ಲೋಕ್ ಅದಾಲತ್ ಅಥವಾ ಜನತಾ ನ್ಯಾಯಾಲಯದ ಮೂಲ ಉದ್ದೇಶವೇನೆಂದರೆ ಪಕ್ಷಗಾರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಯರ್ಥ ಪಡಿಸಿಕೊಳ್ಳಬಹುದು ಇದರಿಂದ ಪಕ್ಷಗಾರರ ಮಧ್ಯದಲ್ಲಿರುವ ವೈಮನಸ್ಸು ಕಡಿಮೆಯಾಗಿ ಸೌಹಾರ್ದತೆ ಉಂಟಾಗುತ್ತದೆ ಇದರಿಂದ ನ್ಯಾಯಾಲಯದ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ ನ್ಯಾಯಾಧೀಶರು ಹೆಚ್ಚು ಅವಶ್ಯಕತೆಕಾನೂನಿನ ಸಂಕೀರ್ಣತೆ ಇರುವಂತಹ ಪ್ರಕರಣಗಳಿಗೆ ಹೆಚ್ಚು ಒತ್ತು ಕೊಟ್ಟು ನ್ಯಾಯಾಲಯಗಳಲ್ಲಿ ಚಾಲ್ತಿ ಇರುವಂತಹ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ ಎಂದು ಶ್ರೀಮತಿ ಕೆ.ಬಿ.ಗೀತಾ, ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರರವರು ತಿಳಿಸಿದರು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನಂತೆ ದಿನಾಂಕಃ 09.12.2023 ರಂದು ತುಮಕೂರು ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಜನತಾ ನ್ಯಾಯಾಲಯದ ಪ್ರಯುಕ್ತ ಕರೆಯಲಾಗಿದ್ದ ಪತ್ರಿಕಾ ಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ನ್ಯಾಯಾಧೀಶರು. 2023 ರಲ್ಲಿ 04 ರಾಷ್ಟ್ರೀಯ ಲೋಕ್ ಅದಾಲತ್‌ಗಳನ್ನು ಹಮ್ಮಿಕೊಳ್ಳಲಾಗಿದ್ದು, ದಿನಾಂಕ 09.09.2023 ರಂದು ಆಯೋಜಿಸಲಲ್ಲ ಲೋಕ್ ಅದಾಲತ್ ನಲ್ಲಿ ತುಮಕೂರು ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 93,219 ಪ್ರಕರಣಗಳಲ್ಲಿ 10,468 ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು 1,61,795 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆನ್ಯಾಯಾಲಯದಲ್ಲಿ ಬಾಕಿ ಇದ್ದ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟು 1,72,263, ಆಗಿರುತ್ತದೆಂದು ತಿಳಿಸಿದರು.
“ಸರ್ವರಿಗೂ ನ್ಯಾಯ” ಎಂಬುದು ಭಾರತದ ಕಾನೂನು ಸೇವೆಗಳ ಧೈಯವಾಗಿದೆ ಯಾವೊಬ್ಬ ಪ್ರಜೆಯು ತನ್ನ ಅರ್ಥಿಕ ಅಥವಾ ಇತರೆ ದೌರ್ಬಲ್ಯಗಳ ಕಾರಣಗಳಿಂದಾಗಿ ನ್ಯಾಯ ಪಡೆಯುವುದರಿಂದ ವಂಚಿತನಾಗಬಾರದೆಂದು ಉಚಿತ ಮತ್ತು ಸಕ್ಷಮ ಕಾನೂನು ಸೇವೆಗಳನ್ನು ಸಮಾಜದ ದುರ್ಬಲ ವರ್ಗಗಳಿಗೆ ಒದಗಿಸುವ ಸಲುವಾಗಿ ಜನತಾ ನ್ಯಾಯಾಲಯಗಳನ್ನು ವ್ಯವಸ್ಥೆಗೊಳಿಸಲು ಹಾಗೂ ಸಮಾನ ಅವಕಾಶಗಳ ಅಧಾರದ ಮೇಲೆ ನ್ಯಾಯಾಂಗ ವ್ಯವಸ್ಥೆ ಕಾರ್ಯ ನಿರ್ವಹಿಸಿ ನ್ಯಾಯ ಒದಗಿಸುವಂತೆ ಮಾಡುವ ಶ್ರೇಷ್ಠ ಉದ್ದೇಶದಿಂದ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿಕೊಟ್ಟರು.
ಜನಸಾಮಾನ್ಯರಿಗೆ ಅತೀ ತ್ವರಿತ ಹಾಗೂ ವೆಚ್ಚವಲ್ಲದೆ ರಾಜೀ ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಗೊಳಿಸಿ ನ್ಯಾಯ ದೊರಕಿಸಲು ಜನ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಈ ಉದ್ದೇಶದಿಂದ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ್ ಅದಾಲತ್ ನು ದಿನಾಂಕಃ 09.12.2023 ರಂದು ಏರ್ಪಡಿಸಲು ನಿರ್ಧರಿಸಲಾಗಿದ್ದುಸದರಿ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಎಲ್ಲಾ ರೀತಿಯ ರಾಜಿಯಾಗಬಹುದಾದ ವ್ಯಾಜ್ಯ ಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಗೌರವಾನ್ವಿತ ಕಾರ್ಯನಿರ್ವಾಹಕ ಅಧ್ಯಕ್ಷರ ನಿರ್ದೆಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳು ಮತ್ತು ಖಾಯಂ ಜನತಾ ನ್ಯಾಯಾಲಯಗಳಲ್ಲಿ ದಿನಾಂಕಃ 09.12.2023 ರಂದು ರಾಷ್ಟ್ರೀಯ ಲೋಕ್ ಅದಾಲತ್ ನ್ನು ಹಮ್ಮಿಕೊಳ್ಳಲಾಗುತ್ತದೆ ಇದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.
