ತುಮಕೂರು ಜಿಲ್ಲಾಧಿಕಾರಿಗಳಾಗಿ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದ ಕೆ.ಶ್ರೀನಿವಾಸ್ರವರು ಇಂದು ತುಮಕೂರು ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ದಿಡೀರ್ ಭೇಟಿ ನೀಡಿ ನಿಲ್ದಾಣದ ಸ್ವಚ್ಛತೆ, ಮಹಿಳಾ ವಿಶ್ರಾಂತಿ ಕೊಠಡಿಗಳಿಗೆ ಭೇಟಿ ನೀಡಿ, ಸ್ವಚ್ಛತೆಯ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ಮಾಡಿದರು. ಅಲ್ಲದೇ ಹಾಲಿ ಬಸ್ ನಿಲ್ದಾಣ ಸ್ವಚ್ಛತೆ ಇಲ್ಲದೇ ಗಬ್ಬೆದಿದ್ದು, ಪ್ರಯಾಣಿಕರು ಪಡುತ್ತಿರುವ ಕಷ್ಟವನ್ನು ನೋಡಿ, ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ಮಾಡಿದರು.
ನಂತರ ತುಮಕೂರು ನಗರದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣವಾಗುತ್ತಿರುವ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು. ಜೊತೆಗೆ ಕೆಲವು ಸಲಹೆಗಳನ್ನು ನೀಡಿ ಕಾಮಗಾರಿಯನ್ನು ಅಚ್ಚುಕಟ್ಟಾಗಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.