ತುಮಕೂರು – ಈ ಬಾರಿ ತುಮಕೂರು ಜಿಲ್ಲೆಯಲ್ಲಿ ಏಳಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ತುಮಕೂರು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಗೀತಾ ರಾಜಣ್ಣ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ತುಮಕೂರು ಜಿಲ್ಲೆಯಲ್ಲಿ ನಡೆದ ಭಾರತ್ ಜೋಡ ೋ ಯಾತ್ರೆಗೆ ತುಮಕೂರು ಜಿಲ್ಲೆಯಲ್ಲಿ ಅಭೂತಪೂರ್ವ ದೊರೆಯುವ ಮೂಲಕ ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಭದ್ರಗೊಳಿಸಲು ಅನುಕೂಲವಾಗಿದ್ದು.
ತುಮಕೂರು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದು ಪಕ್ಷ ಸಂಘಟನೆ ಸಮಯದಲ್ಲೂ ಸಹ ಜಿಲ್ಲೆಯ ಮಹಿಳೆಯರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವ ಮೂಲಕ ಕಾಂಗ್ರೆಸ್ ಪಕ್ಷದ ಗೆಲುವಿಗೆ ಸಹಕಾರಿಯಾಗಿದ್ದು ಈ ಬಾರಿ ತುಮಕೂರು ಜಿಲ್ಲೆಯಲ್ಲಿ ಹೇಳಕ್ಕೂ ಹೆಚ್ಚಿನ ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಗದ್ದುಗೆ ಇರಲಿದೆ ಎಂದರು.
ವಿಶೇಷವಾಗಿ ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಮಹಿಳಾ ಕಾರ್ಯಕರ್ತರು ಪಕ್ಷ ಸಂಘಟನೆಗೆ ಹಗಲಿರುಳು ಶ್ರಮಿಸುವ ಮೂಲಕ ಪಕ್ಷವನ್ನು ಗಟ್ಟಿಗೊಳಿಸಲು ಸಹಕಾರಿಯಾಗಿದ್ದಾರೆ.