-:ಲೋಕ್ ಅದಾಲತ್ ಪ್ರಯೋಜನಗಳು:-
- ನಿಮ್ಮ ಕೇಸನ್ನು ಜನತಾ ನ್ಯಾಯಾಲಯದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸಿಕೊಳ್ಳಬಹುದು. ಜನತಾ ನ್ಯಾಯಾಲಯದಲ್ಲಿ ನೀವೇ ನೇರವಾಗಿ ಅಥವಾ ವಕೀಲರ ಮುಖಾಂತರ ಭಾಗವಹಿಸಬಹುದು.
- ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಮಾರ್ಗದರ್ಶನ ನೀಡಲಾಗುವುದು.
- ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ಸುಖಾಂತ್ಯಗೊಳ್ಳುತ್ತದೆ.
- ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು (ವ್ಯಾಜ್ಯಪೂರ್ವ ಪ್ರಕರಣಗಳು) ಸಹಾ ರಾಜೀ ಸಂಧಾನದ ಮೂಲಕ ಬಗೆಹರಿ ಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
- ರಾಜೀ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ನಿಮಗೆ ಒಪ್ಪಿಗೆಯಾದಲ್ಲಿ ಮಾತ್ರ ನೀವು ರಾಜೀ ಮಾಡಿಕೊಳ್ಳ ಬಹುದು.
- ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇಂದೊಂದು ವಿಶೇಷ ಅವಕಾಶಜನತಾ ನ್ಯಾಯಾಲಯದಲ್ಲಿ ಆಗುವ ತೀರ್ಮಾನವೇ ಅಂತಿಮ, ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ ಕೇವಲ ಮೋಸ , Misrepresentation ನಂತಹ ತುಂಬಾ ಅಪರೋಪದ ಪ್ರಕರಣಗಳಲ್ಲಿ ಮಾತ್ರ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ
ಇನ್ನುಳಿದಂತೆ ದಿನಾಂಕಃ 11.08.2020 ರಂದು ಮಾನ್ಯ ಸರ್ವೊಚ್ಚ ನ್ಯಾಯಾಲಯವು ವಿನಿತಾಶರ್ಮ ಪ್ರಕರಣದಲ್ಲಿ ಐತಿಹಾಸಿಕ ತೀರ್ಪನ್ನು ನೀಡಿದ್ದು ಹಿಂದೂ ಅವಿಭಕ್ತ ಕುಟುಂಬದಲ್ಲಿ ದಾಯಾದಿಯ ಮಗಳು, ಒಬ್ಬ ಮಗನ ರೀತಿಯಲ್ಲಿಯೇ ಹುಟ್ಟಿನಿಂದಲೇ ದಾಯಾದಿ ಆಸ್ತಿಯಲ್ಲಿ ಸಮಾನ ಹಕ್ಕು ಮತ್ತು ಹೊಣೆಗಾರಿಕೆ ಹೊಂದುತ್ತಾಳೆಂದು ಆದೇಶವಾಗಿರುತ್ತದೆಅದ್ದರಿಂದ ನ್ಯಾಯಾಲಯಲ್ಲಿ ಬಾಕಿ ಇರುವ ವಿಭಾಗ ದಾವೆಗಳನ್ನು ಮೇಲಿನ ತೀರ್ಪಿನನ್ವಯ ಶೀಘ್ರದಲ್ಲಿ ರಾಜಿ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸದಾವಕಾಶ ಇದನ್ನು ಸಾರ್ವಜನಿಕರು ಸರಿಯಾದ ರೀತಿಯಲ್ಲಿ ಸದುಪಯೋಗಪಡಿಸಿಕೊಂಡು ಜೀವನ ನಡೆಸಬಹುದು ಎಂದು ತಿಳಿಸಿದರು.
ಈ ಎಲ್ಲಾ ಕಾರಣಗಳಿಂದ ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ದಿನಾಂಕಃ 09.12.2023 ರಂದು ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ತಪ್ಪದೇ ನ್ಯಾಯಾಲಯಗಳಿಗೆ ಅಲೆದು ಅಲೆದು ಸಾಕಾಗಿರುವ ಸಾರ್ವಜನಿಕರು ತ್ವರಿತವಾಗಿ ತಮ್ಮ ಕೇಸುಗಳನ್ನು ಬಗೆಹರಿಸಿಕೊಳ್ಳಬಹುದಾಗಿರುತ್ತದೆಂದು ತಿಳಿಸಿದರು.
ಇನ್ನು ಈ ಕುರಿತು ಪ್ರತೀದಿನ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್‌ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‌ಗಳು ನಡೆಯುತ್ತಲಿವೆ. ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಮತ್ತು ಕಾನೂನು ಸೇವಾ ಸಮಿತಿಗಳಿಗೆ ವಿಳಾಸ dlsatumkur1@gmail.com ಮತ್ತು ಸದಸ್ಯ ಕಾರ್ಯದರ್ಶಿಯವರ ಕಛೇರಿ ದೂರವಾಣಿ ಸಂಖ್ಯೆ 08162255133 ಮತ್ತು 9141193959 ಅನ್ನು ಸಂಪರ್ಕಿಸಬಹುದು ಖುದ್ದು ಹಾಜರಾಗುವ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು. ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಜಿಲ್ಲ ಸದಸ್ಯ ಕಾರ್ಯದರ್ಶಿಗಳಾದ ನೂರುನ್ನೀಸರವರು ಉಪಸ್ಥಿತರಿದ್ದರು.