ತುಮಕೂರು:ಹಾಡಹಾಗಲೇ ಕಲಬುರಗಿ ವಕೀಲರಾದ ಈರಣ್ಣಗೌಡ ಪಾಟೀಲ್ ರವರ ಹತ್ಯೆ ಖಂಡಿಸಿ ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯನವರ ನೇತೃತ್ವದಲ್ಲಿ ತುಮಕೂರು ಜಿಲ್ಲಾ ವಕೀಲರು ಇಡೀ ದಿನ ನ್ಯಾಯಾಲಯದ ಕಲಾಪದಿಂದ ದೂರ ಉಳಿದು ಪ್ರತಿಭಟನೆ ನಡೆಸಿ ಜಿಲ್ಲಾ ವಕೀಲರ ಸಂಘದಿಂದ ಆರೋಪಿಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಜಿಲ್ಲಾಧಿಕಾರಿಗಳ ಕಚೇರಿವರೆವಿಗೂ ತೆರಳಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ರವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ವಕೀಲರನ್ನು ಉದ್ದೇಶಿಸಿ ಮಾತನಾಡಿದ ಹೆಚ್.ಕೆಂಪರಾಜಯ್ಯನವರು ಕಲಬುರ್ಗಿಯಲ್ಲಿ ನಡೆದ ಘಟನೆ ಅಮಾನುಷವಾದುದು,ವಕೀಲರಿಗೆ ರಕ್ಷಣೆಯೇ ಇಲ್ಲದಂತಾಗಿದೆ,ಕಳೆದವಾರ ಚಿಕ್ಕಮಗಳೂರು ಪೋಲೀಸರು ವಕೀಲರ ಮೇಲೆ ಹಲ್ಲೆ ಮಾಡಿದ್ದರು,ಈಗ ಕಲಬುರ್ಗಿಯಲ್ಲಿ ವಕೀಲರ ಹತ್ಯೆಯಾಗಿದ್ದು ಪದೇ ಪದೇ ವಕೀಲರ ಮೇಲೆ ಹಲ್ಲೆ ಮತ್ತು ಹತ್ಯೆಗಳಾಗುತ್ತಿದ್ದು ವಕೀಲರಿಗೆ ರಕ್ಷಣೆಯೇ ಇಲ್ಲದಂತಾಗಿದೆ,ವಕೀಲರ ರಕ್ಷಣೆಗೆ ತಕ್ಷಣವೇ ರಾಜ್ಯ ಸರ್ಕಾರ ಧಾವಿಸಬೇಕು,ಆದ್ದರಿಂದ ರಾಜ್ಯ ಸರ್ಕಾರ ತಕ್ಷಣವೇ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶಿವಶಂಕರಯ್ಯ,ಪ್ರಧಾನ ಕಾರ್ಯದರ್ಶಿ ಆರ್.ತಿಪ್ಪೇಸ್ವಾಮಿ,ಜಂಟಿ ಕಾರ್ಯದರ್ಶಿ ಸಿ.ಪಾಲಾಕ್ಷಯ್ಯ, ಖಜಾಂಚಿ ಕೆ.ಎಲ್.ಭಾರತಿ,ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಎಂ.ಬಿ.ಗುರುಪ್ರಸಾದ್, ಟಿ.ಎಸ್.ಜನಾರ್ಧನ್,ಎಂ.ಬಿ.ನವೀನ್ ಕುಮಾರ್, ಎಸ್.ಮೋಹನ್, ಶಿವಕುಮಾರಸ್ವಾಮಿ, ಪಿ.ಎಸ್.ಸಂದೀಪ್,ಮಂಜುಳ.ಹೆಚ್.ಎಸ್,ಎಲ್ಲಾ ಹಿರಿಯ,ಕಿರಿಯ,ಮಹಿಳಾ ವಕೀಲರು ಹಾಜರಿದ್ದರು.