ತುಮಕೂರು: ನಗರದ ಶ್ರೀ ಸಿದ್ಧಾರ್ಥ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸೂಪರ್ ಸ್ಪೆಷಾಲಿಟಿ ಹೊರರೋಗಿಗಳ ವಿಭಾಗ ಮತ್ತು ಆಸ್ಪತ್ರೆಯ ಸಿಬ್ಬಂದಿಗಾಗಿ ವಸತಿ ಸಮುಚ್ಛಯ ಕಟ್ಟಡಗಳನ್ನು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಗೃಹಸಚಿವರು ಮತ್ತು ಶ್ರೀ ಸಿದ್ಧಾರ್ಥ ಉನ್ನತ ಶಿಕ್ಷಣ ಸಂಸ್ಥೆಯ ಗೌರವಾನ್ವಿತ ಕುಲಾಧಿಪತಿಗಳಾದ ಡಾ. ಜಿ ಪರಮೇಶ್ವರ ಅವರು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿದರು.
ನಗರದ ಅಗಳಕೋಟೆಯಲ್ಲಿರುವ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡಗಳನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿ ಮಾತನಾಡಿ, ರಾಜ್ಯಾದ್ಯಂತ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ ಮತ್ತು ಜಿಲ್ಲಾ ಆಸ್ಪತ್ರೆಗಳಿಗೆ ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಅಗತ್ಯವಿರುವ ಸೇವೆಗಳನ್ನು ನೀಡಬೇಕು ಎಂದು ಗೌರವಾನ್ವಿತ ಕುಲಾಧಿಪತಿಗಳಾದ ಡಾ. ಜಿ ಪರಮೇಶ್ವರ ಅವರಿಗೆ ಮನವಿ ಮಾಡಿದರು.
ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಓದಲು ಪೂರಕ ವಾತಾವರಣ ನಿರ್ಮಿಸಿಕೊಡಲಾಗಿದೆ. ಅನೇಕ ಬಡ ಜನರಿಗೆ ಆರೋಗ್ಯ, ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ಸೌಲಭ್ಯ ಮತ್ತು ಸೇವೆಗಳನ್ನು ಈ ಸಂಸ್ಥೆ ಒದಗಿಸುತ್ತಿದೆ. ಹಾಗೆಯೇ ಬಡ ರೋಗಿಗಳು ಬಂದಾಗ ವೈದ್ಯರು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಪ್ರಾಮಾಣಿಕವಾಗಿ ಸೇವೆ ಮಾಡುಬೇಕು ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ಈ ಸಂಸ್ಥೆಯಲ್ಲಿ ಬಡ ಜನರಿಗೆ ಕಡಿಮೆ ಬೆಲೆಗೆ ಚಿಕಿತ್ಸೆ ನೀಡಲಾಗುತ್ತಿರುವುದು ನಿಜಕ್ಕೂ ಸಂತೋ?ದ ವಿ?ಯ ಎಂದು ಅವರು ತಿಳಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗೃಹಸಚಿವರು ಹಾಗೂ ಶ್ರೀ ಸಿದ್ಧಾರ್ಥ ಉನ್ನತ ಶಿಕ್ಷಣ ಸಂಸ್ಥೆಯ ಗೌರವಾನ್ವಿತ ಕುಲಾಧಿಪತಿಗಳಾದ ಡಾ. ಜಿ ಪರಮೇಶ್ವರ ಮಾತನಾಡಿ, ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಪ್ರತಿ ಬಾರಿ ಹೊಸತನ್ನು ನೋಡಲು ಬಯಸುತ್ತೇನೆ, ಶಿಕ್ಷಣ ಹಾಗೂ ಆರೋಗ್ಯ ಇದ್ದರೆ ನಮ್ಮ ಸಮಾಜ ಉತ್ತಮವಾಗಿರುತ್ತದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸೇವೆ ಮಾಡುವುದೇ ನನ್ನ ತಂದೆಯ ಹಾಗೂ ಸಿದ್ಧಾರ್ಥ ಸಂಸ್ಥೆಯ ಉದ್ದೇಶವಾಗಿದೆ, ಹಾಗೆಯೇ ವೈದ್ಯಕೀಯ ಕಾಲೇಜಿನ ವೈದ್ಯರಾದ ಡಾ. ತಮೀಮ್ ಅಹಮದ್ ಹಾಗೂ ಡಾ. ಸಂಜಯ್ ಮತ್ತು ಕಾಲೇಜಿನ ವೈದ್ಯರ ತಂಡ ಅನೇಕ ಜನರ ಜೀವನವನ್ನು ರಕ್ಷಿಸುತ್ತಿದೆ ಎಂದು ಹ? ವ್ಯಕ್ತಪಡಿಸಿದರು.
