ದಾವಣಗೆರೆ : ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ನಿವಾರಣೆಗಾಗಿ ಅನಿವಾರ್ಯವಾಗಿ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧೆ ನಡೆಸುತ್ತಿರುವುದಾಗಿ ದಾವಣಗೆರೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿರುವ ಲೋಕೇಶ್ ತಾಳಿಕಟ್ಟೆ ಹೇಳಿದ್ದಾರೆ.
ದಾವಣಗೆರೆಯ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಸಮಾಲೋಚನೆ ಸಭೆ ನಡೆಸಿ ಮಾತನಾಡಿದ ಲೋಕೇಶ್ ತಾಳಿಕಟ್ಟೆರವರು ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಜ್ವಲಂತ ಸಮಸ್ಯೆಗಳಿದ್ದು ಇದುವರೆಗೂ ಬಗೆಹರಿಸಲು ಸಾಧ್ಯವಾಗಿಲ್ಲ ಎಂದರಲ್ಲದೇ, ಈ ಕ್ಷೇತ್ರದಾದ್ಯಂತ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಶಿಕ್ಷಕರು ಸಮಸ್ಯೆಗಳ ನಿವಾರಣೆಗಾಗಿ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯ ತಂದಿದ್ದಾರೆ ಅದರ ಫಲವಾಗಿಯೇ ನಾನು ಈ ಭಾರಿ ಶಿಕ್ಷಕರ ಕ್ಷೇತ್ರದಿಂದ ಚುನಾವಣೆಗೆ ನಿಲ್ಲಲು ಭಯಸಿದ್ದು ಎಂದರಲ್ಲದೇ, ತಮ್ಮಗಳ ಸಹಕಾರ ಸದಾ ತನಗೆ ನೀಡಬೇಕೆಂದು ಶಿಕ್ಷಕರ ವಿಶ್ವಾಸವನ್ನು ಕೋರಿದರು.
ಇನ್ನು ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ಸಹ ನಮ್ಮ ರಾಜ್ಯಕ್ಕೆ ತನ್ನದೇ ಆದ ಶಿಕ್ಷಣ ನೀತಿ ಇಲ್ಲ, ಶಿಕ್ಷಕರ ಶಿಕ್ಷಣ ಸಂಸ್ಥೆಗಳ ಹಿತ ರಕ್ಷಣೆ ಮಾಡಬೇಕಾಗಿರುವುದು ನಮ್ಮನ್ನಾಳುವ ಸರ್ಕಾರಗಳ ಪ್ರಮುಖ ಜವಾಬ್ದಾರಿಯಾಗಿದೆ, ಶಿಕ್ಷಕರ ಪ್ರತಿನಿಧಿಗಳಾದ ವಿಧಾನ ಪರಿಷತ್ ಸದಸ್ಯರು ಕೇವಲ ರಾಜಕಾರಣ ಮಾಡಿಕೊಂಡು ಬಂದಿರುವುದು ವಿಪರ್ಯಾಸವೇ ಸರಿ ಎಂದು ಹೇಳಿದರು ಜೊತೆಗೆ ಶಿಕ್ಷಕರ ಕ್ಷೇತ್ರವನ್ನು ಶಿಕ್ಷಕರ ಪ್ರತಿನಿಧಿಸಬೇಕು ಹೊರತು, ರಾಜಕಾರಣಿಗಳಲ್ಲ ಕಳೆದ ನಾಲ್ಕು ವರ್ಷಗಳಿಂದ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟ ನಡೆಸಿದ್ದು ಬಹುತೇಕ ಸಫಲತೆಯನ್ನು ಕಂಡಿದ್ದೇನೆ ಎಂದು ತಮ್ಮ ಅನುಭವನ್ನು ಹಂಚಿಕೊಂಡರು.
ಈ ಕಾರಣದಿಂದಾಗಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಶಿಕ್ಷಕರು ನನ್ನನ್ನು ತಾವೇ ಸ್ವತಃ ಸ್ಪರ್ಧೆಗೆ ಆಯ್ಕೆ ಮಾಡಿ ಮುನ್ನೆಲೆಗೆ ತಂದಿದ್ದಾರೆ, ನನ್ನದು ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿಗಳ ಪಕ್ಷವೇ ಹೊರತು ಯಾವುದೇ ರಾಜಕೀಯ ಪಕ್ಷ ಅಲ್ಲ ಆದುದರಿಂದ ಈ ಭಾರಿಯ ಚುನಾವಣೆಯಲ್ಲಿ ನನ್ನನ್ನು ಆಯ್ಕೆ ಮಾಡುವುದರಿಂದ ಒಬ್ಬ ಪ್ರಾಮಾಣಿಕ ಶಿಕ್ಷಕನಾಗಿ ಶಿಕ್ಷಕರ ಒಳಿತಿಗಾಗಿ ಮಾಡಬೇಕಾದ ಕಾರ್ಯವನ್ನು ಮಾಡಲು ನಾನು ಸಿದ್ಧನಿದ್ದೇನೆಂದು ತಿಳಿಸಿದರು.
ಈ ವೇಳೆ ದಾವಣಗೆರೆ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಒಕ್ಕೂಟದ ಮುಖ್ಯಸ್ಥರಾದ ಉಮಾಪತಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.