ಮಕ್ಕಳೇ ಮಾದಕ ವ್ಯಾಸನಿಗಳಾಗಬೇಡಿ ; ನಿಮ್ಮ ಕುಟುಂಬ ನಿಮ್ಮನ್ನೇ ಅವಲಂಭಿಸಿವೆ : ಎಸ್.ಪಿ. ಅಶೋಕ್

ತುಮಕೂರು – ಇಂದಿನ ದಿನದಲ್ಲಿ ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ಬಗ್ಗೆ ಜಾಗೃತರಾಗಬೇಕು ಆ ಮೂಲಕ ಮಾದಕ ವಸ್ತುಗಳ ಜಾಲಕ್ಕೆ ಬಲಿಯಾಗದಂತೆ ಎಚ್ಚರ ವಹಿಸಬೇಕು ಎಂದು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವಿ ತಿಳಿಸಿದರು.

 

 

 

ತುಮಕೂರಿನ ಸಿದ್ದಾರ್ಥ ಕಾಲೇಜಿನ ಆಡಿಟೋರಿಯಂ ನಲ್ಲಿ ತುಮಕೂರು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಮಾದಕದ್ರವ್ಯ ಜಾಗೃತ ಅಭಿಯಾನ 2023 ರನ್ನು ಉದ್ದೇಶಿಸಿ ಮಾತನಾಡಿದ ಅವರು ಇಂದಿನ ದಿನದಲ್ಲಿ ಮಾದಕ ದ್ರವ್ಯಗಳು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಕಾಳ ಸಂತೆಯಲ್ಲಿ ಸಿಗುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಮಾದಕ ದ್ರವ್ಯಗಳಿಗೆ ಮಾರುಹೋಗಿ ತಮ್ಮ ಅಮೂಲ್ಯವಾದ ವಿದ್ಯಾರ್ಥಿ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಅದನ್ನ ತಡೆಗಟ್ಟುವ ಹೀನ್ನಲೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಮಾದಕ ದ್ರವ್ಯಗಳ ಬಗ್ಗೆ ಜಾಗೃತ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು ಈ ಮೂಲಕ ವಿದ್ಯಾರ್ಥಿಗಳನ್ನೂ ಜಾಗೃತಗೊಳಿಸಲು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

 

 

ಇನ್ನು ಮಾದಕ ದ್ರವ್ಯಗಳನ್ನು ಮಾರುವುದಾಗಲಿ ಶೇಖರಣೆ ಮಾಡುವುದಾಗಲಿ( NDPS) ಕಾನೂನಿನ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದ್ದು ಇದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಹೆಚ್ಚಿನದಾಗಿ ಎಚ್ಚರ ವಹಿಸಬೇಕು ಇನ್ನು ಇಂತಹ ಮಾದಕ ದ್ರವ್ಯಗಳ ಬಗ್ಗೆ ಮಾಹಿತಿ ತಿಳಿದು ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವ ಮೂಲಕ ಮಾದಕ ದ್ರವ್ಯಗಳನ್ನ ತಡೆಗಟ್ಟಲು ವಿದ್ಯಾರ್ಥಿಗಳು ಸಹ ಇಲಾಖೆಯೊಂದಿಗೆ ಸಹಕರಿಸಿದರೆ ಮಾದಕ ದ್ರವ್ಯಗಳ ಜಾಲವನ್ನು ಬುಡ ಸಮೇತ ಕಿತ್ತು ಹಾಕಲು ಸಾಧ್ಯವಾಗುತ್ತದೆ ಎಂದರು.

 

 

ಇಂದಿನ ದಿನದಲ್ಲಿ ಹೆಚ್ಚಿನದಾಗಿ ಇಂಜಿನಿಯರಿಂಗ್ ಹಾಗೂ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳೆ ಮಾದಕ ವಸ್ತುಗಳ ಮಾರಾಟಗಾರರ ಜಾಲಕ್ಕೆ ಸಿಲುಕಿ ತಮ್ಮ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಹಾಗಾಗಿ ವಿದ್ಯಾರ್ಥಿಗಳು ಸಹ ತಮ್ಮ ವಿದ್ಯಾಭ್ಯಾಸದ ಕಡೆ ಗಮನ ಹರಿಸಿ ತಮ್ಮ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ದೇಶಕ್ಕೆ ಹಾಗೂ ಪೋಷಕರಿಗೆ ಉತ್ತಮ ಮಕ್ಕಳಾಗಿ ತಮ್ಮ ಜೀವನವನ್ನು ರೂಪಿಸಿಕೊಳ್ಳುವುದು ವಿದ್ಯಾರ್ಥಿಗಳ ಕೈಯಲ್ಲಿ ಇದೆ ಎಂದರು.

 

 

 

ಕಾರ್ಯಕ್ರಮದಲ್ಲಿ ಅಡಿಷನಲ್ ಎಸ್ಪಿ ರಾಮಚಂದ್ರಪ್ಪ, ಸಿದ್ದಾರ್ಥ ಎಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲರಾದ ರವಿಪ್ರಕಾಶ್, ಪ್ರಾಧ್ಯಾಪಕರಾದ ಸಂಜು, ಎನ್‌ಸಿಸಿ ಕ್ಯಾಪ್ಟನ್ ಜೈಪ್ರಕಾಶ್, ಸರ್ಕಲ್ ಇನ್ಸ್ಪೆಕ್ಟರ್ಗಳಾದ ರಾಮಕೃಷ್ಣಪ್ಪ, ಪುರುಷೋತ್ತಮ್, ಸಬ್ ಇನ್ಸ್ಪೆಕ್ಟರ್ಗಳಾದ ಸಂಜಯ್ ಕಾಂಬಳೆ, ಪ್ರಸನ್ನ , ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಅಭಿಯಾನದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!