ಕಿಡ್ನಿ ಕಸಿ ಯಶಸ್ವಿ: ಕೇವಲ ನಾಲ್ಕು ವರ್ಷಗಳ ಹಿಂದೆ ಆರಂಭವಾಗಿರುವ ಕಿಡ್ನಿ ಚಿಕಿತ್ಸಾ ವಿಭಾಗದಲ್ಲಿ ಹಲವಾರು ಕಿಡ್ನಿ ಕಸಿಗಳನ್ನು ಯಶಸ್ವಿಯಾಗಿ ಮಾಡಲಾಗಿದೆ. ಸಮಾರಂಭದಲ್ಲಿ ಕಿಡ್ನಿ ಕಸಿ ದಾನಿಗಳು ಮತ್ತು ಫಲಾನುಭವಿಗಳನ್ನು ಗೌರವಿಸಲಾಯಿತು. ಕಿಡ್ನಿ ದಾನಿಗಳಲ್ಲಿ ೮೦ವರ್ಷದವರಿಂದ ಕಿಡ್ನಿ ಪಡೆದು ಅವರ ಮಗನಿಗೆ ಕಸಿ ಮಾಡಲಾಗಿದೆ. ತಂದೆಯೊಬ್ಬರ ಕಿಡ್ನಿಯನ್ನು ಅವರ ಮಗನಿಗೆ ಕಸಿ ಮಾಡಲಾಗಿದೆ. ಇದರ ನೇತೃತ್ವವನ್ನು ನೇಫ್ರಾಲಾಜಿಸ್ಟ್ ಡಾ ಸಂಜಯ್ ವಹಿಸಿಕೊಡಿದ್ದು, ಅವರ ತಂಡ ಕಿಡ್ನಿ ಕಸಿ ಮಾಡುವಲ್ಲಿ ಯಶಸ್ವಿಯಾಗಿದೆ.
ಆಂಟಿ ನ್ಯಾಟಲ್ ಕಾರ್ಡ್: ಇದೇ ಸಂದರ್ಭದಲ್ಲಿ ತಾಯಿ ಮತ್ತು ನವಜಾತ ಶಿಶುವಿನ ಆರೈಕೆಗಾಗಿ ಪ್ರಸೂತಿ ತಜ್ಞೆ ಡಾ. ಇಂದಿರಾ ಅವರು ಹೊರ ತಂದಿರುವ ಆಂಟಿ ನ್ಯಾಟಲ್ ಕಾರ್ಡ್ ಕಿರು ಹೊತ್ತಿಗೆಯನ್ನು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಗೃಹಸಚಿವರು ಮತ್ತು ಶ್ರೀ ಸಿದ್ಧಾರ್ಥ ಆಕಾಡೆಮಿಯ ಉನ್ನತ ಶಿಕ್ಷಣ ಸಂಸ್ಥೆಯ ಗೌರವಾನ್ವಿತ ಕುಲಾಧಿಪತಿಗಳಾದ ಡಾ. ಈ. ಪರಮೇಶ್ವರ ಬಿಡುಗಡೆಗೊಳಿಸಿದರು.
ಸಾಹೇ ಉಪಕುಲಪತಿಗಳಾದ ಡಾ.ಕೆ.ಬಿ. ಲಿಂಗೇಗೌಡ, ರಿಜಿಸ್ಟಾರ್ ಡಾ.ಎಂ. ಝಡ್ ಕುರಿಯನ್, ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಎಸ್.ಸಾನಿಕೊಪ, ಉಪಪ್ರಾಂಶುಪಾಲರಾದ ಡಾ.ಪ್ರಭಾಕರ, ದಂತ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಪ್ರವೀಣ್ ಕುಡುವ, ಬೇಗೂರು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ದಿವಾಕರ್, ವೈದ್ಯಕೀಯ ಅಧೀಕ್ಷಕರು ವೆಂಕಟೇಶ್, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ ಎಸ್ ರವಿಪ್ರಕಾಶ, ಜಿಲ್ಲಾ ಪೊಲೀಸ್ ವರಿ?ಧಿಕಾರಿ ರಾಹುಲ್ ಕುಮಾರ್ ಶಹಪೂರವಾಡ, ಜಿಲ್ಲಾಧಿಕಾರಿ ಶ್ರೀನಿವಾಸ್ ಹಾಗೂ ಸಿದ್ಧಾರ್ಥ ವೈಧ್ಯಕೀಯ ಕಾಲೇಜಿನ ವೈದ್ಯರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.