ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಬಾಲಕರ ಹಾಸ್ಟಲ್ ನಲ್ಲಿ ಓರ್ವ ಯುವಕ ಆತ್ಮಹತ್ಯೆಗೆ ಶರಣು !

ತುಮಕೂರು : ನಗರದ ಹನುಮಂತಪುರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಬಾಲಕರ ಹಾಸ್ಟಲ್ ನಲ್ಲಿ ವಿದ್ಯಾರ್ಥಿ ಓರ್ವ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ವರದಿಯಾಗಿದೆ.

 

 

ಆತ್ಮಹತ್ಯೆಗೆ ಶರಣಾದ ಯುವಕನನ್ನು ಪಾವಗಡ ಮೂಲದ ಸುಮಾರು 20 ವರ್ಷದ ಅಂಜನ್ ಕುಮಾರ್ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು, ಮೃತ ವಿದ್ಯಾರ್ಥಿಯು ನಗರದ ಕಾಲೇಜೊಂದರಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದ್ದು,  ಸಾವಿಗೆ ನಿಖರವಾದ ಕಾರಣ ಇನ್ನೂ ಹೊರ ಬಂದಿಲ್ಲ.

 

ಪೊಲೀಸರ ತನಿಖೆಯಿಂದಷ್ಟೇ ಸಾವಿಗೆ ನಿಖರ ಕಾರಣ ಹೊರ ಬರಬೇಕಿದೆ.

Leave a Reply

Your email address will not be published. Required fields are marked *

error: Content is protected !!