ಚುನಾವಣಾ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಲೋಕೇಶ್ ತಾಳಿಕಟ್ಟೆ ಸ್ಪಷ್ಟನೆ

 

ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣಾ ಕಣದಿಂದ ತಾವು ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ರೂಪ್ಸ ರಾಜ್ಯಾಧ್ಯಕ್ಷ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಸ್ಪಷ್ಟಪಡಿಸಿದರು. ಅವರು ತುಮಕೂರು ನಗರದ ತಮ್ಮ ಕಚೇರಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿದ್ದು ಕೆಲವು ವಿರೋಧಿಗಳು ತಮ್ಮ ವಿರುದ್ಧ ಇಲ್ಲ ಸಲ್ಲದ ಅಪಪ್ರಚಾರಗಳನ್ನು ಮಾಡುತ್ತಿದ್ದು ಲೋಕೇಶ್ ತಾಳಿಕಟ್ಟೆ ಚುನಾವಣಾ ಕಣದಿಂದ ಹಿಂದೆ ಸರಿಯುತ್ತಾರೆ ಎಂಬ ಗಾಳಿ ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ವಾಸ್ತವವಾಗಿ ಈಗಾಗಲೇ ಆಗ್ನೇಯ ಶಿಕ್ಷಕರ ಕ್ಷೇತ್ರದ ಐದು ಜಿಲ್ಲೆಗಳಲ್ಲಿ ಸಂಘಟನೆಯನ್ನು ಬಲಪಡಿಸಿದ್ದು ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿಗಳ ಮುಖ್ಯಸ್ಥರು ತಮ್ಮ ಬೆಂಬಲಕ್ಕೆ ನಿಂತು ಈಗಾಗಲೇ ಬೆಂಬಲ ವ್ಯಕ್ತಪಡಿಸಿದ್ದಾರೆ. ಒಂದು ಸುತ್ತಿನ ಶಿಕ್ಷಕರ ಭೇಟಿ ಕಾರ್ಯಕ್ರಮವು ಸಹ ಮುಗಿದಿದ್ದು, ಕ್ಷೇತ್ರದಾದ್ಯಂತ ಸಂಘಟನೆಯನ್ನು ಮಾಡುತ್ತಾ, ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತಿದೆ.

 

 

ಖಾಸಗಿ ಅನುದಾನ ರಹಿತ ಶಾಲೆಗಳ ಶಿಕ್ಷಕರು ಮತ್ತು ಆಡಳಿತ ಮಂಡಳಿ ಸದಸ್ಯರುಗಳು ತಾವೇ ಸ್ವಯಂ ಪ್ರೇರಣೆಯಿಂದ ತಮಗೆ ಬೆಂಬಲ ವ್ಯಕ್ತಪಡಿಸಿ ಈಗಾಗಲೇ ಪ್ರಚಾರದಲ್ಲಿಯೂ ಸಹ ತೊಡಗಿದ್ದಾರೆ ಅದೇ ರೀತಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರಿಂದಲೂ ಸಹ ಬೆಂಬಲ ವ್ಯಕ್ತವಾಗಿದೆ. ಹೀಗಿರುವಾಗ ಚುನಾವಣಾ ಕ್ಷೇತ್ರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಈ ಬಾರಿಯ ಚುನಾವಣೆಯಲ್ಲಿ ಶಿಕ್ಷಕರು ಬದಲಾವಣೆ ಬಯಸಿದ್ದು ತಮ್ಮ ಗೆಲುವು ಶತಸಿದ್ಧ ಈ ನಿಟ್ಟಿನಲ್ಲಿ ನಿರಂತರವಾಗಿ ಶಿಕ್ಷಕರ ಸಂಪರ್ಕದಲ್ಲಿ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಪಕ್ಷದಿಂದ ನನಗೆ ಟಿಕೆಟ್ ನೀಡುತ್ತೇನೆ ಎಂದು ತಿಳಿಸಿದರು ಸ್ವತಃ ನಾನೇ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿದರೆ ಶಿಕ್ಷಣದ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿಲ್ಲವೆಂದು ಭಾವಿಸಿ, ಶಿಕ್ಷಕರೊಂದಿಗೆ ಸಮಲೋಚಿಸಿ ಸ್ವಾತಂತ್ರ್ಯವಾಗಿ ಚುನಾವಣೆಗೆ ಸ್ಪರ್ಧಿಸುವ ತೀರ್ಮಾನ ತೆಗೆದುಕೊಂಡಿದ್ದು ಯಾವುದೇ ರಾಜಕಾರಣದ ಪ್ರಭಾವ ನನ್ನ ಮೇಲೆ ನಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!