ಮತ್ತೊಮ್ಮೆ ವಕ್ಕರಿಸಿದ ಮಹಾಮಾರಿ ಕರೋನಾ ; ಮಾಸ್ಕ್‌ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕಳೆದ ಕೆಲ ದಿನಗಳಿಂದ ತಮಿಳುನಾಡು, ಕೆರಳದಲ್ಲಿ ಅಟ್ಟಹಾಸ ಶುರು ಮಾಡಿರುವ ಕರೋನ ರೂಪಾಂತರಿ ಒಮಿಕ್ರಾನ್‌ ವರೈಸ್‌ ನಮ್ಮ ರಾಜ್ಯದೊಳಕ್ಕೂ ನುಸುಳಿರುವ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ಸರ್ಕಾರ ಇಂದಿನಿಂದ ಮಾಸ್ಕ್‌ ಕಡ್ಡಾಯಗೊಳಿಸಿದೆ. ಆದರೆ ನಮ್ಮ ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

 

 

 

 

ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಮಾತಾನಾಡಿದ ಸಚಿವರು  ಮಾಸ್ಕ್ ಕಡ್ಡಾಯ ಬಗ್ಗೆ ಇಂದಿನಿಂದಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಳೆದೆರಡು ದಿನಗಳ ಹಿಂದೆಯಷ್ಟೇ  ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದೇವೆ. ಸಭೆಯಲ್ಲಿ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದರು. ಇದರೊಂದಿಗೆ  ಕೇಂದ್ರ ಸರ್ಕಾರದ ಜೊತೆಗೂ ಚರ್ಚೆ ಮಾಡಲಾಗಿದ್ದು ಅವರು ಸಹ ಕೆಲವು ಸಲಹೆ, ಮಾರ್ಗಸೂಚಿಗಳನ್ನು ನೀಡಿದ್ದಾರೆಂದು ತಿಳಿಸಿದ್ದಾರೆ.

 

 

 

60 ವರ್ಷ ಮೇಲ್ಪಟ್ಟವರು ಮತ್ತು ಹೃದಯ, ಕಿಡ್ನಿ ಸಂಬಂಧಿತ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ಜ್ವರ, ಕಫ, ಶೀತ ಇರುವಂತಹವರು ಕಡ್ಡಾಯವಾಗಿ ಮಾಸ್ಕ್ ಹಾಕಿ ಕೊಳ್ಳಬೇಕು ಎಂದು ಮನವಿ ಮಾಡಿದ್ದೇವೆ. ಈಗಾಗಲೇ ಆಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜಾಗುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಸೂಚನೆ ನೀಡಲಾಗಿದೆ. ಕೇರಳದಿಂದ ರಾಜ್ಯಕ್ಕೆ ಬರುವವರ ಪರೀಕ್ಷೆ ಮಾಡುವಂತೆ ಆದೇಶ ಮಾಡಿದ್ದೇವೆ. ಉಸಿರಾಟದ ತೊಂದರೆ, ಇತರೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕಡ್ಡಾಯವಾಗಿ ಪರೀಕ್ಷೆ ಮಾಡಲಾಗುತ್ತದೆ. ಆಗ ತಿಳಿಯುತ್ತದೆ ಕೋವಿಡ್ ದಿನಕ್ಕೆ ಹೆಚ್ಚು ಇದೆಯೇ ಅಥವಾ ಕಡಿಮೆ ಇದೆಯೇ ಎಂದು. ಆಗ ಏನು ಮಾಡಬೇಕು ಎಂದು ತೀರ್ಮಾನ ಮಾಡುತ್ತೇವೆ. ಈಗ ಆ ಹಂತದಲ್ಲಿ ಇದೆ. ಗಡಿ ಭಾಗದಲ್ಲಿ ಹಾಗೂ ಯಾರ್ಯಾರ ಮೇಲೆ ಸಂಶಯ ಇದೆಯೋ ಅವರೆಲ್ಲರಿಗೂ ಟೆಸ್ಟ್ ಮಾಡಿಸುತ್ತೇವೆ

Leave a Reply

Your email address will not be published. Required fields are marked *

error: Content is protected !!