ಇತ್ತೀಚಗೆ ತುಮಕೂರು ಜಿಲ್ಲೆಯಲ್ಲಿರುವ ಕ್ರಷರ್ ಗಳಲ್ಲಿ ಮರಣ ಪ್ರಮಾಣ ಹೆಚ್ಚಾಗಿದೆ ; ಕೈ ಕಟ್ಟಿ ಕೂತರೇ ಅಧಿಕಾರಿಗಳು

ತುಮಕೂರು : ಕ್ರಷರ್ ಮಾಲೀಕನ ಬೇಜವಾಬ್ದಾರಿಗೆ ಎರಡು ಜೀವ ಬಲಿಯಾಗಿವೆ. ಬಂಡೆ ಬ್ಲಾಸ್ಟ್ ಆಗಿ ಬಿಹಾರ ಮೂಲದ ಇಬ್ಬರು ಕಾರ್ಮಿಕರು ಧಾರುಣವಾಗಿ ಸಾವಿಗೀಡಾಗಿರುವ ಘಟನೆ ತುಮಕೂರು ತಾಲ್ಲೂಕು ಕೌತಮಾರನಹಳ್ಳಿಯಲ್ಲಿ ನಡೆದಿದೆ.

 

 

ಕೌತಮಾರನಹಳ್ಳಿ ಸಮೀಪವಿರುವ ಕರ್ನಾಟಕ ಸ್ಟೋನ್ ಕ್ರಷರ್‌ನಲ್ಲಿ ಬಂಡೆ ಸ್ಫೋಟಿಸುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು ಇಬ್ಬರು ಕಾರ್ಮಿಕರು ಸ್ಥಳದಲ್ಲಿಯೇ ಮೃತರಾಗಿದ್ದು, ಮತ್ತೊಬ್ಬನಿಗೆ ತೀವ ಗಾಯಗಳಾಗಿದೆ. ಬಿಹಾರ ಮೂಲದ ಮೊಹಮ್ಮದ್ ಅಬೂಲ್(29) ಹಾಗೂ ಛತ್ತೀಸ್‌ಗಡ ಮೂಲದ ಮೋನು (24) ಮೃತರು. ತುಮಕೂರಿನ ಹನೀಫ್ ಎಂಬುವವರಿಗೆ ಸೇರಿದ ಕರ್ನಾಟಕ ಸ್ಟೋನ್ ಕ್ರಷರ್‌ನಲ್ಲಿ ಮಂಗಳವಾರ ಈ ದುರ್ಘಟನೆ ನಡೆದಿದೆ.

 

ಗಾಯಾಳು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ.

 

 

ಬಡಪಾಯಿಗಳ ಜೀವಕ್ಕೆ ಬೆಲೆಯೇ ಇಲ್ಲ…..

ತುಮಕೂರು ತಾಲ್ಲೂಕು ವ್ಯಾಪ್ತಿಯಲ್ಲಿ 30 ಕ್ಕೂ ಹೆಚ್ಚು ಕ್ರಷರ್ಗಳಿದ್ದು ಬಹುತೇಕ ಹೊರರಾಜ್ಯದ ಕಾರ್ಮಿಕರೇ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಾರೆ, ಆದರೆ ಬಹುತೇಕ ಕ್ರಷರ್ ಮಾಲೀಕರು ಸುರಕ್ಷತಾ ಸಾಧನ ನೀಡುವುದೇ ಇಲ್ಲ,ಅಲ್ಲದೆ ಕಾರ್ಮಿಕ ಇಲಾಖೆಯೂ ಸಹ ಈ ಬಗ್ಗೆ ಗಮನ ಹರಿಸುವುದಿಲ್ಲ, ಗಣಿ ಮತ್ತು ಭೂ ವಿಜ್ಙಾನ ಇಲಾಖೆ ನಿಗದಿ ಪಡಿಸುವ ಮಾನದಂಡ ಉಲ್ಲಂಘಿಸಿ ಬಂಡೆ ಕೊರೆಯುತ್ತಿರುವುದರಿಂದ ಇಂತಹ ಅವಘಡಗಳು ಸರ್ವೇ ಸಾಮಾನ್ಯ ವಾಗುತ್ತಿವೆ ಇತ್ತೀಚೆಗಷ್ಟೇ ಅಮಲಾಪುರ ಬಳಿ ಇರುವ ಅಕ್ಷಯ ಸ್ಟೋನ್ ಕ್ರಷರ್ ನಲ್ಲಿ ಬಂಡೆ ಕೊರೆಯುವ ವೇಳೆ ಕಾರ್ಮಿಕ ಬಿದ್ದು ಮೃತಪಟ್ಟಿದ್ದ, ಇದೀಗ ಈ ದುರ್ಘಟನೆ ನಡೆದಿದೆ,ಕ್ರಷರ್ ಮಾಲೀಕರು ಬಹುತೇಕ ಪ್ರಭಾವಿಗಳಾಗಿದ್ದು ಪೊಲೀಸರು ಹಾಗ ಅಧಿಕಾರಿಗಳ ಜೇಬು ತುಂಬಿಸಿ ಪ್ರಕರಣ ಮುಚ್ಚಿ ಹಾಕುತ್ತಿದ್ದು ಬಡಪಾಯಿಗಳ ಜೀವಕ್ಕೆ ಬೆಲೆಯೇ ಇಲ್ಲವಾಗಿದೆ.

Leave a Reply

Your email address will not be published. Required fields are marked *

error: Content is protected !!