ ಬಿಜೆಪಿ ಪಕ್ಷಕ್ಕೆ ಕಾಂಗ್ರೆಸ್ ಪಕ್ಷವೇ ಎದುರಾಳಿಯಾಗಿದ್ದು, ಜೆಡಿಎಸ್ ಪಕ್ಷ ಈ ಭಾರಿ ಮಾತ್ರ ತೀವ್ರ ಪೈಪೋಟಿ ಮಾಡುತ್ತಿದ್ದೆ, ಮುಂದಿನ ದಿನಗಳಲ್ಲಿ ಈ ಕುರಿತು ಅವಲೋಕನ ಮಾಡಲಾಗುವುದೆಂದು ಹೇಳಿದರು.
ಈ ಭಾರಿ ನಾನು ಕನಿಷ್ಠ 10000 ಮತಗಳ ಅಂತರದಿಂದ ಜಯಗಳಿಸುವುದಾಗಿ ತಿಳಿಸಿದರು. ಇನ್ನು ನಾಮಪತ್ರ ಸಲ್ಲಿಸುವುದಕ್ಕೂ ಮುಂಚಿತವಾಗಿ ಕಾಲ್‌ಟೆಕ್ಸ್ ವೃತ್ತದಲ್ಲಿರುವ ಗಣೇಶನ ದೇವಸ್ಥಾನಕ್ಕೆ ತೆರಳಿ ತಮ್ಮ ಬಿ ಫಾರಂ ಮತ್ತು ನಾಮಪತ್ರಗಳಿಗೆ ವಿಶೇಷ ಪೂಜೆಯನ್ನು ನೆರವೇರಿಸಿ ತದನಂತರ ಬೃಹತ್ ಸಂಖ್ಯೆಯ ಕಾರ್ಯಕರ್ತರೊಂದಿಗೆ ಆಗಮಿಸಿ ಚುನಾವಣಾಧಿಕಾರಿಗಳಿಗೆ ನಾಮಪತ್ರವನ್ನು ಸಲ್ಲಿಸಿದರು.