ತುಮಕೂರು ಜಿಲ್ಲಾಧಿಕಾರಿಗಳಾಗಿದ್ದ ವೈ.ಎಸ್. ಪಾಟೀಲ್ ಅವರನ್ನು ಕೃಷಿ ಇಲಾಖೆಯ ಆಯುಕ್ತರನ್ನಾಗಿ ಸರ್ಕಾರ ನೇಮಕ ಮಾಡಿ ವರ್ಗಾವಣೆ ಮಾಡಲಾದ ಹಿನ್ನಲೆಯಲ್ಲಿ ತುಮಕೂರು ಜಿಲ್ಲಾಧಿಕಾರಿಯಾಗಿ ಬರಲು ಕೆಲ ಐಎಎಸ್ ಅಧಿಕಾರಿಗಳು ಹಲವು ಪ್ರಯತ್ನ ಮಾಡಿದ್ದರು.
ಆದರೆ ಅಂತಿಮವಾಗಿ ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಕೆ.ಶ್ರೀನಿವಾಸ್ ಅವರನ್ನು ತುಮಕೂರು ಜಿಲ್ಲಾಧಿಕಾರಿಯಾಗಿ ಇಂದು ಸರ್ಕಾರ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.
ಶ್ರೀನಿವಾಸ್ ರವರು ಈ ಹಿಂದೆ ರಾಜೀವ್ ಗಾಂಧಿ ಗೃಹ ನಿಗಮ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು,
ಯಾವುದು ಏನೇ ಇರಲಿ ಕೆ.ಶ್ರೀನಿವಾಸ್ರವರು ಒಬ್ಬ ನಿಷ್ಠಾವಂತ ಜಿಲ್ಲಾಧಿಕಾರಿಯಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಒಳ್ಳೆಯ ಅಭಿವೃದ್ಧಿ ಮತ್ತು ಜನಸ್ನೇಹಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಹೇಳಲಾಗಿದೆ.