ಅತಿಥಿ ಉಪನ್ಯಾಸಕರ ಬೇಡಿಕೆಗೆ ಅಸ್ತು ಎಂದಿರುವ ಸರ್ಕಾರದ ನಿಲುವಿಗೆ ಶ್ಲಾಘನೆ ವ್ಯಕ್ತಪಡಿಸಿದ : ಲೋಕೇಶ್ ತಾಳಿಕಟ್ಟೆ

ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳ ಮತ್ತು ಇನ್ನಿತರೆ ಕೆಲವು ಸೌಲಭ್ಯಗಳನ್ನು ವಿಸ್ತರಿಸಲು ಸಮ್ಮತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಅತಿಥಿ ಉಪನ್ಯಾಸಕರು ಕೂಡಲೇ ಮುಷ್ಕರ ಹಿಂಪಡೆದು: ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದರು. ಈ ಈ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರು ಮುಷ್ಕರ ಹಿಂಪಡೆದಿದ್ದು ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

 

 

 

ಶನಿವಾರ ಮುಷ್ಕರನಿರತ ಅತಿಥಿ ಉಪನ್ಯಾಸಕರ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಬೇಡಿಕೆಗಳ ಕುರಿತು ಚರ್ಚಿಸಿದರು. ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ ಎಂದರು. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ತಾವು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದನ್ನು ಸ್ಮರಿಸಿಕೊಂಡ ಮುಖ್ಯಮಂತ್ರಿಗಳು, ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ನಿಮ್ಮ ವೇತನ ಹೆಚ್ಚಳಕ್ಕೆ ಮುಂದಾಗಿದೆ. ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ ಎಂದು ತಿಳಿಸಿದರು. ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ ೮ ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ದವಿದೆ ಎಂದು ತಿಳಿಸಿದರು.

 

 

ಇನ್ನು ಈ ಕುರಿತು ಮಾದ್ಯಮದವರೊಂದಿಗೆ ಮಾತನಾಡಿದ ಆಗ್ನೇಯ ಶಿಕ್ಷಕರ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ ಹಾಗೂ ರೂಪ್ಸಾ ಅಧ್ಯಕ್ಷರಾದ ಲೋಕೇಶ್ ತಾಳಿಕಟ್ಟೆರವರು ಅತಿಥಿ ಉಪನ್ಯಾಸಕರು ಕಳೆದ ಒಂದೂವರೆ ತಿಂಗಳಿನಿಂದ ವಿವಿಧ ರೀತಿಯಲ್ಲಿ ಪ್ರತಿಭಟನೆಯನ್ನು ನಡೆಸಿದರು, ಆಗ ಕೇಳದ ಸರ್ಕಾರ ಕಳೆದವಾರ ಸಿದ್ಧಗಂಗಾ ಪುಣ್ಯಕ್ಷೇತ್ರದ ಪೂಜ್ಯ ಶ್ರೀ ಸಿದ್ಧಲಿಂಗ ಸ್ವಾಮಿಗಳವರಿಂದ ಪಾದಯಾತ್ರೆಗೆ ಚಾಲನೆ ಪಡೆದು ಬೆಂಗಳೂರಿನ ಫ್ರೀಡಂ ಪಾರ್ಕ್‌ಗೆ ಬಂದ ನಮ್ಮ ಅತಿಥಿ ಉಪನ್ಯಾಸಕರಿಗೆ ಇದೀಗ ಆಶ್ವಾಸನೆ ಸಿಕ್ಕಿದೆ, ಇಂತಹ ಸುದೀರ್ಘ ಅವಧಿಯ ಹೋರಾಟಕ್ಕೆ ಸಂದ ಜಯವಾಗಿದೆಂದು ತಿಳಿಸಿದರು.

 

ಇನ್ನು ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ. ಗಳ ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60ವರ್ಷ ಮೀರಿದ ನಂತರದಲ್ಲಿ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂ. ಇಡಿಗಂಡು ನೀಡುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವುದು ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿರುವುದು ಸ್ವಾಗಾತರ್ಹ ವಿಷಯವಾಗಿದ್ದು ಬಹುತೇಕ ಅತಿಥಿ ಉಪನ್ಯಸಕರುಗಳಿಗೂ ಸಹ ಇದರಿಂದ ಸತ್ಯಕ್ಕೆ ಮತ್ತು ತಮ್ಮ ಹೋರಾಟಕ್ಕೆ ಸಂದ ಜಯವಾಗಿದೆಂದು ಹೇಳಿಕೊಂಡಿದ್ದಾರೆಂದು ಲೋಕೇಶ್ ತಾಳಿಕಟ್ಟೆರವರು ತಿಳಿಸಿದರು.

 

 

 

ಇನ್ನು ನಮ್ಮ ಸರ್ಕಾರದಲ್ಲಿ ಸ್ವಯಂ ಶಿಕ್ಷಕರು ಯಾರೂ ಸಹ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗದೇ ಇರುವುದೇ ಇಷ್ಟೇಲ್ಲಾ ಸಮಸ್ಯೆಗಳಿಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ತಮ್ಮನ್ನು ಶಿಕ್ಷಕರ ಕ್ಷೇತ್ರದಿಂದ ಆಯ್ಕೆ ಮಾಡುವುದರೊಂದಿಗೆ ಶಿಕ್ಷಕರ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಹೋರಾಟ ಮಾಡಿ ಸರ್ವ ಶಿಕ್ಷಕರಿಗೆ ನ್ಯಾಯ ಒದಗಿಸಿಕೊಡುವ ನಿಟ್ಟಿನಲ್ಲಿ ನಿಲ್ಲುವುದಾಗಿ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!